ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ 2020ರ ಆಗಸ್ಟ್ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ, ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಕಳೆದ ತಿಂಗಳು ಒಟ್ಟು 57,909 ಯುನಿಟ್‌ಗಳನ್ನು ಮಾರಾಟ ಮಾಡಿವೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಒಟ್ಟು 71,631 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ವರ್ಷದ ಆಗಸ್ಟ್ ತಿಂಗಳ ಮಾರಾಟವನ್ನು ಈ ವರ್ಷದ ಆಗಸ್ಟ್ ಹೋಲಿಸಿದರೆ ಶೇ.19 ರಷ್ಟು ಕುಸಿತವನ್ನು ದಾಖಲಿಸಿದೆ. ಇನ್ನು ಈ 2020ರ ಆಗಸ್ಟ್‌ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 53,142 ಯುನಿಟ್‌ಗಳನ್ನು ಮಾರಾಟ ಮಾಡಿವೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಇನ್ನು ಸುಜುಕಿ ಮೋಟಾರ್‌ಸೈಕಲ್ ಕಂಪನಿಯು 2020ರ ಜುಲೈ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 31,421 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ 2020ರ ಜುಲೈ ತಿಂಗಳ ಮಾರಾಟವನ್ನು ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಸುಜುಕಿ ಮೋಟಾರ್‌ಸೈಕಲ್ ಶೇ.46 ರಷ್ಟು ಬೆಳವಣಿಗೆಯನ್ನು ಕಂಡಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಮಾರಾಟದಲ್ಲಿ ನಿಧಾನವಾಗಿ ಚೇತರಿಕೆಯನ್ನು ಕಾಣುತ್ತಿದೆ. ಇನ್ನು ಹಬ್ಬದ ಸೀಸನ್ ನಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಬಹುದೆಂದು ಕಂಪನಿಯು ನಿರೀಕ್ಷಿಸುತ್ತಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಕೊಯಿಚಿರೊ ಹಿರಾವ್ ಅವರು ಆಗಸ್ಟ್ ತಿಂಗಳ ಮಾರಾಟದ ಬಗ್ಗೆ ಮಾತನಾಡಿ, ನಮ್ಮ ಡೀಲರುಗಳು ನಿರಂತರ ಪ್ರಯತ್ನಗಳು ಮತ್ತು ಕಠಿಣ ಪರಿಶ್ರಮದಿಂದ ಶೇ.46 ಕ್ಕಿಂತ ಹೆಚ್ಚಿನ ಬೆಳವಣಿಗೆಗೆ ಸಾಧ್ಯವಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಕರೋನಾ ಸೋಂಕಿನ ಭೀತಿಯ ನಡುವೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು ಮತ್ತು ಸಿಬ್ಬಂದಿಗಳು ಗ್ರಾಹಕರ ಸುರಕ್ಷತೆ ಹೆಚ್ಚು ಗಮನಹರಿಸಿದರು ಇದರಿಂದಾಗಿ ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸಲು ಕಾರಣವಾಯಿತು ಎಂದು ಹೇಳಿದರು.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಲಾಕ್ ಡೌನ್ ಸಡಿಲಿಕೆಯ ನಂತರ ಕಂಪನಿಯು ತನ್ನ ವಾಹನಗಳ ಉತ್ಪಾದನೆ, ಮಾರಾಟ ಹಾಗೂ ಸಪ್ಲೈ ಚೈನ್ ಗಳನ್ನು ಸುಧಾರಿಸಿಕೊಳ್ಳುತ್ತಿದೆ. ಕರೋನಾ ವೈರಸ್ ಹರಡದಂತೆ ತಡೆಯಲು ಕಂಪನಿಯು ಸರ್ಕಾರವು ಸೂಚಿಸಿರುವ ಎಲ್ಲಾ ನಿಯಮಗಳನ್ನು ಅನುಸರಿಸುತ್ತಿದೆ. ತನ್ನ ಉತ್ಪಾದನಾ ಘಟಕಗಳಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಇತ್ತೀಚೆಗೆ ಜಿಕ್ಸರ್ 150, ಜಿಕ್ಸರ್ 250, ಬರ್ಗ್‌ಮನ್ ಸ್ಟ್ರೀಟ್, ಆಕ್ಸೆಸ್ 125 ಹಾಗೂ ಇಂಟ್ರೂಡರ್ 150 ಬಿಎಸ್ 6 ಮಾದರಿಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಬಿಎಸ್ 6 ವಾಹನಗಳ ಉತ್ಪಾದನಾ ವೆಚ್ಚವು ಹೆಚ್ಚಾದ ಕಾರಣಕ್ಕೆ ಈ ವಾಹನಗಳ ಬೆಲೆಯನ್ನು ಹೆಚ್ಚಿಸಿತು.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ಬೈಕುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ. ಇನ್ನು ಹಬ್ಬದ ಸೀಸನ್ ನಲ್ಲಿ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Suzuki Motorcycle India sells 57,909 units in August 2020. Read In Kannada.
Story first published: Tuesday, September 1, 2020, 20:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X