ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಟಿವಿಎಸ್ ಕಂಪನಿಯು ತನ್ನ ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಈ ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್​ ಬೆಲೆಯನ್ನು ಹೆಚ್ಚಿಸಲಾಗಿದೆ.

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಸ್ಟ್ಯಾಂಡರ್ಡ್, ಬಾಬೆಲಿಯಸ್ ಮತ್ತು ಮ್ಯಾಟ್ ಎಡಿಷನ್ ಎಂಬ 3 ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಎಲ್ಲಾ ರೂಪಾಂತರಗಳ ಬೆಲೆಯನ್ನು ರೂ.800 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ರೂ.51,754 ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಬೆಲೆ ಏರಿಕೆಯ ಬಳಿಕ, ಈ ಸ್ಕೂಟರ್ ಆರಂಭಿಕ ಬೆಲೆಯು ರೂ.52,554 ಗಳಾಗಿದೆ. ಈ ಸ್ಕೂಟರ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವಾಗ ಫೀಚರ್ ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಈ ಸ್ಕೂಟರ್ ನಲ್ಲಿರುವ ಎಂಜಿನ್ ಸಿಸ್ಟಂನಲ್ಲಿ ಕಾರ್ಬ್ಯುರೇಟರ್‌ಗೆ ಫ್ಯೂಯಲ್ -ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 5 ಬಿಹೆಚ್‌ಪಿ ಪವರ್ ಹಾಗೂ 4,000 ಆರ್‌ಪಿಎಂನಲ್ಲಿ 5.8 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ 90 ಸಿಸಿ ಎಂಜಿನ್ ಹೊಂದಿರುವ ಏಕೈಕ ಸ್ಕೂಟರ್ ಆಗಿದೆ. ಟಿವಿಎಸ್‌ ಕಂಪನಿಯು ಇನ್ನೂ ಹಲವು ವರ್ಷಗಳವರೆಗೆ ಇದೇ ಎಂಜಿನ್ ಅನ್ನು ಈ ಸ್ಕೂಟರಿನಲ್ಲಿ ಮುಂದುವರೆಸುವ ಸಾಧ್ಯತೆಗಳಿವೆ.

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಬಹುತೇಕ ಸ್ಕೂಟರ್‌ಗಳು 110 ಸಿಸಿ ಹಾಗೂ 125 ಸಿಸಿಯ ಎಂಜಿನ್ ಗಳನ್ನು ಹೊಂದಿವೆ. ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಬಿಎಸ್ 6 ಎಂಜಿನ್‌ನೊಂದಿಗೆ ಅಪ್ ಗ್ರೇಡ್ ಗೊಳಿಸಿರುವ ಕಾರಣಕ್ಕೆ ಹೆಚ್ಚು ಗ್ರಾಹಕರನ್ನು ಆಕರ್ಷಿಸಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ನಲ್ಲಿ ಹಲವಾರು ಫೀಚರ್ ಗಳನ್ನು ಹೊಂದಿದೆ. ಈ ಸ್ಕೂಟರ್ ನಲ್ಲಿ ಮೊಬೈಲ್ ಚಾರ್ಜರ್ ಮತ್ತು ಸೈಡ್ ಸ್ಟ್ಯಾಂಡ್ ಅಲಾರಂ ಹೊಂದಿದೆ. ಈ ಸ್ಕೂಟರ್ ಸೀಟ್ 768 ಎಂಎಂ ಕಡಿಮೆ ಎತ್ತರವನ್ನು ಹೊಂದಿದೆ.

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಎರಡು ಟಯರುಗಳಲ್ಲಿ 110 ಎಂಎಂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇನ್ನು ಈ ಸ್ಕೂಟರ್ 135 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ 4.2 ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ.

MOST READ: ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಇದರೊಂದಿಗೆ ಟಿವಿಎಸ್ ಕಂಪನಿಯು ಮತ್ತೊಮ್ಮೆ ರೇಡಿಯಾನ್ ಬೈಕಿನ ಬೆಲೆಯನ್ನು ಕೂಡ ರೂ.200 ರಷ್ಟು ಹೆಚ್ಚಿಸಲಾಗಿದೆ. ಇದೀಗ ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ರೂ.65,942 ಗಳಾಗಿದೆ.

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್‌, ಯಾವುದೇ ಸ್ಕೂಟರ್ ಗಳಿಗೆ ನೇರವಾದ ಪೈಪೋಟಿಯನ್ನು ನೀಡುವುದಿಲ್ಲ. ವಿಭಿನ್ನ ವಿನ್ಯಾದ ಮೂಲಕ ಈ ಸ್ಕೂಟರ್ ಹೆಚ್ಚಿನ ಗ್ರಾಹಕರನ್ನು ಸೆಳೆದಿದೆ. ಈ ಸ್ಕೂಟರ್ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಮಾರಾಟದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
TVS Scooty Pep+ gets price hike. Read In Kannada.
Story first published: Tuesday, August 25, 2020, 13:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X