ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ದೇಶಾದ್ಯಂತ ಈಗಾಗಲೇ ಹಲವಾರು ಆಟೋ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹೆಚ್ಚು ಗಮನಹರಿಸುತ್ತಿದ್ದು, ದಿನಬಳಕೆಯ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಕೂಡಾ ಇದೀಗ ಆಟೋ ಉದ್ಯಮಕ್ಕೆ ಕಾಲಿಡುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಆರ್‌ಆರ್ ಗ್ಲೋಬಲ್ ಕಂಪನಿಯು ಬಿಡುಗಡೆ ಮಾಡಲಿರುವ ಮೊದಲ ಎಲೆಕ್ಟ್ರಿಕ್ ಸ್ಕೂಟರಿನ ಟೀಸರ್ ಚಿತ್ರವನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಅತ್ಯುತ್ತಮ ಬ್ಯಾಟರಿ ಸೌಲಭ್ಯದೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದೆ. ಭಾರತದಲ್ಲಿ ಹೊಸ ಯೋಜನೆಗಾಗಿ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಭಾರತದಲ್ಲಿ ಹೊಸ ಯೋಜನೆಗಾಗಿ ಮುಂದಿನ ಮೂರು ವರ್ಷಗಳಿಗೆ ರೂ.125 ಕೋಟಿ ಬಂಡವಾಳ ಹೂಡಿಕೆ ಮಾಡಲಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಪುಣೆಯಲ್ಲಿರುವ ತನ್ನ ದಿನಬಳಕೆಯ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನಾ ಘಟಕದಲ್ಲೇ ಹೊಸ ಇವಿ ಸ್ಕೂಟರ್ ಸಿದ್ದಪಡಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಆರ್‌ಆರ್ ಗ್ಲೋಬಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಗೌಸ್(BGauss) ಹೆಸರಿನೊಂದಿಗೆ ಬಿಡುಗಡೆ ಮಾಡಲಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಒಟ್ಟು ಐದು ವೆರಿಯೆಂಟ್‌ಗಳಲ್ಲಿ ಉತ್ಪಾದನೆ ಮಾಡಲಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 80 ಸಾವಿರ ಯುನಿಟ್ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಕೇಬಲ್ ವೈರ್ ಮತ್ತು ಕಾಪರ್ ಟ್ಯೂಬ್ ಸೇರಿದಂತೆ 80ಕ್ಕೂ ಹೆಚ್ಚು ಎಲೆಕ್ಟ್ರಿಕ್ ಉತ್ಪನ್ನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಇದೇ ಮೊದಲ ಬಾರಿಗೆ ಆಟೋ ಉದ್ಯಮಕ್ಕೆ ಕಾಲಿಟ್ಟಿದ್ದು, ಭಾರೀ ಲಾಭದಾಯಕ ಕಂಪನಿಗಳಲ್ಲಿ ಒಂದಾಗಿರುವ ಆರ್‌ಆರ್ ಗ್ಲೋಬಲ್ ಕಂಪನಿಯು 1986ರಿಂದಲೂ ಭಾರತದಲ್ಲಿ ಕಾರ್ಯಾಚರಣೆ ಹೊಂದಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಭಾರತದಲ್ಲಿ ಬಿಡುಗಡೆಯಾಗಲಿದೆ ಆರ್‌ಆರ್ ಗ್ಲೋಬಲ್ ಎಲೆಕ್ಟ್ರಿಕ್ ಸ್ಕೂಟರ್

ಪುಣೆಯ ಚಾಕನ್ ಮತ್ತು ಗುಜರಾತಿನ ವಡೋದರದಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿರುವ ಆರ್‌ಆರ್ ಗ್ಲೋಬಲ್ ಕಂಪನಿಯು 86 ದೇಶಗಳಲ್ಲಿ ಮಾರಾಟ ಸೌಲಭ್ಯಗಳನ್ನು ಹೊಂದಿದ್ದು, ಭಾರತದಲ್ಲಿ 28 ಕಾರ್ಪೋರೆಟ್ ಕಛೇರಿಗಳನ್ನು ಹೊಂದಿದೆ. ಹೀಗಾಗಿ ಮಾರುಕಟ್ಟೆ ವಿಭಾಗದಲ್ಲಿ ಪ್ರಬಲವಾಗಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ತವಕದಲ್ಲಿದೆ.

Article Published On: Wednesday, June 17, 2020, 22:56 [IST]
English summary
RR Global To Enter Two-Wheeler Electric Vehicle Segment Under The Brand Name BGauss. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+