ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ಹೆಚ್ಚು ಗಮನಹರಿಸುತ್ತಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ನಿರ್ದಿಷ್ಟ ಪ್ರಮಾಣದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್‍‌ಗಳ ಖರೀದಿ ಭರಾಟೆಯು ಜೋರಾಗಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿದೆ. ಹಾಗಾದ್ರೆ ಭಾರತದಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆ ಏನು? ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮೈಲೇಜ್ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪಡೆಯಿರಿ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

01.ಬಜಾಜ್ ಚೇತಕ್ ಎಲೆಕ್ಟ್ರಿಕ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಹೊಸ ಸ್ಕೂಟರ್‌ನಲ್ಲಿ ರಿರ್ವಸ್ ಅಸಿಸ್ಟ್ ಮೋಡ್ ಸೌಲಭ್ಯ ಕೂಡಾ ಇದ್ದು, ಹೊಸ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಎಥರ್ 450

ಬೆಂಗಳೂರು ಮೂಲದ ಎಥರ್ ಎನರ್ಜಿ ಸಂಸ್ಥೆಯು ಕಳೆದ ವರ್ಷವೇ 340 ಮತ್ತು 450 ಎನ್ನುವ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆ ಮಾಡಿತ್ತು. ಆದರೆ ಗ್ರಾಹಕರ ಬೇಡಿಕೆಯಲ್ಲಿ 450 ಸ್ಕೂಟರ್ ಮಾದರಿಯು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದ ಕಾರಣಕ್ಕೆ 340 ಸ್ಕೂಟರ್ ಅನ್ನು ಸ್ಥಗಿತಗೊಳಿಸಿತ್ತು. 450 ಸ್ಕೂಟರ್ ಮಾದರಿಯು 2.4kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ 5.4kW ಪವರ್‌ನೊಂದಿಗೆ 20.5ಎನ್ಎಂ ಟಾರ್ಕ್‌ ಉತ್ಪಾದನೆ ಮಾಡುತ್ತದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಇದರೊಂದಿಗೆ ಪ್ರತಿ ಗಂಟೆಗೆ 80ಕಿ.ಮೀ ಟಾಪ್ ಸ್ಪೀಡ್ ಸಾಮಾರ್ಥ್ಯ ಹೊಂದಿರುವ 450 ಮಾದರಿಯು ಪ್ರತಿ ಚಾರ್ಜ್‌ಗೆ 75 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಬೆಂಗಳೂರಿನಲ್ಲಿ ಈ ಸ್ಕೂಟರ್ ಬೆಲೆಯು ಆನ್-ರೋಡ್ ಪ್ರಕಾರ ರೂ.1.13 ಲಕ್ಷಕ್ಕೆ ಲಭ್ಯವಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಎಥರ್ 450ಎಕ್ಸ್

ಎಥರ್ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಲಾಗಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಅಭಿವೃದ್ದಿ ಯೋಜನೆ ರೂಪಿಸುತ್ತಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಪ್ಯಾನ್ ಇಂಡಿಯಾ ಪ್ರಕಾರ ರೂ.99 ಸಾವಿರ ಎಕ್ಸ್‌ಶೋರೂಂ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು. ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಟಿವಿಎಸ್ ಐಕ್ಯೂಬ್

ಟಿವಿಎಸ್ ಬಿಡುಗಡೆಗೊಳಿಸಿರುವ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಆನ್‌-ರೋಡ್ ಪ್ರಕಾರ ರೂ.1.15 ಲಕ್ಷ ಬೆಲೆ ಹೊಂದಿದ್ದು, ಮೊದಲ ಹಂತವಾಗಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬೆಂಗಳೂರಿನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾದ ವಾತಾವರಣವಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್ ಕೊರತೆಯಿಂದಾಗಿ ಇವಿ ವಾಹನಗಳ ಮಾರಾಟಕ್ಕೆ ಹಿನ್ನಡೆಯಾಗುತ್ತಿದ್ದು, ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ಟಿವಿಎಸ್ ಸಂಸ್ಥೆಯು ಹೊಸ ಸ್ಕೂಟರ್ ಮಾರಾಟವನ್ನು ಹಂತ ಹಂತವಾಗಿ ವಿವಿಧ ನಗರಗಳಿಗೆ ವಿಸ್ತರಣೆ ಮಾಡಲಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಿಂತಲೂ ಆಕರ್ಷಕ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಹೊತ್ತುಬಂದಿದ್ದು, ಹೊಸ ಸ್ಕೂಟರ್‌ನಲ್ಲಿ 4.4kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಲಾಗಿದೆ. ಇದು ಪ್ರತಿ ಗಂಟೆಗೆ ಗರಿಷ್ಠ 78 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಎಕಾನಮಿ ಮತ್ತು ಪವರ್ ಮೊಡ್ ಮೂಲಕ ಅತ್ಯುತ್ತಮ ರೈಡಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎಕಾನಮಿ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 75ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಪವರ್ ಮೋಡ್‌ ಮೂಲಕ ರೈಡಿಂಗ್ ಮಾಡಿದ್ದಲ್ಲಿ ಗರಿಷ್ಠ 70 ಕಿ.ಮೀ ಮೈಲೇಜ್ ಪಡೆಯಬಹುದಾಗಿದೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಹೀರೋ ಆಪ್ಟಿಮಾ ಇ‍‍ಆರ್, ಎನ್‍‍ವೈ‍ಎಕ್ಸ್ ಇ‍ಆರ್

ಹೀರೋ ಎಲೆಕ್ಟ್ರಿಕ್ ಸಂಸ್ಥೆಯು ಬಿಡುಗಡೆ ಮಾಡಿರುವ ಆಪ್ಟಿಮಾ ಇ‍‍ಆರ್ ಹಾಗೂ ಎನ್‍‍ವೈ‍ಎಕ್ಸ್ ಇ‍ಆರ್ ಎಂಬ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್‍‍ಗಳು ಎಕ್ಸ್ ಶೋರೂಂ ದರದಂತೆ ಕ್ರಮವಾಗಿ ರೂ.68,721 ಹಾಗೂ ರೂ.69,754 ಬೆಲೆ ಹೊಂದಿದ್ದು, 40 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ 100 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿವೆ.

ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..!

ಆಪ್ಟಿಮಾ ಇಆರ್ ಸ್ಕೂಟರ್‌ನಲ್ಲಿ 48 ವೋಲ್ಟ್ ಸಿಂಗಲ್ ಬ್ಯಾಟರಿ ಪ್ಯಾಕ್‌ ಹೊಂದಿರುವ 600 ವ್ಯಾಟ್‍‍ನ ಬಿಎಲ್‌ಡಿಸಿ ಎಲೆಕ್ಟ್ರಿಕ್ ಮೋಟರ್‌ ಜೋಡಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸ್ಟ್ಯಾಂಡರ್ಡ್ ಸ್ಕೂಟರ್‍‍ನಂತಹ ಪರ್ಫಾಮೆನ್ಸ್ ನೀಡಲಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಅನ್ನು ಪ್ರತಿ ಗಂಟೆಗೆ 40 ಕಿ.ಮೀ ಎಂದು ನಿಗದಿಪಡಿಸಲಾಗಿದೆ.

Most Read Articles

Kannada
English summary
Top 5 Electric Scooters in India here is the list. Read in Kannada.
Story first published: Wednesday, February 26, 2020, 18:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X