ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ರಾಯಲ್ ಎನ್‌ಫೀಲ್ಡ್
ರಾಯಲ್ ಎನ್ಫೀಲ್ಡ್ ಕಂಪನಿಯು ಕಳೆದ ಜೂನ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ಜೂನ್ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಮಾರಾಟದಲ್ಲಿ ಶೇ.34 ರಷ್ಟು ಕುಸಿತವನ್ನು ಕಂಡಿದೆ.

ಕರೋನಾ ವೈರಸ್ ನಿಂದಾಗಿ ಆಟೋಮೊಬೈಲ್ ಕ್ಷೇತ್ರಕ್ಕೆ ದೊಡ್ಡ ಪರಿಣಾಮವನ್ನು ಬೀರಿದೆ. ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಮಾರಾಟದಲ್ಲಿ ಯಶ್ವಸಿಯನ್ನು ಕಂಡಿದರೆ ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಮುಚ್ಚುವ ಹಾದಿಗೆ ತಲುಪಿದೆ. ಏಪ್ರಿಲ್ ತಿಂಗಳಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು ತಮ್ಮ ಕಾರ್ಯಚರನೆಯನ್ನು ಸ್ಥಗಿತಗೊಳಿಸಿದ್ದರು. ಇದರಿಂದಾಗಿ ಏಪ್ರಿಲ್ ತಿಂಗಳಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 91 ಯುನಿಟ್ ಗಳನ್ನು ಮಾರಾಟ ಮಾಡಿವೆ.

ಕಳೆದ ಜೂನ್ ತಿಂಗಳಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು ಒಟ್ಟು 38,065 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಜೂನ್ ತಿಂಗಳಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 58,339 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಕಳೆದ ವರ್ಷದ ಜೂನ್ ತಿಂಗಳ ಮಾರಾಟವನ್ನು ಈ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಶೇ.34 ರಷ್ಟು ಕುಸಿತವನ್ನು ಕಂಡಿದೆ. ಆದರೆ ಕರೋನಾ ವೈರಸ್ ಭೀತಿಯ ನಡುವೆ ರಾಯಲ್ ಎನ್ಫೀಲ್ಡ್ ಕಂಪನಿಯು ಇಷ್ಟು ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ.

ಇನ್ನು ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಮುಂದಿನ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಅಲ್ಲದೇ ಮುಂದಿನ ತಿಂಗಳು ಶೋರೂಂಗಳಿಗೆ ಈ ಹೊಸ ಬೈಕ್ ತಲುಪಲಿದೆ. ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ.

ಈ ಬೈಕಿನಲ್ಲಿ ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಈ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

ಈಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.


Click it and Unblock the Notifications