ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಟ್ರಯಂಫ್ ಮೋಟಾರ್‌ಸೈಕಲ್ ತನ್ನ ರಾಕೆಟ್ 3 ಬೈಕನ್ನು ಕಳೆದ ವರ್ಷ ನಡೆದ 2019 ಇಂಡಿಯಾ ಬೈಕ್ ವೀಕ್‌ನಲ್ಲಿ ಅನಾವರಣಗೊಳಿಸಿದ್ದರು. ನಂತರ ಟ್ರಯಂಫ್ ಕಂಪನಿಯು ಕೇವಲ ರಾಕೆಟ್ 3 ಆರ್ ಮಾದರಿಯನ್ನು ಮಾತ್ರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು.

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಇದೀಗ ರಾಕೇಟ್ 3 ಜಿಟಿ ಮಾದರಿಯನ್ನು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದ್ದಾರೆ. ಹೊಸ ತಲೆಮಾರಿನ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ 2021ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಲಿದೆ ಎಂದು ಟ್ರಯಂಫ್ ಮೋಟಾರ್‌ಸೈಕಲ್ಸ್ ಇಂಡಿಯಾದ ಬ್ಯುಸಿನೆಸ್ ಹೆಡ್, ಶೂಯೆಬ್ ಫಾರೂಕ್ ಮಾಧ್ಯಮವೊಂದರ ಸಂದರ್ಶನದ ವೇಳೆ ಇವರು ಹೇಳಿದ್ದಾರೆ.

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ರಾಕೆಟ್ 3 ಜಿಟಿ ಬೈಕ್ ಅನ್ನು ಬ್ರಿಟಿನ್ ಮೂಲದ ಟ್ರಯಂಫ್ ಕಂಪನಿಯ ಹೊಸ ಪ್ಲಾಟ್‍‍ಫಾರಂ ಆಧಾರದ ಮೇಲೆ ನಿರ್ಮಿಸಲಾಗಿದೆ. 2020ರ ಹೊಸ ಟ್ರಯಂಫ್ ರಾಕೆಟ್ 3 ಜಿಟಿ ಬೈಕಿನಲ್ಲಿ ಮಾಸ್ ಬೈಕುಗಳಲ್ಲಿಯೇ ಅತಿ ದೊಡ್ಡದು ಎನ್ನಲಾದ 2,500 ಸಿಸಿಯ ಇನ್ ಲೈನ್ 3 ಸಿಲಿಂಡರ್ ಲಿಕ್ವಿಡ್ ಕೂಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಈ ಎಂಜಿನ್ 6,000 ಆರ್‍‍ಪಿ‍ಎಂನಲ್ಲಿ 167 ಬಿ‍‍ಹೆಚ್‍‍ಪಿ ಪವರ್ ಹಾಗೂ 4,000 ಆರ್‍‍ಪಿ‍ಎಂನಲ್ಲಿ 221 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಹೊಸದಾದ ಕ್ರಾಂಕ್‍‍ಕೇಸ್ ಅಸೆಂಬ್ಲಿ, ಬ್ಯಾಲೆನ್ಸರ್ ಶಾಫ್ಟ್ ಹಾಗೂ ಲ್ಯುಬ್ರಿಕೇಷನ್ ಸಿಸ್ಟಂಗಳನ್ನು ಹೊಂದಿದೆ. ಇದರಿಂದಾಗಿ ಈ ಎಂಜಿನ್‍‍ನ ತೂಕವು 18 ಕೆ.ಜಿಯಷ್ಟು ಕಡಿಮೆಯಾಗಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಟ್ರಯಂಫ್ ಕಂಪನಿಯು ಈ ಬೈಕಿನ ತೂಕವನ್ನು ಹಳೆಯ ತಲೆಮಾರಿನ ಬೈಕಿಗೆ ಹೋಲಿಸಿದರೆ ಸುಮಾರು 40 ಕೆ.ಜಿಯಷ್ಟು ಕಡಿಮೆಗೊಳಿಸಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಹಲವಾರು ಫೀಚರ್ ಹಾಗೂ ಎಲೆಕ್ಟ್ರಾನಿಕ್ ಎಕ್ವಿಪ್‍‍ಮೆಂಟ್‍‍ಗಳಿವೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

2020ರ ರಾಕೆಟ್ 3 ಜಿಟಿ ಬೈಕಿನಲ್ಲಿ ಹೀಟೆಡ್ ಗ್ರಿಪ್, ಟಾರ್ಕ್ ಅಸಿಸ್ಟೆಡ್ ಕ್ಲಚ್, ಎಲ್ಇಡಿ ಹೆಡ್‌ಲ್ಯಾಂಪ್‌, ಟೇಲ್‌ಲೈಟ್‌, ಎಕ್ಸ್ ಟೆಂಡೆಡ್ ಫ್ಲೈ ಸ್ಕ್ರೀನ್, ಅಡ್ಜಸ್ಟಬಲ್ ಫುಟ್‌ಪೆಗ್‌, ಹಗುರ ತೂಕದ 20 ಸ್ಪೋಕ್ ಅಲ್ಯೂಮಿನಿಯಂ ವ್ಹೀಲ್ ಸೇರಿದಂತೆ ಹಲವು ಸ್ಟಾಂಡರ್ಡ್ ಫೀಚರ್‍‍ಗಳಿವೆ.

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ ಹೊಸ ಅಲ್ಯುಮಿನಿಯಂ ಚಾಸೀಸ್ ಅನ್ನು ಸಹ ಹೊಂದಿದೆ. ಇದು ಬೃಹತ್ ಎಂಜಿನ್‍‍ನ ಒತ್ತಡ ನಿವಾರಿಸುವಂತೆ ಕಾರ್ಯನಿರ್ವಹಿಸುತ್ತದೆ. ಇದರ ಜೊತೆಗೆ ಸಸ್ಪೆಂಷನ್ ಹಾಗೂ ಬ್ರೇಕ್‍‍ಗಳನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ರಾಕೆಟ್ 3 ಜಿಟಿ ಬೈಕಿನಲ್ಲಿ ಸಸ್ಪೆಂಷನ್‍‍ಗಳಿಗಾಗಿ ಮುಂಭಾಗದಲ್ಲಿ 47 ಎಂಎಂ ಯುಎಸ್‍‍ಡಿ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್‍‍ಗಳಿವೆ. ಮುಂಭಾಗದ ಸಸ್ಪೆಂಷನ್ 120 ಎಂಎಂ ಟ್ರಾವೆಲ್‍‍ನೊಂದಿಗೆ ಬಂದರೆ, ಹಿಂಭಾಗವು 107 ಎಂಎಂ ಟ್ರಾವೆಲ್‍‍ನೊಂದಿಗೆ ಬರುತ್ತದೆ. ಈ ಎರಡೂ ಸಸ್ಪೆಂಷನ್‍‍ಗಳು ಶೋವಾ ಕಂಪನಿಯಾದಾಗಿವೆ

ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ರಾಕೆಟ್ 3 ಜಿಟಿ ಬೈಕ್

ಮುಂಭಾಗದ ಸಸ್ಪೆಂಷನ್ ಕಂಪ್ರೆಷನ್ ಹಾಗೂ ರಿಬೌಂಡ್ ಅಡ್ಜಸ್ಟಬಿಲಿಟಿಯೊಂದಿಗೆ ಬರುತ್ತದೆ. ಹಿಂಭಾಗದ ಸಸ್ಪೆಂಷನ್ ರಿಮೋಟ್ ಅಡ್ಜಸ್ಟರ್ ಹೊಂದಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಬ್ರೇಕಿಂಗ್‍‍ಗಳಿಗಾಗಿ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ ಸಿಂಗಲ್ 300 ಎಂಎಂ ಡಿಸ್ಕ್ ಗಳಿವೆ.

Most Read Articles

Kannada
English summary
Triumph Rocket 3 GT Coming To India Next Year. Read In Kannada.
Story first published: Friday, May 29, 2020, 21:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X