Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವಿನ್ಯಾಸದ ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಬಿಡುಗಡೆ ಮಾಡಿದ ಸ್ಟಡ್ಸ್
ಸ್ವದೇಶಿ ಹೆಲ್ಮೆಟ್ ಉತ್ಪಾದನಾ ಕಂಪನಿಯಾಗಿರುವ ಸ್ಟಡ್ಸ್ ಥಂಡರ್ ಡಿ ಸರಣಿಯಲ್ಲಿ ಹೊಸದಾಗಿ ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಬಿಡುಗಡೆ ಮಾಡಿದ್ದು, ಹೊಸ ವಿನ್ಯಾಸ ಹೊಂದಿರುವ ಥಂಡರ್ ಡಿ6 ಹೆಲ್ಮೆಟ್ ಮಾದರಿಯು ಬಿಎಸ್ಐ ಸ್ಟ್ಯಾಂಡರ್ಡ್ ನಿಯಮಾನುಸಾರವಾಗಿ ಅಭಿವೃದ್ದಿಗೊಂಡಿದೆ.

ಸ್ಟಡ್ಸ್ ಕಂಪನಿಯ ಥಂಡರ್ ಡಿ ಸರಣಿಯಲ್ಲಿರುವ ಪ್ರಮುಖ ಹೆಲ್ಮೆಟ್ ಮಾದರಿಗಳಲ್ಲೇ ತುಸು ವಿಭಿನ್ನ ವಿನ್ಯಾಸ ಹೊಂದಿರುವ ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಮಾದರಿಯು ಬೈಕ್ ಸವಾರರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿದ್ದು, ಹೆಲ್ಮೆಟ್ ಬಳಕೆಯು ಸುಲಭವಾಗಿಸಲು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಹೊಸತನ ಪರಿಚಯಿಸುವ ಮೂಲಕ ಬೈಕ್ ಸವಾರರನ್ನು ಸೆಳೆಯುತ್ತಿದೆ.

ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಮಾದರಿಯು ಪ್ರತಿಸ್ಪರ್ಧಿ ಕಂಪನಿಗಳ ಹೆಲ್ಮೆಟ್ ಮಾದರಿಗಿಂತಲೂ ಉತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಹೆಲ್ಮೆಟ್ ಬೆಲೆಯನ್ನು ಆರಂಭಿಕವಾಗಿ ರೂ. 1,795ಕ್ಕೆ ನಿಗದಿಪಡಿಸಿದೆ.

ಸ್ಟಡ್ಸ್ ಕಂಪನಿಯು ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಮಾದರಿಯನ್ನು ಮೀಡಿಯಂ, ಲಾರ್ಜ್ ಮತ್ತು ಎಕ್ಸ್ಟಾ ಲಾರ್ಜ್ ವಿನ್ಯಾಸದಲ್ಲಿ ಬಿಡುಗಡೆ ಮಾಡಿದ್ದು, ಬೈಕ್ ಸವಾರರು ತಮ್ಮ ಬೇಡಿಕೆಗೆ ಅನುಗುಣವಾಗಿ ಮೀಡಿಯಂ(570-ಎಂಎಂ), ಲಾರ್ಜ್(580-ಎಂಎಂ) ಮತ್ತು ಎಕ್ಸ್ಟಾ ಲಾರ್ಜ್(600-ಎಂಎಂ) ಮಾದರಿಗಳನ್ನು ಖರೀದಿ ಮಾಡಬಹುದು.

ಜೊತೆಗೆ ಥಂಡರ್ ಡಿ6 ಹೆಲ್ಮೆಟ್ ಒಟ್ಟು ಎಂಟು ವಿವಿಧ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಮ್ಯಾಟೆ ಬ್ಲ್ಯಾಕ್ ಬಣ್ಣದಲ್ಲಿ ಆರೇಂಜ್, ಯೆಲ್ಲೊ, ರೆಡ್ ಮತ್ತು ಬ್ಲೂ ಬಣ್ಣಗಳನ್ನು ಮತ್ತು ಬ್ಲ್ಯಾಕ್ ಬೆಸ್ ಹೊಂದಿರುವ ಆರೇಂಜ್, ಯೆಲ್ಲೊ, ಬ್ಲೂ ಬಣ್ಣಗಳನ್ನು ಆಯ್ಕೆ ಮಾಡಬಹುದಾಗಿದೆ. ಥಂಡರ್ ಡಿ6 ಹೆಲ್ಮೆಟ್ ಮಾದರಿಯು ಫುಲ್ ಫೇಸ್ ಹೆಲ್ಮೆಟ್ ಮಾದರಿಯಾಗಿದ್ದು, ಮಿರರ್ ವಿಸರ್ ನೀಡಲಾಗಿದೆ.

ಹಾಗೆಯೇ ಬೈಕ್ ಸವಾರರಿಗೆ ತೆಗೆದು ಹಾಕಲು ಅನುಕೂಲಕರವಾದ ಹಿಡಿತ ಹೊಂದಿರುವ ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಮಾದರಿಯು ಯುವಿ ರೆಸಿಸ್ಟೆಂಟ್ ಪೇಂಟ್, ವಿಸ್ತೃತ ಪಾಲಿಸ್ಟೈರೀನ್, ಅತ್ಯುತ್ತಮ ವೆಂಟಿಲೆೇಷನ್ ಸಿಸ್ಟಂ, ಹಾಟ್ ಏರ್ ಎಕ್ಸಾಸ್ಟ್ ಮತ್ತು ಚಿನ್ ಸ್ಟ್ಯಾಪ್‌ನೊಂದಿಗೆ ಗಲ್ಲದ ಭಾಗಕ್ಕೆ ಪೂರ್ಣ ಪ್ರಮಾಣದ ಸುರಕ್ಷತೆ ನೀಡುತ್ತದೆ.

ಇದರೊಂದಿಗೆ ಹೆಲ್ಮೆಟ್ ಒಳಭಾಗದಲ್ಲಿ ಪ್ರೀಮಿಯಂ ಫ್ರ್ಯಾಬಿಕ್ ಬಟ್ಟೆಯನ್ನು ಬಳಕೆ ಮಾಡಲಾಗಿದ್ದು, ಬೇಸಿಗೆ ಮತ್ತು ಮಳೆಗಾಲದ ಸಂದರ್ಭದಲ್ಲೂ ಯಾವುದೇ ಕಿರಿಕಿರಿಯಿಲ್ಲದೆ ಈ ಹೆಲ್ಮೆಟ್ ಅನ್ನು ಬಳಕೆ ಮಾಡಬಹುದಾಗಿದೆ.

ಈ ಮೂಲಕ ಗುಣಮಟ್ಟ, ವಿಶ್ವಾಸಾರ್ಹತೆಯೊಂದಿಗೆ ಮತ್ತೊಮ್ಮೆ ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸಲು ಸಿದ್ದವಾಗಿರುವ ಸ್ಟಡ್ಸ್ ಕಂಪನಿಯು ಈಗಾಗಲೇ ಹಲವಾರು ಮಾದರಿಯ ಹೆಲ್ಮೆಟ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇತ್ತೀಚೆಗೆ ಬಿಎಸ್ಐ(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಸೂಚಿಸಿರುವ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಥಂಡರ್ ಡಿ6 ಡಿಕೋರ್ ಹೆಲ್ಮೆಟ್ ಸಿದ್ದಪಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಬೈಕ್ ಸವಾರರ ಜೊತೆಗೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದ್ದರೂ ದಂಡದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಕಳಪೆ ಹೆಲ್ಮೆಟ್‌ಗಳ ಬಳಕೆಯು ಹೆಚ್ಚಳವಾಗಿದ್ದು, ಇವು ಬೈಕ್ ಸವಾರರಿಗೆ ರಕ್ಷಣೆ ನೀಡುವ ಬದಲಾಗಿ ಪ್ರಾಣಕ್ಕೆ ಕುತ್ತು ತರುತ್ತಿವೆ ಎಂದರೆ ತಪ್ಪಾಗುವುದಿಲ್ಲ. ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ.

ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ.