ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ 2020ರ ಜುಲೈ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳ ಮಾರಾಟದ ವರದಿಯ ಪ್ರಕಾರ, ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ತಿಂಗಳು ಶೇ.23 ರಷ್ಟು ಕುಸಿತವನ್ನು ಕಂಡಿದೆ.

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಕಳೆದ ವರ್ಷದ ಜುಲೈ ತಿಂಗಳಲ್ಲಿ ಒಟ್ಟು 49,182 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇನ್ನು ಈ ವರ್ಷದ ಜುಲೈ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 37,925 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟವನ್ನು ಈ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಶೇ.26 ರಷ್ಟು ಕುಸಿತವನ್ನು ದಾಖಲಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜುಲೈ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 5,003 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಆದರೆ ಈ ವರ್ಷದ ಜುಲೈ ತಿಂಗಳಲ್ಲಿ 2,409 ಯುನಿಟ್‌ಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜುಲೈ ತಿಂಗಳ ರಾಯಲ್ ಎನ್‌ಫೀಲ್ಡ್ ಕಂಪನಿಯ ರಫ್ತಿಗೆ ಈ ವರ್ಷದ ಜುಲೈ ತಿಂಗಳ ರಫ್ತನ್ನು ಹೋಲಿಸಿದರೆ ಶೇ.52 ರಷ್ಟು ಕುಸಿತವನ್ನು ದಾಖಲಿಸಲಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಕರೋನಾ ವೈರಸ್ ನಿಂದಾಗಿ ಆಟೋಮೊಬೈಲ್ ಕ್ಷೇತ್ರಕ್ಕೆ ದೊಡ್ಡ ಪರಿಣಾಮವನ್ನು ಬೀರಿದೆ. ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಮಾರಾಟದಲ್ಲಿ ಯಶ್ವಸಿಯನ್ನು ಕಂಡಿದರೆ ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಇತ್ತೀಚೆಗೆ ನಿಧಾನವಾಗಿ ಚೇತರಿಕೆಯನ್ನು ಕಾಣುತ್ತವೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಇನ್ನು ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ ಬೈಕನ್ನು ಜೂನ್ ತಿಂಗಳಲ್ಲಿ ವರದಿಗಳಾಗಿತ್ತು. ಆದರೆ ಕಾರೋನ ಸೋಂಕಿನ ಭೀತಿಯಿಂದ ಈ ಬೈಕಿನ ಬಿಡುಗಡೆಯು ತಡವಾಗಿದೆ. ಶೀಘ್ರದಲ್ಲೇ ಈ ಮೆಟಿಯೋರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಬಹುದು ಎಂದು ನಿರೀಕ್ಷ್ಜಿಸುತ್ತೇವೆ.ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.

ಜುಲೈ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಭಾರತದಲ್ಲಿ ಆರೇಳು ದಶಕಗಳಿಂದಲೂ ಅದೇ ಕ್ರೇಜ್‌, ಅದೇ ಟ್ರೆಂಡ್‌ ಉಳಿಸಿಕೊಂಡು ಬಂದಿರುವುದು ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಹೆಗ್ಗಳಿಕೆ. ಆದರೆ ಕರೋನಾ ಸೋಂಕಿನಿಂದಾಗಿ ರಾಯಲ್‌ ಎನ್‌ಫೀಲ್ಡ್‌ ಬೈಕುಗಳ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಮುಂದಿನ ದಿನಗಳಲ್ಲಿ ರಾಯಲ್‌ ಎನ್‌ಫೀಲ್ಡ್‌ ಬೈಕುಗಳ ಮಾರಾಟದಲ್ಲಿ ಏರಿಕೆ ಕಾಣಬಹುದು ಎದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Royal Enfield Registers 23 Percent Sales Decline For July In India Details. Read In Kannada.
Story first published: Monday, August 3, 2020, 10:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X