ಬಿಡುಗಡೆಗೊಂಡಿರುವ ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಭಾರತದಲ್ಲಿ ಪ್ರೀಮಿಯಂ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ವಿವಿಧ ಆಟೋ ಕಂಪನಿಗಳು ವಿದೇಶಿ ಮಾರುಕಟ್ಟೆಗಳಲ್ಲಿರುವ ತಮ್ಮ ಜನಪ್ರಿಯ ಮ್ಯಾಕ್ಸಿ ಸ್ಕೂಟರ್ ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿವೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಇಟಾಲಿಯನ್ ಆಟೋ ಉತ್ಪಾದನಾ ಕಂಪನಿಯಾಗಿರುವ ಪಿಯಾಜಿಯೊ ಕೂಡಾ ತನ್ನ ಅಂಗಸಂಸ್ಥೆಯಾದ ಎಪ್ರಿಲಿಯಾ ನಿರ್ಮಾಣದ ಮೊದಲ ಮ್ಯಾಕ್ಸಿ ಸ್ಕೂಟರ್ ಮಾದರಿಯಾದ ಎಸ್ಎಕ್ಸ್ಆರ್ 160 ಆವೃತ್ತಿಯನ್ನು ಇದೀಗ ಭಾರತದಲ್ಲೂ ಬಿಡುಗಡೆ ಮಾಡಿದ್ದು, ಹೊಸ ಮ್ಯಾಕ್ಸಿ ಸ್ಕೂಟರ್ ಮಾದರಿಯು ದುಬಾರಿ ಬೆಲೆಯ ನಡುವೆಯೂ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಹೊಸ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ಮಾದರಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 1.26 ಲಕ್ಷ ಬೆಲೆ ಹೊಂದಿದ್ದು, ಸಾಮಾನ್ಯ ಮಾದರಿಯ ಸ್ಕೂಟರ್ ಮಾದರಿಗಳಿಂತಲೂ ವಿಭಿನ್ನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯಲ್ಲಿ ಎಂಜಿನ್ ಆಯ್ಕೆಗೆ ತಕ್ಕಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ದೊಡ್ಡ ಗಾತ್ರದ ವಿನ್ಯಾಸವು ಇತರೆ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚು ಭಿನ್ನವಾಗಿ ಕಾಣಲು ಪ್ರಮುಖ ಕಾರಣವಾಗಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್‌ ಆವೃತ್ತಿಯು ಸ್ಪೀಟ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್ಎಸ್, ಟರ್ನ್ ಇಂಡಿಕೇಟರ್, ಆಕರ್ಷಕವಾದ ವೀಂಡ್ ಸ್ಕ್ರೀನ್, ಆರಾಮದಾಯಕವಾದ ಸಿಂಗಲ್ ಪೀಸ್ ಸೀಟ್, ಎಲ್ಇಡಿ ಟೈಲ್ ಲೈಟ್ಸ್ ಸೌಲಭ್ಯದೊಂದಿಗೆ ಬಲಿಷ್ಠ ವಿನ್ಯಾಸ ಹೊಂದಿದ್ದು, ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸುವ ಒಂದೇ ಸೂರಿನಡಿ ನಿಯಂತ್ರಿಸುವ ಮಲ್ಟಿ ಫಂಕ್ಷನಲ್ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಮಲ್ಟಿ ಫಂಕ್ಷನಲ್ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ನಲ್ಲಿ ಮೈಲೇಜ್ ಇಂಡಿಕೇಟರ್, ಆರ್‌ಪಿಎಂ ಮೀಟರ್, ಅರೇಜ್ ಮತ್ತು ಟಾಪ್ ಸ್ಪೀಡ್ ಮೀಟರ್, ಫ್ಯೂಲ್ ಇಂಡಿಕೇಟರ್ ಜೊತೆ ಕನೆಕ್ಟೆಡ್ ಫೀಚರ್ಸ್‌ಗಳನ್ನು ಸಹ ಜೋಡಿಸಬಹುದು.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯಲ್ಲಿ ಕನೆಕ್ಟೆಡ್ ಫೀಚರ್ಸ್‌ಗಳನ್ನು ಹೆಚ್ಚುವರಿ ಮೊತ್ತಕ್ಕೆ ಅಳವಡಿಸಕೊಳ್ಳಬಹುದಾಗಿದ್ದು, ಕನೆಕ್ಟೆಡ್ ಫೀಚರ್ಸ್ ಇದ್ದಲ್ಲಿ ಸ್ಕೂಟರ್ ಮಾಲೀಕರು ಸ್ಮಾರ್ಟ್ ಫೋನ್ ಮೂಲಕವೇ ಸ್ಕೂಟರಿನ ಪ್ರಮುಖ ತಾಂತ್ರಿಕ ಅಂಶಗಳನ್ನು ಅಪ್ಲೀಕೆಷನ್‌ನಲ್ಲೇ ನಿಯಂತ್ರಣ ಮಾಡಬಹುದಾಗಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯು 160ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 10.5-ಬಿಎಚ್‌ಪಿ, 11.6-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹೊಸ ಸ್ಕೂಟರ್ ಎಪ್ರಿಲಿಯಾ ಕಂಪನಿಯು ಸಿಂಗಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಿದ್ದು, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಚಕ್ರದಲ್ಲಿ ಡ್ರಮ್ ಬ್ರೇಕ್ ನೀಡಲಾಗಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಹಾಗೆಯೇ ಹೊಸ ಸ್ಕೂಟರಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋಕ್ಸ್ ಮತ್ತು ಹಿಂಭಾದಲ್ಲಿ ಮೊನೊ ಶಾಕ್ ಸಸ್ಪೆಷನ್ ಜೋಡಿಸಲಾಗಿದೆ. ಗ್ರಾಹಕರು ಹೊಸ ಸ್ಕೂಟರ್ ಅನ್ನು ನಾಲ್ಕು ಬಣ್ಣಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಗ್ಲಾಸಿ ರೆಡ್, ಮ್ಯಾಟೆ ಬ್ಲ್ಯೂ, ಗ್ಲಾಸಿ ವೈಟ್ ಮ್ಯಾಟೆ ಬ್ಲ್ಯಾಕ್ ಬಣ್ಣ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಎಪ್ರಿಲಿಯಾ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ವಿಶೇಷತೆಗಳೇನು?

ಆಸಕ್ತ ಗ್ರಾಹಕರು ಹೊಸ ಸ್ಕೂಟರ್ ಖರೀದಿಗಾಗಿ ಇಂದಿನಿಂದಲೇ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸಲ್ಲಿಕೆ ಮಾಡಬಹುದಾಗಿದ್ದು, ಶೀಘ್ರದಲ್ಲೇ ಗ್ರಾಹಕರಿಗೆ ವಿತರಣೆಯಾಗಲಿದೆ. ಸದ್ಯ ಹೊಸ ಸ್ಕೂಟರ್ ಮಾದರಿಗೆ ಯಾವುದೇ ಪ್ರತಿಸ್ಪರ್ಧಿ ಮಾದರಿಗಳು ಇಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೋಂಡಾ ಫೋರ್ಜಾ ಮ್ಯಾಕ್ಸಿ ಸ್ಕೂಟರ್ ಮಾದರಿಯು ಈ ಸ್ಕೂಟರ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

More from DriveSpark

Article Published On: Saturday, December 26, 2020, 8:45 [IST]
English summary
Things to know about Aprilia SXR160 Maxi Scooter. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+