ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ವಿಜಯ್ ದೇವರಕೊಂಡ ಹೈದರಾಬಾದ್ ಮೂಲದ ಸ್ಟಾರ್ಟ್ ಅಪ್ ಕಂಪನಿಯಾದ ವಾಟ್ಸ್ ಅಂಡ್ ವೋಲ್ಟ್ಸ್ ಮೊಬಿಲಿಟಿ ಜೊತೆಗೆ ಪಾಲುದಾರಿಕೆ ಮಾಡಿಕೊಂಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ನಟ ವಿಜಯ್ ದೇವರಕೊಂಡ ಈ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಷೇರುಗಳನ್ನು ಖರೀದಿಸಿದ್ದಾರೆ. ವಿಜಯ್ ದೇವರಕೊಂಡ ನಟ ಮಾತ್ರವಲ್ಲದೇ ಯಶಸ್ವಿ ಉದ್ಯಮಿ ಕೂಡ ಹೌದು. ಅವರು ಅನೇಕ ಕಂಪನಿಗಳ ಮಾಲೀಕರೂ ಹೌದು. ವಾಟ್ಸ್ ಅಂಡ್ ವೋಲ್ಟ್ಸ್ ಮೊಬಿಲಿಟಿ ಕಂಪನಿಯು ಲಾಸ್ಟ್ ಮೈಲ್ ಕನೆಕ್ಟಿವಿಟಿಗಾಗಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಒದಗಿಸುತ್ತದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬೌನ್ಸ್ ಹಾಗೂ ವೋಗ್ ಕಂಪನಿಗಳಿಗೆ ಬಾಡಿಗೆಗೆ ನೀಡುತ್ತದೆ. ಈ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ತೆಲಂಗಾಣದ ಮೊದಲ ಸ್ಟಾರ್ಟ್ ಅಪ್ ಕಂಪನಿಯಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ಈ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಮಾತನಾಡಿರುವ ವಿಜಯ್ ದೇವರಕೊಂಡ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚು ಸದ್ದು ಮಾಡಲಿವೆ. ಎಲೆಕ್ಟ್ರಿಕ್ ವಾಹನಗಳು ವಾಯು ಮಾಲಿನ್ಯವನ್ನು ಕಡಿಮೆ ಮಾಡುತ್ತವೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ಜೊತೆಗೆ ಅವುಗಳು ಬಳಸಲು ಸುಲಭವಾಗಿದ್ದು, ಹಣವನ್ನು ಸಹ ಉಳಿಸುತ್ತವೆ. ಮಧ್ಯಮ ವರ್ಗದ ಜನರಿಗೆ ಈ ಕಂಪನಿಯ ಬಾಡಿಗೆ ಸ್ಕೂಟರ್ ಗಳು ಹೆಚ್ಚು ನೆರವಾಗುತ್ತವೆ ಎಂದು ಅವರು ಹೇಳಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ವಾಟ್ಸ್ ಅಂಡ್ ವೋಲ್ಟ್ಸ್ ಮೊಬಿಲಿಟಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕಡಿಮೆ ಬೆಲೆಗೆ ಲಭ್ಯವಾಗುವ ಕಾರಣ ಅವುಗಳು ದುಬಾರಿ ಎನಿಸುವುದಿಲ್ಲ. ವಾಟ್ಸ್ ಅಂಡ್ ವೋಲ್ಟ್ಸ್ ಮೊಬಿಲಿಟಿ ಕಂಪನಿಯು 2021ರಿಂದ ತೆಲಂಗಾಣದ ಹೈದರಾಬಾದ್‌ನಲ್ಲಿ ತನ್ನ ವ್ಯವಹಾರವನ್ನು ಆರಂಭಿಸಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ವಿಜಯ್ ದೇವರಕೊಂಡ ಮಾತ್ರವಲ್ಲದೇ ಹಲವು ಬಾಲಿವುಡ್ ನಟರು ಸಹ ಆಟೋಮೊಬೈಲ್ ಬಾಡಿಗೆ ಸೇವೆಯನ್ನು ನೀಡುವ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ರೋಡೀಸ್ ರಿಯಾಲಿಟಿ ಟಿವಿ ಶೋ ನಿರೂಪಕ ರಣವಿಜಯ್ ಸಿಂಗ್ ಕಾರ್-ಬೈಕ್ ಪೂಲಿಂಗ್ ಸ್ಟಾರ್ಟ್ಅಪ್ ಕಂಪನಿಯಾದ ಲಿಫ್ಟಿಯಲ್ಲಿ ರೂ.75 ಲಕ್ಷ ಹೂಡಿಕೆ ಮಾಡಿದ್ದರೆ, ಜಬ್ ವಿ ಮೆಟ್ ಚಿತ್ರದ ನಟಿ ಸೌಮ್ಯಾ ಟಂಡನ್ ಜುಗ್ನು ರೆಂಟಲ್ ನಲ್ಲಿ ಹೂಡಿಕೆ ಮಾಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಾಡಿಗೆಗೆ ನೀಡುವ ಕಂಪನಿಯಲ್ಲಿ ಹೂಡಿಕೆ ಮಾಡಿದ ಸ್ಟಾರ್ ನಟ

ಭಾರತದಲ್ಲಿ ವಾಹನ ಬಾಡಿಗೆ ಕಂಪನಿಗಳು ವೇಗವಾಗಿ ವಿಸ್ತರಣೆಯಾಗುತ್ತಿವೆ. ದೊಡ್ಡ ದೊಡ್ಡ ನಗರಗಳ ಜೊತೆಗೆ ಓಲಾ ಹಾಗೂ ಉಬರ್‌ನಂತಹ ಕಂಪನಿಗಳು ಸಣ್ಣ ಸಣ್ಣ ನಗರಗಳಲ್ಲಿಯೂ ತಮ್ಮ ಸೇವೆಗಳನ್ನು ಆರಂಭಿಸುತ್ತಿವೆ. ಈ ಪರಿಸ್ಥಿತಿಯಲ್ಲಿ ಈ ಕಂಪನಿಗಳಲ್ಲಿ ಹೂಡಿಕೆ ಮಾಡುವುದರಿಂದ ಹೂಡಿಕೆದಾರರಿಗೆ ಪ್ರಯೋಜನವಾಗಲಿದೆ.

Most Read Articles

Kannada
English summary
Tollywood actor Vijay Devarakonda invests in e scooter rental startup company. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X