ಅಮೆರಿಕಾ ಮಾರುಕಟ್ಟೆಗೂ ಲಗ್ಗೆ ಇಡಲಿದೆ ರಾಯಲ್ ಎನ್‌ಫೀಲ್ಡ್‌ನ ಈ ಹೊಸ ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಬಿಎಸ್-6 ಹಿಮಾಲಯನ್ ಬೈಕ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ರಾಯಲ್ ಎನ್‍ಫೀಲ್ಡ್ ಕಂಪನಿಯು 2020ರ ಹಿಮಾಲಯನ್ ಬೈಕನ್ನು ಅಮೆರಿಕಾದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ರಾಯಲ್ ಎನ್‍ಫೀಲ್ಡ್ ಕಂಪನಿಯು 2020ರ ಹಿಮಾಲಯನ್ ಬೈಕನ್ನು ಅಮೆರಿಕಾದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಇನ್ನು ನಾಳೆಯಿಂದ ಅಮೆರಿಕಾದಲ್ಲಿ ಈ ಅಡ್ವೆಂಚರ್ ಟೂರರ್ ಗಾಗಿ ಅರ್ಡರ್ ಪಡೆಯಲು ಪ್ರಾರಂಭಿಸಬಹುದು. ಭಾರತೀಯ ಮಾರುಕಟ್ಟೆಯಲ್ಲಿರುವ ಅದೇ ಮಾದರಿಯ ಹಿಮಾಲಯನ್ ಬೈಕ್ ಅಮೆರಿಕದಲ್ಲಿ ಬಿಡುಗಡೆಯಾಗಲಿದೆ. ಭಾರತದಿಂದ ರಫ್ತು ಮಾಡಲಿರುವ ಹಿಮಾಲಯನ್ ಬೈಕುಗಳು ಇಲ್ಲಿ ಮಾರಾಟವಾದ ಮಾದರಿಯಂತೆಯೇ ಇರುತ್ತದೆ.

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

2020ರ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍‍ನ ಮೇಲಿರುವ ರಾಕ್ ರೆಡ್ ಅಸೆಂಟ್‍‍‍ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈ‍‍‍ಟ್‍ಗಳನ್ನು ಹೊಂದಿವೆ.

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆಯುತ್ತದೆ. ಈ ಸ್ವಿಚ್‍‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

2020ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 24.3 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍‍ಗಳಿವೆ.

ಅಮೆರಿಕದ ಮಾರುಕಟ್ಟೆಗೆ ಲಗ್ಗೆಯಿಡಲಿದೆ 2020ರ ರಾಯಲ್ ಎನ್‍ಫೀಲ್ಡ್ ಹಿಮಾಲಯನ್

ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ. 2020ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕುಗಳನ್ನು ಶೀಘ್ರದಲ್ಲೇ ಅಮೆರಿಕದಲ್ಲಿ ಬಿಡುಗಡೆಗೊಳಿಸಲಿದೆ.

Article Published On: Monday, August 31, 2020, 20:00 [IST]
English summary
2020 Royal Enfield Himalayan Launching In The US Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+