ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಜನಪ್ರಿಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ 2020ರ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಟಿವಿಎಸ್ ಕಂಪನಿಯು ಈ ಹೊಸ ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿದೆ.

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸ ಟಿವಿಎಸ್ ರೇಡಿಯಾನ್ ಬೈಕನ್ನು ಪ್ರಾರಂಭಿಕ ಬೆಲೆ ರೂ.58,992ಗಳಲ್ಲಿ ಬಿಡುಗಡೆಗೊಳಿಸಿದ್ದರು. ಕಳೆದ ಬಾರಿ ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಎಲ್ಲಾ ರೂಪಾಂತರಗಳ ಬೆಲೆಯನ್ನು ರೂ,750 ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಟಿವಿಎಸ್ ಕಂಪನಿಯು ಮತ್ತೊಮ್ಮೆ ರೇಡಿಯಾನ್ ಬೈಕಿನ ಬೆಲೆಯನ್ನು ರೂ.200 ರಷ್ಟು ಹೆಚ್ಚಿಸಲಾಗಿದೆ. ಇದೀಗ ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ರೂ.65,942 ಗಳಾಗಿದೆ.

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 7,350 ಆರ್‌ಪಿಎಂನಲ್ಲಿ 8.08 ಬಿಹೆಚ್‌ಪಿ ಪವರ್ ಮತ್ತು 4,500 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಎಂಜಿನ್ ನೊಂದಿಗೆ ನಾಲ್ಕು-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ನಲ್ಲಿ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರ್ಪಡಿಸಲಾಗಿದೆ. ಇದರಿಂದಾಗಿ ಈ ಹೊಸ ಬೈಕಿನ ಮೈಲೇಜ್ 15% ಸುಧಾರಣೆಯಾಗಿದೆ ಎಂದು ಕಂಪನಿ ಹೇಳಿದೆ.

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹಿಂದಿನ ಬಿಎಸ್-4 ಟಿವಿಎಸ್ ರೇಡಿಯಾನ್ ಮಾದರಿಯ 109.7 ಸಿಸಿ ಎಂಜಿನ್ 7,000 ಆರ್‌ಪಿಎಂನಲ್ಲಿ 8.2 ಬಿಹೆಚ್‌ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ರೇಡಿಯಾನ್ ಬೈಕ್ ಡಿಸ್ಕ್ ಬ್ರೇಕ್ ಮತ್ತು ಡ್ರಮ್ ಬ್ರೇಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಡಿಸ್ಕ್ ಬ್ರೇಕ್ ರೂಪಾಂತರವು ಈಗ 118 ಕೆಜಿ ತೂಕವನ್ನು ಹೊಂದಿದ್ದರೆ, ಡ್ರಮ್ ಬ್ರೇಕ್ ರೂಪಾಂತರವು 116 ಕೆಜಿ ತೂಕವನ್ನು ಹೊಂದಿದೆ.

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಡಿಸ್ಕ್ ಬ್ರೇಕ್ ರೂಪಾಂತರವು ಟ್ಯಾಂಕ್ ಪ್ಯಾಡ್, ಪೆಟ್ರೋಲ್ ಟ್ಯಾಂಕ್ ಕುಶನ್, ಪ್ರೀಮಿಯಂ ಸೀಟ್ ವಿನ್ಯಾಸ, ಕ್ರೋಮ್ ರೇರ್ ವ್ಯೂ ಮಿರರ್ ಮತ್ತು ಹೊಸ ಗ್ರಾಫಿಕ್ಸ್ ಅನ್ನು ಹೊಂದಿದೆ. ಈ ಟಿವಿಎಸ್ ರೇಡಿಯಾನ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೇಲ್ ಲ್ಯಾಂಪ್‌ಗಳು ಮತ್ತು ಹಿಂಭಾಗದಲ್ಲಿ ಲಗೇಜ್ ರ್ಯಾಕ್ ಅನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್-ಶಾಕ್ಸ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಬಿಎಸ್-6 ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಸಿಂಕ್ರೊನೈಸ್ಡ್ ಬ್ರೇಕಿಂಗ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಈ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್ 79.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Most Read Articles

Kannada
English summary
BS6 TVS Radeon Receives A Price Hike Of ₹ 200. Read In Kannada.
Story first published: Monday, August 10, 2020, 13:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X