Just In
Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Sports
ಭಾರತೀಯರ ನಿಂದಿಸಿದ ಕಿಡಿಗೇಡಿಗಳ ಕಂಡುಹಿಡಿಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ವಿಫಲ
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Movies
ಎಸ್ಎಸ್ ರಾಜಮೌಳಿ ನಿರ್ಧಾರಕ್ಕೆ ಬೇಸರಗೊಂಡ ನಿರ್ಮಾಪಕ ಬೋನಿ ಕಪೂರ್
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಯುರೋಪ್ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ಮೇಡ್ ಇನ್ ಇಂಡಿಯಾ ಮಿಟಿಯೊರ್ 350
ದೇಶಿಯ ಮಾರುಕಟ್ಟೆಯಲ್ಲಿ ಮಿಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆಯ ನಂತರ ವಿದೇಶಿ ಮಾರುಕಟ್ಟೆಗಳಿಗೂ ಹೊಸ ಬೈಕ್ ಪರಿಚಯಿಸಲು ಭರ್ಜರಿ ಸಿದ್ದತೆ ನಡೆಸಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ಯುಎಸ್ಎ ಮತ್ತು ಯುರೋಪ್ ಮಾರುಕಟ್ಟೆಗಳಲ್ಲೂ ಮೇಡ್ ಇನ್ ಇಂಡಿಯಾ ನಿರ್ಮಾಣದ ಮಿಟಿಯೊರ್ ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಮಿಟಿಯೊರ್ 350 ಬಿಡುಗಡೆಯ ನಂತರ ಕಳೆದ ತಿಂಗಳ ಹಿಂದಷ್ಟೇ ಥೈಲ್ಯಾಂಡ್‌ನಲ್ಲಿ ಹೊಸ ಬೈಕ್ ಬಿಡುಗಡೆ ಮಾಡಲಾಗಿದ್ದು, ಇದೀಗ ಯುಎಸ್ಎ ಮತ್ತು ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಮಿಟಿಯೊರ್ 350 ರಸ್ತೆಗಿಳಿಸಲು ಸಿದ್ದತೆ ನಡೆಸಲಾಗಿದೆ. ಭಾರತ ಸೇರಿದಂತೆ ವಿಶ್ವದ ಪ್ರಮುಖ 50 ರಾಷ್ಟ್ರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ರೂಸರ್ ಬೈಕ್ ಮೂಲಕ ಮತ್ತಷ್ಟು ಜನಪ್ರಿಯತೆ ಗಳಿಸುವ ತವಕದಲ್ಲಿದೆ.

ಭಾರತದಲ್ಲಿ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.75 ಲಕ್ಷದಿಂದ ರೂ. 1.81 ಲಕ್ಷ ಬೆಲೆ ಪಡೆದುಕೊಂಡಿದ್ದು, ಯುಎಸ್ಎ ಮತ್ತು ಯುರೋಪ್‌ನಲ್ಲಿ ಬಿಡುಗಡೆಯಾಗಲಿರುವ ಹೊಸ ಬೈಕ್ ಮಾದರಿಯು ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಲಿದೆ.

ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದೆ.

ಹೊಸ ಬೈಕಿನ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ನೀಡಲಾಗಿದೆ. ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್‌ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಎಂಜಿನ್ ಮತ್ತು ಪರ್ಫಾಮೆನ್ಸ್
ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.