ಜನಪ್ರಿಯ ಬಿಎಸ್-6 ಅಪಾಚೆ ಆರ್ಟಿಆರ್ 180 ಬೈಕಿನ ಬೆಲೆ ಹೆಚ್ಚಿಸಿದ ಟಿವಿಎಸ್
ಭಾರತದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ಜನಪ್ರಿಯ ಬಿಎಸ್-6 ಅಪಾಚೆ ಆರ್‌ಟಿಆರ್ 180 ಬೈಕನ್ನು ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಹೊಸ ಟಿವಿಎಸ್ ಅಪಾಚೆ ಆರ್ಟಿಆರ್ 180 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಬಿಎಸ್-6 ಟಿವಿಎಸ್ ಅಪಾಚೆ ಆರ್ಟಿಆರ್ 180 ಬೈಕಿನ ಬೆಲೆಯನ್ನು ರೂ.2,500 ರವರೆಗೆ ಹೆಚ್ಚಿಸಿದೆ. ಇದೀಗ ಬಿಎಸ್-6 ಟಿವಿಎಸ್ ಅಪಾಚೆ ಆರ್ಟಿಆರ್ 180 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,03,950 ಗಳಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಕಂಪನಿಯ ಅಪಾಚೆ ಸರಣಿಯ ಬೈಕ್‍ಗಳಿಗೆ ಬಜಾಜ್ ಆಟೊ ಕಂಪನಿಯ ಪಲ್ಸರ್ ಸರಣಿಯ ಬೈಕ್‍ಗಳು ಪ್ರಬಲ ಪೈಪೋಟಿಯನ್ನು ನೀಡುತ್ತವೆ.

ಬಿಎಸ್-6 ಟಿವಿಎಸ್ ಅಪಾಚೆ ಆರ್‌ಟಿಆರ್ 180 ಬೈಕಿನಲ್ಲಿ ಎಲ್‌ಇಡಿ ಡಿಆರ್‌ಎಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇಸಿಂಗ್ ಗ್ರಾಫಿಕ್ಸ್, ಎಲ್‌ಇಡಿ ಟೈಲ್ ಲ್ಯಾಂಪ್, ಸಿಂಗಲ್-ಪೀಸ್ ಸೀಟ್, ಎಂಜಿನ್ ಕೌಲ್, ಸ್ಪ್ಲಿಟ್ ಪಿಲಿಯನ್ ಗ್ರ್ಯಾಬ್ ರೈಲ್ ಮತ್ತು ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.
MOST READ: ದುಬಾರಿಯಾಯ್ತು ಜನಪ್ರಿಯ 2020ರ ಟಿವಿಎಸ್ ಅಪಾಚೆ ಆರ್ಟಿಆರ್ 160 ಬೈಕ್

ಬಿಎಸ್-6 ಟಿವಿಎಸ್ ಅಪಾಚೆ ಆರ್ಟಿಆರ್ 180 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಅಪಾಚೆ ಆರ್ಟಿಆರ್ 180 ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಅನ್ನು ಸಹ ಹೊಂದಿದೆ.

ಈ ಬೈಕಿನಲ್ಲಿ ಬ್ರೇಕಿಂಗ್ ಗಾಗಿ ಮುಂಭಾಗದಲ್ಲಿ 270 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 200 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಮತ್ತು ಸಿಂಗಲ್-ಚಾನೆಲ್ ಸೂಪರ್-ಮೋಟೋ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ದುಬಾರಿ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್

ಈ ಅಪಾಚೆ ಆರ್‌ಟಿಆರ್ 180 ಬೈಕಿನಲ್ಲಿ ಕಂಪನಿಯ ರೇಸ್ ಟ್ಯೂನ್ಡ್ ಫ್ಯೂಯಲ್ ಇಂಜೆಕ್ಷನ್ (ಆರ್‌ಟಿ-ಫೈ) ಸಿಸ್ಟಂ ಜೊತೆಗೆ ನವೀಕರಿಸಿದ 177.4 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಆಯಿಲ್ ಕೂಲರ್ ಅನ್ನು ಪಡೆಯುತ್ತದೆ.

ಈ ಎಂಜಿನ್ 8,500 ಆರ್‌ಪಿಎಂನಲ್ಲಿ 16 ಬಿಹೆಚ್‍ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 15.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಇದರೊಂದಿಗೆ ಟಿವಿಎಸ್ ಕಂಪನಿಯು ಹೊಸ ಅಪಾಚೆ ಆರ್ಟಿಆರ್ 160 ಬೈಕಿನ ಬೆಲೆಯನ್ನು ಕೂಡ ಹೆಚ್ಚಿಸಿದೆ. ಬಿಎಸ್-6 ಟಿವಿಎಸ್ ಅಪಾಚೆ ಆರ್ಟಿಆರ್ 160 ಬೈಕಿನ ಎಂಟ್ರಿ ಲೆವೆಲ್ ಡ್ರಮ್ ಬ್ರೇಕ್ ರೂಪಾಂತರ ಮತ್ತು ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆಯನ್ನು ರೂ.3,500 ರವರೆಗೆ ಏರಿಕೆ ಮಾಡಲಾಗಿದೆ.

ಟಿವಿಎಸ್ ಕಂಪನಿಯು ಆರ್‌ಟಿಆರ್ ಸರಣಿಯಲ್ಲಿರುವ ಎಲ್ಲಾ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ. ಇದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಕರೋನಾ ಸೋಂಕಿನಾದ ಕಂಪನಿಗೆ ಬಾರಿ ನಷ್ಟ ಸಂಭವಿಸಿದೆ. ಇದರಿಂದಾಗಿ ತನ್ನ ಬೈಕುಗಳ ಬೆಲೆಯನ್ನು ಹೆಚ್ಚಿಸಿರಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications