ಹೊಸ ಫೀಚರ್‍ಗಳನ್ನು ಹೊಂದಲಿವೆ ರಾಯಲ್ ಎನ್‍ಫೀಲ್ಡ್ ಬೈಕುಗಳು
ಇಂದಿಗೂ ಭಾರತೀಯ ರಸ್ತೆಗಳಲ್ಲಿ ರಾಜನಂತೆ ಮೆರೆಯುತ್ತಿವೆ ರಾಯಲ್ ಎನ್‍ಫೀಲ್ಡ್ ಬೈಕ್‍ಗಳು. ರಾಯಲ್ ಎನ್‍ಫೀಲ್ಡ್ ಯುವಕರ ಕನಸಿನ ಬೈಕ್. ರಾಯಲ್ ಎನ್‍ಫೀಲ್ಡ್ ತನ್ನ ವಿಶಿಷ್ಟವಾದ ಲುಕ್ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್.

ರಾಯಲ್ ಎನ್‍ಫೀಲ್ಡ್ ಬೈಕ್ ಮೇಲೆ ಕುಳಿತು ರೈಡ್ ಮಾಡುವುದೆಂದರೆ ಅದೊಂದು ಗತ್ತು. ಆರೇಳು ದಶಕಗಳಿಂದಲೂ ಅದೇ ಕ್ರೇಜ್, ಅದೇ ಟ್ರೆಂಡ್ ಉಳಿಸಿಕೊಂಡು ಬಂದಿರುವುದು ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಹೆಗ್ಗಳಿಕೆ. ಕಾಲೇಜು ಯುವಕರಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಈ ರಾಯಲ್ ಎನ್‍ಫಿಲ್ಡ್ ಬೈಕ್‍ಗಳ ಅಭಿಮಾನಿಗಳು. ಆದರೆ ರಾಯಲ್ ಎನ್‍ಫಿಲ್ಡ್ ಬೈಕುಗಳು ಅತ್ಯಾಧುನಿಕ ತಂತ್ರಜ್ಙಾನವನ್ನು ಅಳವಡಿಕೆಯು ಕಡಿಮೆಯಾಗಿದೆ.

ಆದರೆ ಇದೀಗ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಜನಪ್ರಿಯ 2-3 ಮಾದರಿಗಳಿಗೆ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹೊಂದಿರುವ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಿದೆ. ಇದರ ಮೂಲಕ ಸವಾರರಿಗೆ ರೈಡಿಂಗ್ ಡೇಟಾವನ್ನು ಪಡೆಯಬಹುದು.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಕೆಲವು ಮಾದರಿಗಳಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಫೀಚರ್ ಅನ್ನು ಅಳವಡಿಬಹುದು. ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದಿನ ವರ್ಷಗಳಲ್ಲಿ ಹೊಸ 14 ಮಾದರಿಗಳನ್ನು ಬಿಡುಗಡೆಗೊಳಿಸಲಿದೆ.

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು 650 ಟ್ವಿನ್ ಯುರೋಪಿನಾದ್ಯಂತ ಉತ್ತಮವಾಗಿ ಮಾರಾಟವಾಗುತ್ತಿದೆ. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹೊಸ 650 ಸಿಸಿ ಬೈಕನ್ನು ಅಭಿವೃದ್ದಿಪಡಿಸಲು ಮುಂದಾಗಿದೆ.
MOST READ: ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು ವೆಸ್ಪಾ ಸ್ಕೂಟರ್‌ಗಳು

ರಾಯಲ್ ಎನ್‍ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸುವುದು ಖಚಿತವಗಿದೆ. ಇದಕ್ಕಾಗಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹೆಚ್ಚಿನ ಹೂಡಿಕೆಯನ್ನು ಮಾಡಲಿದೆ.

ರಾಯಲ್ ಎನ್‍ಫೀಲ್ಡ್ ಕಂಪನಿಯು ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳನ್ನು 2018ರ ನವೆಂಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಈ ಎರಡೂ ಬೈಕುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಿಸಿಯಾಗಿದೆ. ಇದೇ ಕಾರಣದಿಂದ 650 ಸಿಸಿ ಬೈಕನ್ನು ತಯಾರಿಸಲು ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದಾಗಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಕಳೆದ ಏಪ್ರಿಲ್ ತಿಂಗಳಲ್ಲಿ ರಾಯಲ್ ಎನ್‍ಫೀಲ್ಡ್ 91 ಯುನಿಟ್ ಗಳು ಮಾರಾಟವಾಗಿವೆ. ಮಾರಾಟದ ಮೇಲೆ ಪಾರಿಣಾಮ ಬೀರಲು ಕಾರಣ ಅಂದರೆ ಕರೋನಾ ಭೀತಿಯಿಂದ ದೇಶಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು.

ಇದರ ನಡುವೆ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ.


Click it and Unblock the Notifications