ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟ ನಿಧಾನವಾಗಿ ಚೇತರಿಕೆಯ ಹಾದಿಯಲ್ಲಿ ಸಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ 2020ರ ನವೆಂಬರ್ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ.

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ವಾರ್ಷಿಕ ಮಾರಾಟದಲ್ಲಿ ಶೇ.6 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 63,782 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 60,411 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು 2020ರ ನವೆಂಬರ್ ತಿಂಗಳಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು 59,084 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2019ರ ನವೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 58,292 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

2019ರ ನವೆಂಬರ್‌ ನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 2,119 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇನ್ನು 2020ರ ನವೆಂಬರ್ ತಿಂಗಳಿನಲ್ಲಿ 4,698 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷದ ರಫ್ತಿಗೆ ಹೋಲಿಸಿದರೆ ಶೇ.122 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

2020ರ ಏಪ್ರಿಲ್ - ನವೆಂಬರ್ ತಿಂಗಳುಗಳ ನಡುವೆ ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯ ಮಾರಾಟ ಮತ್ತು ರಫ್ತಿನಲ್ಲಿ ಭಾರಿ ಕುಸಿತ ಕಂಡಿದೆ. ಕಂಪನಿಯ ದೇಶೀಯ ಮಾರಾಟವು ಕಳೆದ ವರ್ಷ 4.53 ಲಕ್ಷದಿಂದ 3.18 ಲಕ್ಷ ಯುನಿಟ್‌ಗಳಿಗೆ ಕುಸಿತವನ್ನು ಕಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಕ್ಲಾಸಿಕ್ 350 ಕೂಡ ಒಂದಾಗಿದೆ. ಈ ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಮತ್ತು ಹೆಚ್ಚುವರಿಯಾಗಿ ಎರಡು ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಮೆಟಲ್ಲೊ ಸಿಲ್ವರ್ ಮತ್ತು ಆರೆಂಜ್ ಎಂಬರ್ ಎಂಬ ಎರಡು ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.83 ಲಕ್ಷಗಳಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳು ಹೊಸ ಫೀಚರ್ ಅನ್ನು ಪಡೆದುಕೊಳ್ಳಲಿದೆ. ಈ ಟ್ವಿನ್ ಬೈಕುಗಳಲ್ಲಿ ಟ್ರಿಪ್ಪರ್ ಎಂಬ ಪ್ರತ್ಯೇಕ ಪಾಡ್ ಮೂಲಕ ಬ್ಲೂಟೂತ್ ಮತ್ತು ನ್ಯಾವಿಗೇಷನ್ ಅಸಿಸ್ಟ್ ಫೀಚರ್ ಅನ್ನು ಪಡೆದುಕೊಳ್ಳಲಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ಈ ಪೀಚರ್ ಅನ್ನು ಮೊದಲ ಬಾರಿಗೆ ನಿನ್ನೆ ಬಿಡುಗಡೆಗೊಂಡ ಮಿಟಿಯೊರ್ 350 ಬೈಕಿನಲ್ಲಿ ನೀಡಲಾಗಿದೆ.

ನವೆಂಬರ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕುಗಳ ಮಾರಾಟ ನಿಧಾನವಾಗಿ ಚೇತರಿಕೆಯನ್ನು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ರಾಯಲ್ ಎನ್‌ಫೀಲ್ಡ್ ಬೈಕುಗಳ ಮಾರಾಟದಲ್ಲಿ ಮತ್ತಷ್ಟು ಚೇತರಿಕೆಯನ್ನು ಕಾಣುವ ಸಾಧ್ಯತೆಗಳಿದೆ.

Most Read Articles

Kannada
English summary
Bike Sales Report For November 2020 In Kananda. Read In Kannada.
Story first published: Thursday, December 3, 2020, 12:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X