ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಸರಣಿಯಲ್ಲಿರುವ ಜನಪ್ರಿಯ ಸ್ಕೂಟರ್ ಮತ್ತು ಬೈಕುಗಳ ಮೇಲೆ ದೀಪಾವಳಿ ಸಂಭ್ರಮಾಚರಣೆಯ ಪ್ರಯುಕ್ತ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಈ ಆಫರ್ ಜೂಪಿಟರ್, ಎನ್‌ಟಾರ್ಕ್ 125, ರೇಡಿಯಾನ್ ಮತ್ತು ಅಪಾಚೆ ಆರ್‌ಟಿಆರ್ 160 4ವಿ ಮಾದರಿಗಳ ಮೇಲೆ ಲಭ್ಯವಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಟಿವಿಎಸ್ ಮೋಟಾರ್ ಕಂಪನಿಯ ಈ ಆಫರ್ ನಲ್ಲಿ ಶೇ.100 ರಷ್ಟು ಧನಸಹಾಯ, ಕಡಿಮೆ ಇಎಂಐ ಯೋಜನೆಗಳು ಮತ್ತು ಕಡಿಮೆ ಬಡ್ಡಿದರವನ್ನು ಒಳಗೊಂಡಿದೆ. ಈ ಆಫರ್ ಭಾರತದ ಎಲ್ಲಾ ಟಿವಿಎಸ್ ಡೀಲರುಗಳಲ್ಲಿ ಲಭ್ಯವಿದೆ. ಈ ತಿಂಗಳ ಅಂತ್ಯದವರೆಗೂ ಈ ಆಫರ್ ಗಳು ಲಭ್ಯವಿರುತ್ತದೆ. ಈ ಹಬ್ಬದ ಸೀಸನ್ ನಲ್ಲಿ ತನ್ನ ಗ್ರಾಹಕರಿಗೆ ಕೆಲವು ಪ್ರಯೋಜನಗಳನ್ನು ಪರಿಚಯಿಸಲು ಐಡಿಎಫ್‌ಸಿ ಮತ್ತು ಐಸಿಐಸಿಐನಂತಹ ಒಂದೆರಡು ಬ್ಯಾಂಕುಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನೊಂದಿಗಿನ ಸಹಭಾಗಿತ್ವದಲ್ಲಿ ಸಂಭಾವ್ಯ ಗ್ರಾಹಕರು ಶೇ.100 ಧನಸಹಾಯ, 6.99 ರಷ್ಟು ಕಡಿಮೆ ಬಡ್ಡಿದರ, ಶೇ.50 ರಷ್ಟು ಕಡಿಮೆ ಇಎಂಐ ಮತ್ತು ಬಾಡಿಗೆ ಐಪಿ ಯೋಜನೆಗಳನ್ನು ಪಡೆಯಬಹುದು.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಇದಕ್ಕಾಗಿ ಪೋಸ್ಟ್-ಡೇಟೆಡ್ ಚೆಕ್‌ಗಳ ಅಗತ್ಯವಿಲ್ಲ. ಪರ್ಯಾಯವಾಗಿ, ನೀವು ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನು ಸಹ ಆರಿಸಿಕೊಳ್ಳಬಹುದು. ಮತ್ತೊಂದೆಡೆ, ನೀವು ಯಾವುದೇ ಟಿವಿಎಸ್ ದ್ವಿಚಕ್ರ ವಾಹನವನ್ನು ತೆಗೆದುಕೊಂಡರೆ ಐಸಿಐಸಿಐ ಮತ್ತು ಬ್ಯಾಂಕ್ ಆಫ್ ಬರೋಡಾ ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನು ನೀಡುತ್ತಿವೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಟಿವಿಎಸ್ ರೇಡಿಯಾನ್ ಬೈಕ್ ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಟಿವಿಎಸ್ ರೇಡಿಯಾನ್ ಬೈಕಿನ ಮೂರು ಲಕ್ಷ ಯೂನಿಟ್‌ಗಳು ಮಾರಾಟವಾಗಿ ಹೊಸ ಮೈಲುಗಲ್ಲು ಮುಟ್ಟಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಇದೀಗ ಟಿವಿಎಸ್ ರೇಡಿಯಾನ್ ಬೈಕ್ ಹೊಸ ರೀಗಲ್ ಬ್ಲೂ ಮತ್ತು ಕ್ರೋಮ್ ಪರ್ಪಲ್ ಎಂಬ ಎರಡು ಹೊಸ ಬಣ್ಣಗಳನ್ನು ಪಡೆದುಕೊಂಡಿದೆ. ಹೊಸ ಬಣ್ಣಗಳ ಆಯ್ಕೆಯನ್ನು ಹೊರತಾಗಿ ಉಳಿದ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಟಿವಿಎಸ್ ಮೋಟಾರ್ ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ 2020ರ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.59,942 ಗಳಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಜನಪ್ರಿಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ರೇಡಿಯಾನ್ 110ಸಿಸಿ ಬೈಕನ್ನು ಮೊದಲ ಬಾರಿಗೆ ಭಾರತದಲ್ಲಿ 2018ರ ಆಗಸ್ಟ್‌ನಲ್ಲಿ ಬಿಡುಗಡೆಗೊಳಿಸಿತ್ತು. ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಈ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್ 79.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ

ದೀಪಾವಳಿ ಸಂಭ್ರಮ: ಜನಪ್ರಿಯ ಟಿವಿಎಸ್ ಮಾದರಿಗಳ ಮೇಲೆ ಭರ್ಜರಿ ಆಫರ್

ಇನ್ನು ಟಿವಿಎಸ್ ಮೋಟಾರ್ ಕಂಪನಿಯು ತನ್ನ ಅಪಾಚೆ ಸರಣಿಯ ಬೈಕುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಟಿವಿಎಸ್ ಅಪಾಚೆ ಸರಣಿಯ ಆರಂಭವಾದಾಗಿನಿಂದ ಇಲ್ಲಿಯವರೆಗೆ 4 ಮಿಲಿಯನ್ ಯು‍‍ನಿ‍‍ಟ್‍ಗಳು ಮಾರಾಟವಾಗಿವೆ.

Most Read Articles

Kannada
English summary
TVS Announces Festive Season Offers For Its Product Lineup. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X