ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್
ಟ್ರಯಂಫ್ ಮೋಟಾರ್‌ಸೈಕಲ್ ತನ್ನ ರಾಕೆಟ್ 3 ಬೈಕನ್ನು ಕಳೆದ ವರ್ಷ ನಡೆದ 2019 ಇಂಡಿಯಾ ಬೈಕ್ ವೀಕ್‌ನಲ್ಲಿ ಅನಾವರಣಗೊಳಿಸಿದ್ದರು. ನಂತರ ಟ್ರಯಂಫ್ ಕಂಪನಿಯು ಕೇವಲ ರಾಕೆಟ್ 3 ಆರ್ ಮಾದರಿಯನ್ನು ಮಾತ್ರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು.

ಇದೀಗ ರಾಕೇಟ್ 3 ಜಿಟಿ ಮಾದರಿಯನ್ನು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದ್ದಾರೆ. ಹೊಸ ತಲೆಮಾರಿನ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ 2021ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಲಿದೆ ಎಂದು ಟ್ರಯಂಫ್ ಮೋಟಾರ್‌ಸೈಕಲ್ಸ್ ಇಂಡಿಯಾದ ಬ್ಯುಸಿನೆಸ್ ಹೆಡ್, ಶೂಯೆಬ್ ಫಾರೂಕ್ ಮಾಧ್ಯಮವೊಂದರ ಸಂದರ್ಶನದ ವೇಳೆ ಇವರು ಹೇಳಿದ್ದಾರೆ.

ರಾಕೆಟ್ 3 ಜಿಟಿ ಬೈಕ್ ಅನ್ನು ಬ್ರಿಟಿನ್ ಮೂಲದ ಟ್ರಯಂಫ್ ಕಂಪನಿಯ ಹೊಸ ಪ್ಲಾಟ್‍ಫಾರಂ ಆಧಾರದ ಮೇಲೆ ನಿರ್ಮಿಸಲಾಗಿದೆ. 2020ರ ಹೊಸ ಟ್ರಯಂಫ್ ರಾಕೆಟ್ 3 ಜಿಟಿ ಬೈಕಿನಲ್ಲಿ ಮಾಸ್ ಬೈಕುಗಳಲ್ಲಿಯೇ ಅತಿ ದೊಡ್ಡದು ಎನ್ನಲಾದ 2,500 ಸಿಸಿಯ ಇನ್ ಲೈನ್ 3 ಸಿಲಿಂಡರ್ ಲಿಕ್ವಿಡ್ ಕೂಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ 6,000 ಆರ್‍ಪಿಎಂನಲ್ಲಿ 167 ಬಿಹೆಚ್‍ಪಿ ಪವರ್ ಹಾಗೂ 4,000 ಆರ್‍ಪಿಎಂನಲ್ಲಿ 221 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಹೊಸದಾದ ಕ್ರಾಂಕ್‍ಕೇಸ್ ಅಸೆಂಬ್ಲಿ, ಬ್ಯಾಲೆನ್ಸರ್ ಶಾಫ್ಟ್ ಹಾಗೂ ಲ್ಯುಬ್ರಿಕೇಷನ್ ಸಿಸ್ಟಂಗಳನ್ನು ಹೊಂದಿದೆ. ಇದರಿಂದಾಗಿ ಈ ಎಂಜಿನ್‍ನ ತೂಕವು 18 ಕೆ.ಜಿಯಷ್ಟು ಕಡಿಮೆಯಾಗಿದೆ.

ಟ್ರಯಂಫ್ ಕಂಪನಿಯು ಈ ಬೈಕಿನ ತೂಕವನ್ನು ಹಳೆಯ ತಲೆಮಾರಿನ ಬೈಕಿಗೆ ಹೋಲಿಸಿದರೆ ಸುಮಾರು 40 ಕೆ.ಜಿಯಷ್ಟು ಕಡಿಮೆಗೊಳಿಸಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಹಲವಾರು ಫೀಚರ್ ಹಾಗೂ ಎಲೆಕ್ಟ್ರಾನಿಕ್ ಎಕ್ವಿಪ್‍ಮೆಂಟ್‍ಗಳಿವೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

2020ರ ರಾಕೆಟ್ 3 ಜಿಟಿ ಬೈಕಿನಲ್ಲಿ ಹೀಟೆಡ್ ಗ್ರಿಪ್, ಟಾರ್ಕ್ ಅಸಿಸ್ಟೆಡ್ ಕ್ಲಚ್, ಎಲ್ಇಡಿ ಹೆಡ್‌ಲ್ಯಾಂಪ್, ಟೇಲ್‌ಲೈಟ್, ಎಕ್ಸ್ ಟೆಂಡೆಡ್ ಫ್ಲೈ ಸ್ಕ್ರೀನ್, ಅಡ್ಜಸ್ಟಬಲ್ ಫುಟ್‌ಪೆಗ್, ಹಗುರ ತೂಕದ 20 ಸ್ಪೋಕ್ ಅಲ್ಯೂಮಿನಿಯಂ ವ್ಹೀಲ್ ಸೇರಿದಂತೆ ಹಲವು ಸ್ಟಾಂಡರ್ಡ್ ಫೀಚರ್‍ಗಳಿವೆ.

ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ ಹೊಸ ಅಲ್ಯುಮಿನಿಯಂ ಚಾಸೀಸ್ ಅನ್ನು ಸಹ ಹೊಂದಿದೆ. ಇದು ಬೃಹತ್ ಎಂಜಿನ್‍ನ ಒತ್ತಡ ನಿವಾರಿಸುವಂತೆ ಕಾರ್ಯನಿರ್ವಹಿಸುತ್ತದೆ. ಇದರ ಜೊತೆಗೆ ಸಸ್ಪೆಂಷನ್ ಹಾಗೂ ಬ್ರೇಕ್‍ಗಳನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ರಾಕೆಟ್ 3 ಜಿಟಿ ಬೈಕಿನಲ್ಲಿ ಸಸ್ಪೆಂಷನ್‍ಗಳಿಗಾಗಿ ಮುಂಭಾಗದಲ್ಲಿ 47 ಎಂಎಂ ಯುಎಸ್‍ಡಿ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್‍ಗಳಿವೆ. ಮುಂಭಾಗದ ಸಸ್ಪೆಂಷನ್ 120 ಎಂಎಂ ಟ್ರಾವೆಲ್‍ನೊಂದಿಗೆ ಬಂದರೆ, ಹಿಂಭಾಗವು 107 ಎಂಎಂ ಟ್ರಾವೆಲ್‍ನೊಂದಿಗೆ ಬರುತ್ತದೆ. ಈ ಎರಡೂ ಸಸ್ಪೆಂಷನ್‍ಗಳು ಶೋವಾ ಕಂಪನಿಯಾದಾಗಿವೆ

ಮುಂಭಾಗದ ಸಸ್ಪೆಂಷನ್ ಕಂಪ್ರೆಷನ್ ಹಾಗೂ ರಿಬೌಂಡ್ ಅಡ್ಜಸ್ಟಬಿಲಿಟಿಯೊಂದಿಗೆ ಬರುತ್ತದೆ. ಹಿಂಭಾಗದ ಸಸ್ಪೆಂಷನ್ ರಿಮೋಟ್ ಅಡ್ಜಸ್ಟರ್ ಹೊಂದಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ ಸಿಂಗಲ್ 300 ಎಂಎಂ ಡಿಸ್ಕ್ ಗಳಿವೆ.


Click it and Unblock the Notifications








