Just In
Don't Miss!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- News
ಭಾರತದಲ್ಲಿ ಬೇಕಾದಷ್ಟು ಲಸಿಕೆಯಿದೆ, ಆದರೆ... ಸಮಸ್ಯೆ ಬೇರೆಯೇ ಆಗಿದೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು 2021ರ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್ ಬೈಕ್
ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ತನ್ನ 2021ರ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್-ಟೂರಿಂಗ್ ಬೈಕನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್ ಬೈಕ್ ಹೊಸ ಬಣ್ಣಗಳ ಅಂಶವನ್ನು ಒಳಗೊಂಡಿವೆ.

2021ರ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್-ಟೂರಿಂಗ್ ಬೈಕಿನ ಫ್ಯೂಯಲ್ ಟ್ಯಾಂಕ್‌ನಲ್ಲಿ ಬ್ಲೂ ಅಸ್ಸೆಂಟ್ ಗಳೊಂದಿಗೆ ಯೆಲ್ಲೋ ಬಣ್ಣವನ್ನು ಒಳಗೊಂಡಿದೆ. ಈ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್-ಟೂರಿಂಗ್ ಬೈಕ್ ತನ್ನ ಸರಣಿಯ ಐಕಾನಿಕ್ ಡಿಆರ್-ಬಿಗ್ ರ್ಯಾಲಿ ಬೈಕಿನಿಂದ ಸ್ಫೂರ್ತಿ ಪಡೆದಿದೆ. ಇನ್ನು ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್ ಬೈಕ್ ಗೋಲ್ಡನ್ ಬಣ್ಣದ ಫಿನಿಶಿಂಗ್ ಹೊಂದಿರುವ ಸ್ಪೋಕ್ ವ್ಹೀಲ್ ಗಳನ್ನು ಹೊಂದಿವೆ.

ವಿ-ಸ್ಟ್ರೋಮ್ 650 ಎಕ್ಸ್‌ಟಿ ಅಡ್ವೆಂಚರ್ ಭಾರತದಲ್ಲಿ ಮಾರಾಟವಾಗುವ ವಿ-ಸ್ಟ್ರೋಮ್ 650 ಎಕ್ಸ್‌ಟಿ ಆಧಾರಿತ ಟಾಪ್-ಆಫ್-ಲೈನ್ ರೂಪಾಂತರವಾಗಿದೆ. ದೊಡ್ಡ ಕ್ರ್ಯಾಶ್ ಗಾರ್ಡ್, ಒಂದು ಜೋಡಿ ಅಲ್ಯೂಮಿನಿಯಂ ಪ್ಯಾನಿಯರ್‌ಗಳು, ಹ್ಯಾಂಡಲ್‌ಬಾರ್ ಬ್ರೇಸ್, ಮಿರರ್ ವಿಸ್ತರಣೆಗಳು ಮತ್ತು ಸೆಂಟರ್ ಸ್ಟ್ಯಾಂಡ್ ನಡುವೆ ಕೆಲವು ವ್ಯತ್ಯಾಸಗಳು ಹೊರತುಪಡಿಸಿ ಇತರ ಯಾವುದೇ ಬದಲಾವಣೆಗಳಿಲ್ಲ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ ಚಾಂಪಿಯನ್ ಯೆಲ್ಲೋ ಮತ್ತು ಪರ್ಲ್ ಗ್ಲೇಸಿಯರ್ ವೈಟ್ ಬಣ್ಣಗಳಲ್ಲಿ ಲಭ್ಯವಿರಲಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಅದೇ 645 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ 8,800 ಆರ್‌ಪಿಎಂನಲ್ಲಿ 69.7 ಬಿಎಚ್‌ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 62 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ.

ಈ ಅಡ್ವೆಂಚರ್-ಟೂರಿಂಗ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ 310 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 260 ಎಂಎಂ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಅಗಿ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಈ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್, ನಕಲ್ ಗಾರ್ಡ್‌ಗಳು, ಎಂಜಿನ್ ಪ್ರೊಟೆಕ್ಟರ್ ಸ್ಪೋಕ್ ವ್ಹೀಲ್ಸ್ ಮತ್ತು ಮೆತ್ತನೆಯ ಸಿಂಗಲ್-ಪೀಸ್ ಸೀಟ್ ಅನ್ನು ಕೂಡ ಹೊಂದಿದೆ.

ಇನ್ನು ಈ ಹೊಸ ಅಡ್ವೆಂಚರ್-ಟೂರಿಂಗ್ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದ್ದು, ಇದರಲ್ಲಿ ಗೇರ್ ಪೋಷಿಸನ್,ಟ್ಯಾಕೋಮೀಟರ್ ಮತ್ತು ಡಿಜಿಟಲ್ ರೀಡ್ ಔಟ್ ಗಳನ್ನು ಒಳಗೊಂಡಿದೆ.

ಕೆಳಗಿನ ಡಿಜಿಟಲ್ ವಿಭಾಗವು ಓಡೋಮೀಟರ್, ಟ್ವಿನ್-ಟ್ರಿಪ್ ಮೀಟರ್, ಕಾಲ್, ಫ್ಯೂಯಲ್ ಲೆವೆಲ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಮೋಡ್ ಗಳನ್ನು ಪ್ರದರ್ಶಿಸುತ್ತದೆ. ವಿ-ಸ್ಟ್ರೋಮ್ 650 ಎಕ್ಸ್‌ಟಿ ಮಾದರಿಯು ಸುಜುಕಿ ಮೋಟಾರ್‌ಸೈಕಲ್ ಸರಣಿಯಲ್ಲಿ ಅತ್ಯುತ್ತಮ ಅಡ್ವೆಂಚರ್ ಬೈಕುಗಳಲ್ಲಿ ಒಂದಾಗಿದೆ.