ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟ್ರಯಂಫ್ ಮುಂದಿನ ವರ್ಷ ಭಾರತದಲ್ಲಿ ಆಕ್ರಮಣಕಾರಿ ಮಾರುಕಟ್ಟೆ ತಂತ್ರಗಳನ್ನು ಅನುಸರಿಸಲು ಮುಂದಾಗಲಿದೆ. ಮುಂದಿನ ಆರು ತಿಂಗಳಲ್ಲಿ ಒಂಬತ್ತು ಹೊಸ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಕಂಪನಿಯು ಯೋಜಿಸುತ್ತಿವೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಪಿಟಿಐ ವರದಿ ಪ್ರಕಾರ, ಟ್ರಯಂಫ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಿಭಾಗದಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಮಾಡುತ್ತಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಟ್ರಯಂಫ್ ಕಂಪನಿಯು ಟ್ರಯಂಫ್ ಕಂಪನಿಯು ಶೇ.25 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟ್ರಯಂಫ್ ಬೈಕುಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಟ್ರಯಂಫ್ ಮೋಟರ್ ಸೈಕಲ್ಸ್ ಇಂಡಿಯಾದ ಬಿಸಿನೆಸ್ ಹೆಡ್ ಶೋಯೆಬ್ ಫಾರೂಕ್ ಪಿಟಿಐ ಸಂದರ್ಶನದಲ್ಲಿ ಮಾತನಾಡಿ, ನಾವು ಜನವರಿಯಿಂದ ಜೂನ್ ವರೆಗೆ ಒಂಬತ್ತು ಹೊಸ ಮಾದರಿಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದೇವೆ, ಇದು ನಮ್ಮ ಪ್ರಸ್ತುತ ಮಾದರಿಯ ಕೆಲವು ವಿಶೇಷ ವೆರಿಯೆಂಟ್ ಗಳನ್ನು ಒಳಗೊಂಡಿರುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಪ್ರಸ್ತುತ ಕೆಲವು ಮಾದರಿಗಳ ಅಪ್ದೇಟ್ ವರ್ಷನ್ ಗಳು ಕೂಡ ಈ ಪಟ್ಟಿಯಲ್ಲಿ ಇರಲಿದೆ. ಇವೆಲ್ಲವನ್ನೂ ಒಟ್ಟುಗೂಡಿಸಿ, ಜನವರಿಯಿಂದ ಆರು ತಿಂಗಳವರೆಗೆ ನಾವು ತುಂಬಾ ಕಾರ್ಯನಿರತವಾಗಲಿದ್ದೇವೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಉದ್ಯಮದ ಬೆಳವಣಿಗೆಯ ಹೊರತಾಗಿಯೂ ಬ್ರ್ಯಾಂಡ್ ಆಗಿ ಟ್ರಯಂಫ್ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಸಾಂಕ್ರಾಮಿಕ ಅವಧಿ ಸೇರಿದಂತೆ ಕಳೆದ 6-7 ತಿಂಗಳುಗಳಲ್ಲಿ ಟ್ರಯಂಫ್ ಬೈಕುಗಳ ಮಾರಾಟದಲ್ಲಿ ಉತ್ತಮ ಚೇತರಿಕೆ ಕಾಣುತ್ತಿದೆ. ಟ್ರಯಂಫ್ ಬೈಕುಗಳ ಮಾರಾಟದಲ್ಲಿ ಶೇ.12 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ ಎಂದು ಹೇಳಿದರು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಟ್ರಯಂಫ್ ಮೋಟಾರ್‌ಸೈಕಲ್‌ ಕಂಪನಿಯು ಭಾರತದಲ್ಲಿ ಈಗಾಗಲೇ ಹಲವಾರು ಸರಣಿಯ ಬೈಕುಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದರಲ್ಲಿ ರೋಡ್ಸ್ಟರ್‌ಗಳು, ಅಡ್ವೆಂಚರ್ ಟೂರರ್, ಮಾರ್ಡನ್ ಕ್ಲಾಸಿಕ್ ಮತ್ತು ಐಷಾರಾಮಿ ರಾಕೆಟ್ 3 ಜಿಟಿ ಬೈಕುಗಳು ಸೇರಿವೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಇನ್ನು ಟ್ರಯಂಫ್ ತನ್ನ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕನ್ನು ಜಾಗತಿವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಮಾದರಿಯಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಟ್ರಯಂಫ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಟ್ರಯಂಫ್ ಟ್ರೈಡೆಂಟ್ 660 ಬೈಕಿಗಾಗಿ ಪ್ರಿ ಬುಕ್ಕಿಂಗ್ ಅನ್ನು ಈಗಾಗಲೇ ಆರಂಭಿಸಿದ್ದಾರೆ. ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದ್ದು,

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಜಾಗತಿಕವಾಗಿ ಬಹುನಿರೀಕ್ಷೆಯನ್ನು ಹುಟ್ಟು ಹಾಕಿದ ಬೈಕ್ ಇದಾಗಿದೆ. ಈ ಹೊಸ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಸಹ ಹೊಂದಿದೆ. ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಹೊಸ ವಿನ್ಯಾಸ ಶೈಲಿಯನ್ನು ಒಳಗೊಂಡಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನಲ್ಲಿ ಇನ್-ಲೈನ್ ಮೂರು-ಸಿಲಿಂಡರ್ 660 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,250 ಆರ್‌ಪಿಎಂನಲ್ಲಿ 80 ಬಿಹೆಚ್‌ಪಿ ಮತ್ತು 6,250 ಆರ್‌ಪಿಎಂನಲ್ಲಿ 64 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಎಂಜಿನ್ ನೊಂದಿಗೆ ಸ್ಲಿಪ್/ಅಸಿಸ್ಟ್ ಕ್ಲಚ್‌ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಎಂಟ್ರಿ-ಲೆವೆಲ್ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಮುಂದಿನ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟ್ರಯಂಫ್ ಟ್ರೈಡೆಂಟ್ 660 ಬೈಕಿಗೆ ಸ್ಮರ್ಧಾತ್ಮಕ ಬೆಲೆಯನ್ನು ನಿಗಧಿಪಡಿಸಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್ 650 ಬೈಕಿಗೆ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಮುಂದಿನ 6 ತಿಂಗಳಲ್ಲಿ 9 ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ ಟ್ರಯಂಫ್

ಟ್ರಯಂಫ್ ಭಾರತೀಯ ಮಾರುಕಟ್ಟೆಯ ಪ್ರೀಮಿಯಂ ಬೈಕುಗಳ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದ್ದಾರೆ. ಟ್ರಯಂಫ್ ಕಂಪನಿಯು ಹೊಸ ಮಾದರಿಗಳನ್ನು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳುಗಳಲ್ಲಿ ಪರಿಚಯಿಸಲಿದೆ.

Most Read Articles

Kannada
English summary
Triumph Motorcycles To Launch Nine New Bikes In Next Six Months. Read In kannada.
Story first published: Tuesday, December 15, 2020, 19:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X