Just In
- 1 hr ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 1 hr ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 1 hr ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 1 hr ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಸುಜುಕಿ ಜಿಕ್ಸರ್ 250 ಬೈಕುಗಳು
ಜಪಾನ್ ಮೂಲದ ಬೈಕ್ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ತನ್ನ ಹೊಸ ಜಿಕ್ಸರ್ 250 ಮತ್ತು ಜಿಕ್ಸರ್ ಎಸ್ಎಫ್ 250 ಬೈಕುಗಳನ್ನು ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಸುಜುಕಿ ಕಂಪನಿಯು ಈ ಜಿಕ್ಸರ್ 250 ಮತ್ತು ಜಿಕ್ಸರ್ ಎಸ್ಎಫ್ 250 ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ.
ಸುಜುಕಿ ಜಿಕ್ಸರ್ 250 ಬೈಕಿನ ಬೆಲೆಯನ್ನು ರೂ.2,041ಗಳವರೆಗೆ ಹೆಚ್ಚಿಸಿದೆ. ಇದೀಗ ಈ ಬೈಕಿನ ಬೆಲೆಯು ರೂ.1.65 ಲಕ್ಷಗಳಾಗಿದೆ. ಇನ್ನು ಸುಜುಕಿ ಜಿಕ್ಸರ್ ಎಸ್ಎಫ್ 250 ಬೈಕಿನ ಬೆಲೆಯನ್ನು ರೂ.2,140 ಗಳವರೆಗೆ ಹೆಚ್ಚಿಸಿದೆ. ಇದೀಗ ಈ ಬೈಕಿನ ಬೆಲೆಯು ರೂ.1.76 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. 2020ರ ಆಟೋ ಎಕ್ಸ್ ಪೋದಲ್ಲಿ ಹೊಸ ಸುಜುಕಿ ಜಿಕ್ಸರ್ 250 ಟ್ವಿನ್ ಬೈಕುಗಳನ್ನು ಪ್ರದರ್ಶಿಸಿದರು. ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದ ಸಮಯದಲ್ಲಿ ಸುಜುಕಿ ಜಿಕ್ಸರ್ ಟ್ವಿನ್ ಬೈಕುಗಳ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿತ್ತು.
ಬಿಎಸ್-6 ಜಿಕ್ಸರ್ 250 ಮತ್ತು ಜಿಕ್ಸರ್ ಎಸ್ಎಫ್ 250 ಬೈಕುಗಳಲ್ಲಿ 249 ಸಿಸಿ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 26.1 ಬಿಹೆಚ್ಪಿ ಪವರ್ ಮತ್ತು 22.2 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಜಿಕ್ಸರ್ 250 ಟ್ವಿನ್ ಬೈಕುಗಳ ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.4 ಬಿಹೆಚ್ಪಿ ಪವರ್ ಮತ್ತು 0.4 ರಷ್ಟು ಎನ್ಎಂ ಟಾರ್ಕ್ ಕೂಡ ಕಡಿಮೆಯಾಗಿದೆ. ಹೊಸ ಸುಜುಕಿ ಜಿಕ್ಸರ್ ಬೈಕುಗಳಲ್ಲಿ ಎಂಜಿನ್ ನವೀಕರಣ ಹೊರತುಪಡಿಸಿ ಬೇರೆ ಯಾವುದೇ ಬದಲಾವಣೆಗಳು ಕಂಡುಬಂಡಿಲ್ಲ.
ಈ ಬೈಕ್ ಪ್ರಸ್ತುತ ಮಾದರಿಯ ವಿನ್ಯಾಸ ಮತ್ತು ಫೀಚರ್ ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸುಜುಕಿ ಜಿಕ್ಸರ್ 250 ನೇಕೆಡ್ ಸ್ಟ್ರೀಟ್ಫೈಟರ್ ಆಗಿದ್ದರೆ, ಎಸ್ಎಫ್ 250 ಬೈಕ್ ಫೇರ್ಡ್ ಆವೃತ್ತಿಯಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಈ ಎರಡೂ ಬೈಕ್ಗಳು ಎಲ್ಇಡಿ ಹೆಡ್ಲ್ಯಾಂಪ್ಗಳು, ಎಲ್ಇಡಿ ಟೈಲ್ಲೈಟ್ಗಳು, ಎಲ್ಸಿಡಿ ಡಿಜಿಟಲ್ ಎನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ.
ಪ್ರಸ್ತುತ ನೇಕೆಡ್ ಆವೃತ್ತಿಯ ಸುಜುಕಿ ಜಿಕ್ಸರ್ 250 ಹೊಸದಾಗಿ ವಿನ್ಯಾಸಗೊಳಿಸಲಾದ ಟ್ಯಾಂಕಿನ ಮೇಲೆ ವಿಶಿಷ್ಟವಾದ ಬಾಡಿ ಗ್ರಾಫಿಕ್ಸ್ ಗಳಿದ್ದು, ಇದರ ಜೊತೆಗೆ ಒವಲ್ ಆಕಾರಾದ ಎಲ್ಇಡಿ ಹೆಡ್ಲ್ಯಾಂಪ್ ಯೂನಿಟ್ಗಳಿವೆ. ಜಿಕ್ಸರ್ 250 ಬೈಕಿನಲ್ಲಿ ಟಯರ್ ಹಗ್ಗರ್, ಸ್ಪ್ಲಿಟ್ ಸೀಟ್, ಕಪ್ಪು ಬಣ್ಣದ ಅಲಾಯ್ ವ್ಹೀಲ್ ಹಾಗೂ ಕ್ರೋಮ್ ಅಂಶಗಳನ್ನು ಹೊಂದಿರುವ ಡ್ಯುಯಲ್ ಮಫ್ಲರ್ ಅಂಶಗಳಿವೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಹೊಸ ಸುಜುಕಿ ಜಿಕ್ಸರ್ 250 ಮತ್ತು ಎಸ್ಎಫ್ 250 ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಗಳು ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸಸ್ಪೆಂಷನ್ ಅನ್ನು ಹೊಂದಿದೆ. ಬ್ರೈಕಿಂಗ್ ಸಿಸ್ಟಂ ಉತ್ತಮವಾಗಿದ್ದು, ಮುಂಭಾಗ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ಗಳನ್ನು ಅಳವಡಿಸಿದ್ದಾರೆ. ಸ್ಟ್ಯಾಂಡರ್ಡ್ ಡ್ಯುಯಲ್ ಚಾನೆಲ್ ಎಬಿಎಸ್ ಸಿಸ್ಟಂ ಅನ್ನು ಅಳವಡಿಸಿದ್ದಾರೆ.
ಈ ಜಿಕ್ಸರ್ 250 ಮತ್ತು ಜಿಕ್ಸರ್ ಎಸ್ಎಫ್ 250 ಬೈಕ್ಗಳು ದೇಶಿಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 250, ಬಜಾಜ್ ಪಲ್ಸರ್ ಆರ್ಎಸ್ 200 ಮತ್ತು ಟಿವಿಎಸ್ ಅಪಾಚೆ ಆರ್ಆರ್ 310 ಬೈಕ್ಗಳಿಗೆ ಪೈಪೋಟಿಯನ್ನು ನೀಡುತ್ತದೆ.