ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಫಸ್ಟ್ ರೈಡ್ ರಿವ್ಯೂ ವಿಡಿಯೋ

ರಾಯಲ್ ಎನ್‌ಫೀಲ್ಡ್ ಕಂಪನಿಯು ಗ್ರಾಹಕರ ಬೇಡಿಕೆಗೆ ಹೊಸ ಬೈಕ್ ಉತ್ಪನ್ನಗಳ ಮಾರಾಟದಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ವಿಭಿನ್ನ ಬೈಕ್ ಮಾದರಿಯಾಗಿ ಗುರುತಿಸಿಕೊಂಡಿದೆ. ಥಂಡರ್‌ಬರ್ಡ್ ಮಾರಾಟ ಸ್ಥಗಿತ ನಂತರ ಹೊಸ ತಂತ್ರಜ್ಞಾನ ಪ್ರೇರಿತ ಮತ್ತು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಥಂಡರ್‌ಬರ್ಡ್ ಸ್ಥಾನಕ್ಕೆ ಮಿಟಿಯೊರ್ 350 ಕ್ರೂಸರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಫಸ್ಟ್ ರೈಡ್ ರಿವ್ಯೂ ವಿಡಿಯೋ..

ಸುಮಾರು 18 ವರ್ಷಗಳ ಕಾಲ ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ಬದಲಾವಣೆಗಳೊಂದಿಗೆ ಮಾರಾಟದಲ್ಲಿ ಮುಂದುವರಿದ್ದ ಥಂಡರ್‌ಬರ್ಡ್ ಮಾದರಿಯನ್ನು ಕಳೆದ ಮಾರ್ಚ್‌ನಲ್ಲಿ ಮಾರಾಟ ಸ್ಥಗಿತಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಮತ್ತು ಹೊಸ ಎಂಜಿನ್ ಪ್ರೇರಿತ ಮಿಟಿಯೊರ್ 350 ಆವೃತ್ತಿಯನ್ನು ಬಿಡುಗಡೆಗೊಳಿಸಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಣೆ ಮತ್ತು ನವೀಕೃತ ವಿನ್ಯಾಸ ಹೊಂದಿರುವ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಆಕರ್ಷಕವಾಗಿದ್ದು, ಇತ್ತೀಚೆಗೆ ಡ್ರೈವ್‌ಸ್ಪಾರ್ಕ್ ತಂಡವು ಹೊಸ ಬೈಕಿನ ಕಾರ್ಯಕ್ಷಮತೆ ಕುರಿತಾಗಿ ಫಸ್ಟ್ ರೈಡಿಂಗ್ ಕೈಗೊಂಡಿತ್ತು.

ಹೊಚ್ಚ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಅರ್ಬನ್ ಸ್ಟೈಲ್ ಹೊಂದಿರುವ ಕ್ರೂಸರ್ ಮಾದರಿಯಾಗಿದ್ದು, ಕ್ರೂಸರ್ ಬೈಕ್ ಮಾದರಿಯಲ್ಲೇ ಅತ್ಯುತ್ತಮ ಮಾದರಿಯಾಗಿದೆ. ಹಾಗೆಯೇ ಹೊಸ ಬೈಕಿನಲ್ಲಿ ಹೊಸ ಎಂಜಿನ್ ಆಯ್ಕೆ ಪ್ರಮುಖ ಆಕರ್ಷಣೆಯಾಗಿದ್ದು, ಎಂಜಿನ್ ಕಂಪನ ಸಮಸ್ಯೆಯು ಸಾಕಷ್ಟು ಸುಧಾರಣೆಗೊಂಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಫಸ್ಟ್ ರೈಡ್ ರಿವ್ಯೂ ವಿಡಿಯೋ..

ಹೊಚ್ಚ ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹಲವಾರು ಹೊಸ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ನ್ಯಾವಿಗೇಷನ್‌ಗಾಗಿ ಟಿಪ್ಪರ್ ಮೀಟರ್, ಸ್ವಿಚ್‌ಗೇರ್ ಸೌಲಭ್ಯವು ಪ್ರಮುಖ ಫೀಚರ್ಸ್‌ಗಳಾಗಿವೆ.

ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಫಸ್ಟ್ ರೈಡ್ ರಿವ್ಯೂ ವಿಡಿಯೋ..

ಹೊಸ ಬೈಕ್ ಮಾದರಿಯನ್ನು ಗ್ರಾಹಕರು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ವೆರಿಯೆಂಟ್‌ಗಳಲ್ಲಿ ಖರೀದಿಸಬಹುದಾಗಿದ್ದು, ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ರೂ.2.18 ಲಕ್ಷ (ಫೈರ್‌ಬಾಲ್), ರೂ. 2.36 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್‌ನೊವಾ) ಮಾದರಿಯು ರೂ. 2.25 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Royal Enfield New Meteor 350 Review Video. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X