Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 5 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್‌ಗೆ 230ಕಿ.ಮೀ ಮೈಲೇಜ್ ಮೂಲಕ ಹೊಸ ಸಂಚಲನ ಸೃಷ್ಠಿಸಲಿದೆ ಈ ಎಲೆಕ್ಟ್ರಿಕ್ ಸ್ಕೂಟರ್
ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮತ್ತು ಬಳಕೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿವೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಆಟೋ ಕಂಪನಿಗಳಿಂತಲೂ ಸ್ಟಾರ್ಟ್ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸಿದೆ.

ಹೊಸ ಎಲೆಕ್ಟ್ರಿಕ್ ಮಾದರಿಯನ್ನು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರ್ಕ್ 1 ಮತ್ತು ಮಾರ್ಕ್ 2 ಎನ್ನುವ ಹೆಸರಿನೊಂದಿಗೆ ಅಭಿವೃದ್ದಿಗೊಳಿಸಿರುವ ಸಿಂಪಲ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ಮಾರಾಟ ಪ್ರಕ್ರಿಯೆಯನ್ನು ಆರಂಭಿಸಲು ಸಿದ್ದವಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿ ಹೊಸ ಸ್ಕೂಟರ್ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಕಡಿಮೆ ಬೆಲೆ ಹೆಚ್ಚು ಮೈಲೇಜ್
ಸಿಂಪಲ್ ಎನರ್ಜಿ ಕಂಪನಿಯ ಮಾಹಿತಿ ಪ್ರಕಾರ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ತೆಗೆದುಹಾಕಬಹುದಾದ 4 ಕಿಲೋವ್ಯಾಟ್ ಸಾಮಾರ್ಥ್ಯದ ಲೀ-ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 280 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ ಎಂದು ಹೇಳಿಕೊಂಡಿತ್ತು.

ಆದರೆ ಎಆರ್‌ಎಐ(ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ಇಕೋ ಮೋಡ್‍ನಲ್ಲಿ ಗರಿಷ್ಠ 230 ಕಿ.ಮೀ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ. ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಟಾಪ್ ಸ್ಪೀಡ್ ಹೊಂದಿದೆ.

ಮಾರ್ಕ್ 2 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 103ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ.

ಹೀಗಾಗಿ ಇದು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಅತಿ ವೇಗದ ಮತ್ತು ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಶೀಘ್ರದಲ್ಲೇ ಹೊಸ ಸ್ಕೂಟರ್ ಮಾದರಿಯು ಉತ್ಪಾದನಾ ಹಂತದತ್ತ ಸಾಗಲಿದೆ.

ಮಾರ್ಕ್ 2 ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ ಲೀ-ಅಯಾನ್ ಬ್ಯಾಟರಿಯು ಗೃಹ ಬಳಕೆಯ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹುದಾದರೇ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಮತ್ತು ಕನೆಕ್ಟೆಡ್ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಗುಣಮಟ್ಟದ ಬಿಡಿಭಾಗಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 1.20 ಲಕ್ಷದಿಂದ ರೂ. 1.50 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಸದ್ಯ ಬೆಂಗಳೂರಿನ ಯಲಹಂಕದಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕವನ್ನು ತೆರೆದಿರುವ ಸಿಂಪಲ್ ಎನರ್ಜಿ ಕಂಪನಿಯು ಮುಂಬರುವ ದಿನಗಳಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್‌ಗಳನ್ನು ಆರಂಭಿಕವಾಗಿ ಇ-ಕಾಮರ್ಸ್ ಪ್ಲ್ಯಾಟ್‌ಫಾರ್ಮ್‌ಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್ ನಲ್ಲಿ ಮಾರಾಟಗೊಳಿಸಲು ನಿರ್ಧರಿಸಿದೆ.

ಹೂಡಿಕೆದಾರರ ಆಧಾರದ ಮೇಲೆ ಅಧಿಕೃತವಾಗಿ ಮಾರಾಟ ಮಳಿಗೆಗಳನ್ನು ತೆರೆಯಲಿರುವ ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲದೊಂದಿಗೆ ಹೊಸ ಸ್ಕೂಟರ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸಲಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಮುಂಬರುವ 2021ರ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.