Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್
ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟ ನಿಧಾನವಾಗಿ ಚೇತರಿಕೆಯ ಹಾದಿಯಲ್ಲಿ ಸಾಗುತ್ತಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ 2020ರ ನವೆಂಬರ್ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ.

ರಾಯಲ್ ಎನ್ಫೀಲ್ಡ್ ಕಂಪನಿಯು ವಾರ್ಷಿಕ ಮಾರಾಟದಲ್ಲಿ ಶೇ.6 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 63,782 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 60,411 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ರಾಯಲ್ ಎನ್ಫೀಲ್ಡ್ ಕಂಪನಿಯು 2020ರ ನವೆಂಬರ್ ತಿಂಗಳಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು 59,084 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2019ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 58,292 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2019ರ ನವೆಂಬರ್ ನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 2,119 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇನ್ನು 2020ರ ನವೆಂಬರ್ ತಿಂಗಳಿನಲ್ಲಿ 4,698 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷದ ರಫ್ತಿಗೆ ಹೋಲಿಸಿದರೆ ಶೇ.122 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2020ರ ಏಪ್ರಿಲ್ - ನವೆಂಬರ್ ತಿಂಗಳುಗಳ ನಡುವೆ ರಾಯಲ್ ಎನ್ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯ ಮಾರಾಟ ಮತ್ತು ರಫ್ತಿನಲ್ಲಿ ಭಾರಿ ಕುಸಿತ ಕಂಡಿದೆ. ಕಂಪನಿಯ ದೇಶೀಯ ಮಾರಾಟವು ಕಳೆದ ವರ್ಷ 4.53 ಲಕ್ಷದಿಂದ 3.18 ಲಕ್ಷ ಯುನಿಟ್‌ಗಳಿಗೆ ಕುಸಿತವನ್ನು ಕಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ರಾಯಲ್ ಎನ್‌ಫೀಲ್ಡ್ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಕ್ಲಾಸಿಕ್ 350 ಕೂಡ ಒಂದಾಗಿದೆ. ಈ ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಮತ್ತು ಹೆಚ್ಚುವರಿಯಾಗಿ ಎರಡು ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಮೆಟಲ್ಲೊ ಸಿಲ್ವರ್ ಮತ್ತು ಆರೆಂಜ್ ಎಂಬರ್ ಎಂಬ ಎರಡು ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.83 ಲಕ್ಷಗಳಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳು ಹೊಸ ಫೀಚರ್ ಅನ್ನು ಪಡೆದುಕೊಳ್ಳಲಿದೆ. ಈ ಟ್ವಿನ್ ಬೈಕುಗಳಲ್ಲಿ ಟ್ರಿಪ್ಪರ್ ಎಂಬ ಪ್ರತ್ಯೇಕ ಪಾಡ್ ಮೂಲಕ ಬ್ಲೂಟೂತ್ ಮತ್ತು ನ್ಯಾವಿಗೇಷನ್ ಅಸಿಸ್ಟ್ ಫೀಚರ್ ಅನ್ನು ಪಡೆದುಕೊಳ್ಳಲಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ಈ ಪೀಚರ್ ಅನ್ನು ಮೊದಲ ಬಾರಿಗೆ ನಿನ್ನೆ ಬಿಡುಗಡೆಗೊಂಡ ಮಿಟಿಯೊರ್ 350 ಬೈಕಿನಲ್ಲಿ ನೀಡಲಾಗಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟ ನಿಧಾನವಾಗಿ ಚೇತರಿಕೆಯನ್ನು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ರಾಯಲ್ ಎನ್‌ಫೀಲ್ಡ್ ಬೈಕುಗಳ ಮಾರಾಟದಲ್ಲಿ ಮತ್ತಷ್ಟು ಚೇತರಿಕೆಯನ್ನು ಕಾಣುವ ಸಾಧ್ಯತೆಗಳಿದೆ.