ರಾಯಲ್ ಎನ್ಫೀಲ್ಡ್ ಕಂಪನಿಯು ಹೊಸ 650 ಸಿಸಿ ಬೈಕನ್ನು ಪರಿಚಯಿಸಲಿದೆ
ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್ ಜಗತ್ತಿನಾದ್ಯಂತ ಆತಂಕ ಹುಟ್ಟಿಸಿದೆ. ಜಗತ್ತನ್ನೇ ತಲ್ಲಣಗೊಳಿಸಿರುವ ಕರೋನಾ ವೈರಸ್‍ದಿಂದ ಆಟೋಮೊಬೈಲ್ ಕ್ಷೇತ್ರಕ್ಕೂ ಪಾರಿಣಾಮಬೀರಿದೆ. ಆಟೋಮೊಬೈಲ್ ಕ್ಷೇತ್ರಕ್ಕೆ ಕರೋನಾ ವೈರಸ್ ಪಾರಿಣಾಮದಿಂದ ಸಾವಿರಾರು ಕೋಟಿ ನಷ್ಟವಾಗಿದೆ.

ಬೈಕುಗಳ ಮಾರಾಟದ ಮೇಲೆಯು ಕರೋನಾ ವೈರಸ್ ಪಾರಿಣಾಮ ಬೀರಿದೆ. ಜನಪ್ರಿಯ ಬೈಕು ಉತ್ಪಾದನಾ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಮಾರಾಟದ ಮೇಲೆಯು ಕರೋನಾ ಕರಿನೆರಳು ಬೀರಿದೆ.ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಮತ್ತಷ್ಟು ಪ್ರಾಬಲ್ಯವನ್ನು ಸಾಧಿಸಲು ಹೊಸ ಬೈಕುಗಳನ್ನು ಉತ್ಪಾದಿಸಲು ಸಜ್ಜಾಗಿದೆ. ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು 650 ಟ್ವಿನ್ ಯುರೋಪಿನಾದ್ಯಂತ ಉತ್ತಮವಾಗಿ ಮಾರಾಟವಾಗುತ್ತಿದೆ. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು ಹೊಸ 650 ಸಿಸಿ ಬೈಕನ್ನು ಅಭಿವೃದ್ದಿಪಡಿಸಲು ಮುಂದಾಗಿದೆ.

ರಾಯಲ್ ಎನ್ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸುವುದು ಖಚಿತವಗಿದೆ. ಇದಕ್ಕಾಗಿ ರಾಯಲ್ ಎನ್ಫೀಲ್ಡ್ ಕಂಪನಿಯು ಹೆಚ್ಚಿನ ಹೂಡಿಕೆಯನ್ನು ಮಾಡಲಿದೆ.
MOST READ: ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಕಳೆದ ಏಪ್ರಿಲ್ ತಿಂಗಳಲ್ಲಿ ರಾಯಲ್ ಎನ್‍ಫೀಲ್ಡ್ 91 ಯುನಿಟ್ ಗಳು ಮಾರಾಟವಾಗಿವೆ. ಮಾರಾಟದ ಮೇಲೆ ಪಾರಿಣಾಮ ಬೀರಲು ಕಾರಣ ಅಂದರೆ ಕರೋನಾ ಭೀತಿಯಿಂದ ದೇಶಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು.

ಇದರ ನಡುವೆ ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ಥಂಡರ್‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

ರಾಯಲ್ ಎನ್‍ಫೀಲ್ಡ್ ಕಂಪನಿಯ ಟ್ವಿನ್ ಬೈಕುಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ.ರಾಯಲ್ ಎನ್‍ಫೀಲ್ಡ್ ಟ್ವಿನ್ ಬೈಕುಗಳು ಮಾರಾಟವಾಗಿವೆ. ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಟ್ವಿನ್ ಬೈಕುಗಳ ಒಟ್ಟು 20,188 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ರಾಯಲ್ ಎನ್ಫೀಲ್ಡ್ ಕಂಪನಿಯು ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳನ್ನು 2018ರ ನವೆಂಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಈ ಎರಡೂ ಬೈಕುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಿಸಿಯಾಗಿದೆ.

ಇದೇ ಕಾರಣದಿಂದ 650 ಸಿಸಿ ಬೈಕನ್ನು ತಯಾರಿಸಲು ರಾಯಲ್ ಎನ್ಫೀಲ್ಡ್ ಕಂಪನಿಯು ಮುಂದಾಗಿದೆ. ರಾಯಲ್ ಎನ್‍ಫೀಲ್ಡ್ ಯುವಕರ ಕನಸಿನ ಬೈಕ್. ರಾಯಲ್ ಎನ್‍ಫೀಲ್ಡ್ ತನ್ನ ವಿಶಿಷ್ಟವಾದ ಲುಕ್ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್. ಆರೇಳು ದಶಕಗಳಿಂದಲೂ ಅದೇ ಕ್ರೇಜ್, ಅದೇ ಟ್ರೆಂಡ್ ಉಳಿಸಿಕೊಂಡು ಬಂದಿರುವುದು ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಹೆಗ್ಗಳಿಕೆ.


Click it and Unblock the Notifications







