ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ರೇಡಿಯಾನ್ ಬೈಕಿನ ಮೇಲೆ ದೀಪಾವಳಿ ಸಂಭ್ರಮಾಚರಣೆಯ ಪ್ರಯುಕ್ತ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಹಬ್ಬದ ಸೀಸನ್‌ನಲ್ಲಿ ರೇಡಿಯಾನ್ ಬೈಕಿನ ಮಾರಾಟವನ್ನು ಹೆಚ್ಚಿಸಲು ಈ ಭರ್ಜರಿ ಆಫರ್ ಅನ್ನು ನೀಡಲಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ರೂ.1,999 ಗಳ ಕಡಿಮೆ ಇಎಂಐಗಳನ್ನು ಮತ್ತು ಹೊಸ ರೇಡಿಯಾನ್ ಖರೀದಿಗೆ 6.99% ಕಡಿಮೆ ಬಡ್ಡಿದರವನ್ನು ನೀಡುತ್ತಿದೆ. ಇನ್ನು ಟಿವಿಎಸ್ ರೂ.14,999 ಗಳ ಡೌನ್ ಪೇಮೆಂಟ್ ಅನ್ನು ಒದಗಿಸುತ್ತದೆ. ಟಿವಿಎಸ್ ರೇಡಿಯಾನ್ ಬೈಕ್ ಖರೀದಿಸುವಾಗ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಿದರೆ ರೂ.5,000 ಗಳವರೆಗೆ ಕ್ಯಾಶ್‌ಬ್ಯಾಕ್ ಲಭಿಸುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಜನಪ್ರಿಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ರೇಡಿಯಾನ್ 110ಸಿಸಿ ಬೈಕನ್ನು ಮೊದಲ ಬಾರಿಗೆ ಭಾರತದಲ್ಲಿ 2018ರ ಆಗಸ್ಟ್‌ನಲ್ಲಿ ಬಿಡುಗಡೆಗೊಳಿಸಿತ್ತು. ಇತ್ತೀಚೆಗೆ ಈ ಟಿವಿಎಸ್ ರೇಡಿಯಾನ್ ಬೈಕ್ ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಟಿವಿಎಸ್ ರೇಡಿಯಾನ್ ಬೈಕಿನ ಮೂರು ಲಕ್ಷ ಯೂನಿಟ್‌ಗಳು ಮಾರಾಟವಾಗಿ ಹೊಸ ಮೈಲುಗಲ್ಲು ಮುಟ್ಟಿದೆ. ಇತ್ತೀಚೆಗೆ ಟಿವಿಎಸ್ ರೇಡಿಯಾನ್ ಬೈಕ್ ಹೊಸ ರೀಗಲ್ ಬ್ಲೂ ಮತ್ತು ಕ್ರೋಮ್ ಪರ್ಪಲ್ ಎಂಬ ಎರಡು ಹೊಸ ಬಣ್ಣಗಳನ್ನು ಪಡೆದುಕೊಂಡಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಟಿವಿಎಸ್ ಮೋಟಾರ್ ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ 2020ರ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.59,942 ಗಳಾಗಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 7,350 ಆರ್‌ಪಿಎಂನಲ್ಲಿ 8.08 ಬಿಹೆಚ್‌ಪಿ ಪವರ್ ಮತ್ತು 4,500 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಎಂಜಿನ್ ನೊಂದಿಗೆ ನಾಲ್ಕು-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ನಲ್ಲಿ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರ್ಪಡಿಸಲಾಗಿದೆ. ಈ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್ 79.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೇಲ್ ಲ್ಯಾಂಪ್‌ಗಳು ಮತ್ತು ಹಿಂಭಾಗದಲ್ಲಿ ಲಗೇಜ್ ರ್ಯಾಕ್ ಅನ್ನು ಹೊಂದಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ರೇಡಿಯಾನ್ ಬೈಕಿನ ಮೇಲೆ ಭರ್ಜರಿ ಆಫರ್

ಬಿಎಸ್-6 ರೇಡಿಯಾನ್ ಬೈಕ್ ಡಿಸ್ಕ್ ಬ್ರೇಕ್ ಮತ್ತು ಡ್ರಮ್ ಬ್ರೇಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಡಿಸ್ಕ್ ಬ್ರೇಕ್ ರೂಪಾಂತರವು ಈಗ 118 ಕೆಜಿ ತೂಕವನ್ನು ಹೊಂದಿದ್ದರೆ, ಡ್ರಮ್ ಬ್ರೇಕ್ ರೂಪಾಂತರವು 116 ಕೆಜಿ ತೂಕವನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಸಿಂಕ್ರೊನೈಸ್ಡ್ ಬ್ರೇಕಿಂಗ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

Most Read Articles

Kannada
English summary
TVS Radeon Is Available At Exciting Offers This Festive Season. Read In Kannada.
Story first published: Saturday, October 31, 2020, 12:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X