ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್ ಮೋಟಾರ್

ದೇಶದ ಜನಪ್ರಿಯ ಆಟೋ ಕಂಪನಿಗಳಲ್ಲಿ ಒಂದಾಗಿರುವ ಟಿವಿಎಸ್ ಮೋಟಾರ್ ಕಂಪನಿಯು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ವಾಹನ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯನ್ನು ಪುನಾರಂಭ ಮಾಡಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಪ್ರಮಾಣದ ಸುರಕ್ಷಾ ಕ್ರಮಗಳನ್ನು ಜಾರಿಗೊಳಿಸಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಕೇಂದ್ರ ಸರ್ಕಾರ ನೀಡಿರುವ ಹೊಸ ಸುರಕ್ಷಾ ಮಾರ್ಗಸೂಚಿಯ ಪ್ರಕಾರ, ಹಸಿರು ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ. ಹೊಸ ಮಾರ್ಗಸೂಚಿ ಅನ್ವಯ ವಾಹನ ಉತ್ಪಾದನೆ ಮತ್ತು ಮಾರಾಟ ಶುರು ಮಾಡಿರುವ ಟಿವಿಎಸ್ ಮೋಟಾರ್ ಕಂಪನಿಯು ಆಯ್ದ ವಾಹನ ಮಾರಾಟ ಮಳಿಗೆಗಳಲ್ಲಿ ಮಾತ್ರವೇ ದ್ವಿಚಕ್ರ ವಾಹನ ಮತ್ತು ತ್ರಿ ಚಕ್ರ ವಾಹನಗಳನ್ನು ಮಾರಾಟ ಮಾಡುತ್ತಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ವೈರಸ್ ಹರಡದಂತೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಂಡಿರುವ ಟಿವಿಎಸ್ ಕಂಪನಿಯು ಗ್ರಾಹಕರ ಬೇಡಿಕೆ ಮೇರೆಗೆ ಮನೆ ಬಾಗಿಲಿಗೆ ಹೊಸ ವಾಹನ ಉತ್ಪನ್ನಗಳನ್ನು ವಿತರಣೆ ಮಾಡುತ್ತಿದ್ದು, ಈ ವೇಳೆ ಹಲವಾರು ಸುರಕ್ಷಾ ಕ್ರಮಗಳೊಂದಿಗೆ ವ್ಯವಹಾರ ಮುನ್ನಡೆಸುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಇನ್ನು ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಈಗಾಗಲೇ ಪಿಎಂ ಪರಿಹಾರ ನಿಧಿಗಾಗಿ ಭಾರೀ ಪ್ರಮಾಣದ ದೇಣಿಗೆ ಘೋಷಣೆ ಮಾಡಿರುವ ಟಿವಿಎಸ್ ಮೋಟಾರ್ ಕಂಪನಿಯು ಕರ್ನಾಟಕ ಸರ್ಕಾರಕ್ಕೆ ನೆರವು ನೀಡಿದ್ದು, ವೈರಸ್ ವಿರುದ್ಧ ವಿರುದ್ದ ಹೋರಾಟಕ್ಕಾಗಿ ವಿವಿಧ ಮಾದರಿಯ ಸುರಕ್ಷಾ ಸಾಧನಗಳನ್ನು ಒದಗಿಸಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಕೇಂದ್ರ ಸರ್ಕಾರದ ಮನವಿ ಮೇರೆಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ರೂ.30 ಕೋಟಿ ದೇಣಿಗೆ ನೀಡಿದ್ದ ಟಿವಿಎಸ್ ಕಂಪನಿಯು ಪ್ರತಿ ರಾಜ್ಯ ಸರ್ಕಾರಗಳಿಗೂ ಇಂತಿಷ್ಟು ಪ್ರಮಾಣದ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ್ದು, ಕರ್ನಾಟಕ ಸರ್ಕಾರಕ್ಕೂ ಬರೋಬ್ಬರಿ 3 ಸಾವಿರ ಪರ್ಸನಲ್ ಪ್ರೋಟೆಕ್ಟಿವ್ ಇಕ್ವಿಪ್‌ಮೆಂಟ್(ಪಿಪಿಇ) ಮತ್ತು 10 ಸಾವಿರ ಎನ್95 ಮಾಸ್ಕ್‌ಗಳನ್ನು ದೇಣಿಗೆಯಾಗಿ ನೀಡಿತ್ತು.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಕರೋನಾ ವಿರುದ್ದ ಹೋರಾಡುತ್ತಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಪೊಲೀಸರು ಮತ್ತು ವಿವಿಧ ಇಲಾಖೆ ಸರ್ಕಾರಿ ಅಧಿಕಾರಿಗಳು ಮತ್ತು ಸ್ವಚ್ಚತಾ ಸಿಬ್ಬಂದಿಯ ಆರೋಗ್ಯ ಸುರಕ್ಷತೆಗೆ ಪಿಪಿಇ ಮತ್ತು ಮಾಸ್ಕ್ ವಿತರಣೆ ಮಾಡಲಿದ್ದು, ಮಾಹಾಮಾರಿ ವೈರಸ್ ವಿರುದ್ಧ ಹೋರಾಟದಲ್ಲಿ ಆಟೋ ಉತ್ಪಾದನಾ ಕಂಪನಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಕಾರ ನೀಡುತ್ತಿವೆ.

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಮಾರಾಟ ಪುನಾರಂಭಿಸಿದ ಟಿವಿಎಸ್

ಲಾಕ್‌ಡೌನ್ ವೇಳೆ ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಹೆಚ್ಚಿನ ಒತ್ತುನೀಡಿದ್ದ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪಾದನೆಗೆ ಮಾಡುವ ಮೂಲಕ ವೈರಸ್ ವಿರುದ್ಧದ ಹೋರಾಟಕ್ಕೆ ತಮ್ಮದೆ ಆದ ಸೇವೆ ಸಲ್ಲಿಸುತ್ತಿವೆ.

Article Published On: Wednesday, May 13, 2020, 8:45 [IST]
English summary
TVS Dealerships Reopens In Green Zones. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+