ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಟಿವಿಎಸ್ ಮೋಟಾರ್ಸ್ ಸಂಸ್ಥೆಯು ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಯಾದ ಐಕ್ಯೂಬ್ ಬಿಡುಗಡೆಗೊಳಿಸಿದ್ದು, ಹೊಸ ಎಲೆಕ್ಟ್ರಿಕ್ ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರೀಮಿಯಂ ಫೀಚರ್ಸ್ ಮತ್ತು ಹೆಚ್ಚು ಮೈಲೇಜ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ವಿಶೇಷ ಆಹ್ವಾನಿತರಾಗಿದ್ದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟಿವಿಎಸ್ ಹೊಸ ಪ್ರಯತ್ನಕ್ಕೆ ಶುಭಹಾರೈಸಿದರಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ಹೊಸ ನೀತಿ-ನಿಯಮಗಳ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ದವಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ಬದಲಾವಣೆಗಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದರು.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ನು ಟಿವಿಎಸ್ ಸಂಸ್ಥೆಯು ಬಿಡುಗಡೆಗೊಳಿಸಿರುವ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಆನ್‌-ರೋಡ್ ಪ್ರಕಾರ ರೂ.1.15 ಲಕ್ಷ ಬೆಲೆ ಹೊಂದಿದ್ದು, ಮೊದಲ ಹಂತವಾಗಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬೆಂಗಳೂರಿನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾದ ವಾತಾವರಣವಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್ ಕೊರತೆಯಿಂದಾಗಿ ಇವಿ ವಾಹನಗಳ ಮಾರಾಟಕ್ಕೆ ಹಿನ್ನಡೆಯಾಗುತ್ತಿದ್ದು, ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ಟಿವಿಎಸ್ ಸಂಸ್ಥೆಯು ಹೊಸ ಸ್ಕೂಟರ್ ಮಾರಾಟವನ್ನು ಹಂತ ಹಂತವಾಗಿ ವಿವಿಧ ನಗರಗಳಿಗೆ ವಿಸ್ತರಣೆ ಮಾಡಲಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಿಂತಲೂ ಆಕರ್ಷಕ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಹೊತ್ತುಬಂದಿದ್ದು, ಹೊಸ ಸ್ಕೂಟರ್‌ನಲ್ಲಿ 4.4kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಲಾಗಿದೆ. ಇದು ಪ್ರತಿ ಗಂಟೆಗೆ ಗರಿಷ್ಠ 78 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಎಕಾನಮಿ ಮತ್ತು ಪವರ್ ಮೊಡ್ ಮೂಲಕ ಅತ್ಯುತ್ತಮ ರೈಡಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಐಕ್ಯೂಬ್ ಮೈಲೇಜ್

ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎಕಾನಮಿ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 75ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಪವರ್ ಮೋಡ್‌ ಮೂಲಕ ರೈಡಿಂಗ್ ಮಾಡಿದ್ದಲ್ಲಿ ಗರಿಷ್ಠ 70 ಕಿ.ಮೀ ಮೈಲೇಜ್ ಪಡೆಯಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ವಿಶೇಷ ಅಂದ್ರೆ, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಹೋಮ್ ಚಾರ್ಜರ್ ಜೊತೆ ಪಬ್ಲಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆದಿರುವ ಟಿವಿಎಸ್ ಸಂಸ್ಥೆಯು ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೊಸ ಸ್ಕೂಟರ್‌ನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಹಲವಾರು ಫೀಚರ್ಸ್‌ಗಳಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಟೈಲ್‌ಲೈಟ್ಸ್, ಪ್ರತಿಫಲಿಸುವ ಲೊಗೋ, ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಸೌಲಭ್ಯವು ಗ್ರಾಹಕರ ಗಮನಸೆಳೆಯಲಿವೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹಾಗೆಯೇ ಸುರಕ್ಷತೆಗಾಗಿ ಹೊಸ ಸ್ಕೂಟರ್‌ನಲ್ಲಿ ಮುಂಭಾಗದ ಚಕ್ರದಲ್ಲಿ ಡಿಸ್ಕ್ ಬ್ರೇಕ್, ರಿಮೋಟ್ ಚಾರ್ಜಿಂಗ್ ಸ್ಟೆಟಸ್, ಜಿಯೋ ಫೆನ್ಸ್, ಲಾಸ್ಟ್ ಪಾರ್ಕಿಂಗ್ ಲೊಕೆಷನ್, ಇನ್‌ಕಮಿಂಗ್ ಕಾಲ್ಸ್/ಮೆಜೆಸ್ ಅಲರ್ಟ್, ಕ್ಯೂ-ಪಾರ್ಕ್ ಅಸಿಸ್ಟ್ ಸೌಲಭ್ಯಗಳನ್ನು ಹೊಂದಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಈ ಮೂಲಕ ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಅಥೆರ್ ಎಸ್ 450 ಮತ್ತು ಗ್ರಾಹಕರ ಕೈ ಸೇರಲು ಸಿದ್ದವಾಗಿರುವ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಪೈಪೋಟಿ ನೀಡಲಿದ್ದು, ಮುಂಬರುವ ದಿನಗಳಲ್ಲಿ ವಿವಿಧ ನಗರಗಳಲ್ಲೂ ಹೊಸ ಸ್ಕೂಟರ್ ಮಾರಾಟಗೊಳ್ಳಲಿದೆ.

ನಮ್ಮ ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇಂದಿನಿಂದಲೇ ಬುಕ್ಕಿಂಗ್ ಶುರು

ರೂ.5 ಸಾವಿರ ಮುಂಗಡದೊಂದಿಗೆ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಆರಂಭಿಸಿರುವ ಟಿವಿಎಸ್ ಸಂಸ್ಥೆಯು ಇದೇ ತಿಂಗಳು 27ರಂದು ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದು, ಪರಿಸರಕ್ಕೆ ಪೂರಕವಾದ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಟಿವಿಎಸ್ ಬೃಹತ್ ಯೋಜನೆ ರೂಪಿಸಿದೆ.

Most Read Articles

Kannada
English summary
TVS iQube Electric Scooter Launched In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X