ಲಾಕ್‌ಡೌನ್ ಅವಧಿಯಲ್ಲೂ 8,134 ವಾಹನಗಳನ್ನು ರಫ್ತು ಮಾಡಿದ ಟಿವಿಎಸ್
ದೇಶಾದ್ಯಂತ ಸದ್ಯ ಮೂರನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ವಾಹನಗಳ ಮಾರಾಟ ಸೇರಿದಂತೆ ಬಹುತೇಕ ವಾಣಿಜ್ಯ ಚಟುವಟಿಕೆಗಳು ಇನ್ನು ಕೂಡಾ ಪುನಾರಂಭವಾಗಿಲ್ಲ. ಇದರಿಂದ ಬಹುತೇಕ ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಮಾರ್ಚ್ 15ರಿಂದ ಇದುವರೆಗೂ ಯಾವುದೊಂದು ಕಂಪನಿಯು ಒಂದೇ ಒಂದು ವಾಹನವನ್ನು ಮಾರಾಟಮಾಡಿಲ್ಲ.

ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕೂಡಾ ಏಪ್ರಿಲ್ ಅವಧಿಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿನ ವಾಹನ ಮಾರಾಟದಲ್ಲಿ ಸೊನ್ನೆ ಸುತ್ತಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೆ ಮಾತ್ರ 8,134 ದ್ವಿಚಕ್ರ ವಾಹನಗಳನ್ನು ಮತ್ತು 1,506 ತ್ರಿಚಕ್ರ ವಾಹನಗಳನ್ನು ರಫ್ತು ಮಾಡಿದೆ.

ಮಧ್ಯಪ್ರಾಚ್ಯ ಮತ್ತು ಆಫ್ರಿಕಾ ರಾಷ್ಟ್ರಗಳಿಗೆ ವಿವಿಧ ಮಾದರಿಯ ದ್ವಿಚಕ್ರ ವಾಹನ ಮತ್ತು ತ್ರಿ ಚಕ್ರ ಮಾದರಿಗಳನ್ನು ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಫ್ತು ಮಾಡಿದ್ದು, ತದನಂತರ ಸಾಗರೋತ್ತರ ವ್ಯವಹಾರಗಳ ಬಂದ್ ಆಗಿದ್ದರಿಂದ ವಾಹನಗಳ ಮಾರಾಟ ಮತ್ತು ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿತ್ತು.

ಇದೀಗ ಹಸಿರು ವಲಯದಲ್ಲಿರುವ ಕೈಗಾರಿಕೆಗಳಿಗೆ ಉತ್ಪಾದನೆಗೆ ಅವಕಾಶ ನೀಡಿರುವುದರಿಂದ ವಾಹನ ಉತ್ಪಾದನಾ ಚಟುವಟಿಕೆಗಳನ್ನು ಮತ್ತೆ ಪುನಾರಂಭಿಸಿರುವ ಬಹುತೇಕ ಆಟೋ ಕಂಪನಿಯು ಹೊಸ ಸುರಕ್ಷಾ ಮಾರ್ಗಗಳ ಅನುಸಾರವಾಗಿ ಆನ್‌ಲೈನ್ ವಾಹನ ಮಾರಾಟವನ್ನು ಆರಂಭಿಸುತ್ತಿದೆ.
MOST READ: ಲಾಕ್‌ಡೌನ್ ಎಫೆಕ್ಟ್: ನಿಯಮ ಉಲ್ಲಂಘಿಸಿದ ಜಿಲ್ಲಾಧಿಕಾರಿ ಕಾರನ್ನೇ ತಡೆದ ಕಾನ್ಸ್‌ಸ್ಟೆಬಲ್..!

ಸದ್ಯಕ್ಕೆ ನೇರವಾಗಿ ವಾಹನ ಮಾರಾಟಕ್ಕೆ ಅವಕಾಶವಿಲ್ಲವಾದ್ದರಿಂದ ಬಹುತೇಕ ಆಟೋ ಕಂಪನಿಗಳು ಆನ್‌ಲೈನ್ ವಾಹನ ಮಾರಾಟಕ್ಕೆ ಚಾಲನೆ ನೀಡುತ್ತಿದ್ದು, ಟಿವಿಎಸ್ ಮೋಟಾರ್ ಕೂಡಾ ಗರಿಷ್ಠ ಸುರಕ್ಷಾ ಸೌಲಭ್ಯಗಳೊಂದಿಗೆ ಗ್ರಾಹಕರ ಬೇಡಿಕೆ ಮೇರೆಗೆ ಮನೆ ಬಾಗಿಲಿಗೆ ಹೊಸ ವಾಹನ ಉತ್ಪನ್ನಗಳನ್ನು ವಿತರಣೆ ಮಾಡಲು ನಿರ್ಧರಿಸಿದೆ.

ಇನ್ನು ಕರೋನಾ ವೈರಸ್ ಸಂಕಷ್ಟದ ನಡುವೆಯೂ ಸರ್ಕಾರದ ಜೊತೆಗೆ ಕೈಜೋಡಿಸಿರುವ ಟಿವಿಎಸ್ ಮೋಟಾರ್ ಕಂಪನಿಯು ಕೇಂದ್ರ ಸರ್ಕಾರಕ್ಕೆ ರೂ.30 ಕೋಟಿ ದೇಣಿಗೆ ನೀಡಿದ್ದು, ಕರ್ನಾಟಕ ಸರ್ಕಾರಕ್ಕೂ ಕೂಡಾ ಹಣಕಾಸು ನೆರವಿನೊಂದಿಗೆ ವೈದ್ಯಕೀಯ ಉಪಕರಣಗಳನ್ನು ಒದಗಿಸಿದೆ.
MOST READ: ಲಾಕ್‌ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು

ಕರೋನಾ ವಿರುದ್ಧ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಸಂಸ್ಥೆಗಳು ಭಾರೀ ಪ್ರಮಾಣದ ಧನಸಹಾಯ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.
MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಟಿವಿಎಸ್ ಮೋಟಾರ್ ಮತ್ತು ಅದರ ಅಂಗಸಂಸ್ಥೆಯಾದ ಸುಂದರಂ ಕ್ಲೈಟನ್ ಕಂಪನಿಯು ಕರೋನಾ ವಿರುದ್ಧ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.30 ಕೋಟಿ ಧನಸಹಾಯ ಘೋಷಣೆ ಮಾಡಿದ್ದು, ಜೊತೆಗೆ 10 ಲಕ್ಷ ಫೇಸ್ ಮಾಸ್ಕ್‌ಗಳನ್ನು ಸಿದ್ದಪಡಿಸುವುದಾಗಿ ಹೇಳಿಕೊಂಡಿದೆ.

ಟಿವಿಎಸ್ ಮೋಟಾರ್ ಕಂಪನಿಯ ಸಾಮಾಜಿಕ ಸೇವಾ ವಿಭಾಗದ ಶ್ರೀನಿವಾಸನ್ ಸರ್ವಿಸ್ ಟ್ರಸ್ಟ್ ಮೂಲಕ ಅಗತ್ಯ ನೆರವು ನೀಡಲಾಗುತ್ತಿದ್ದು, ರೂ.30 ಕೋಟಿ ಧನಸಹಾಯದಲ್ಲೇ ವೆಂಟಿಲೆಟರ್‌ಗಳನ್ನು ನಿರ್ಮಾಣ ಮಾಡಿ ಅಗತ್ಯವಿರುವ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡುತ್ತಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಜೊತೆಗೆ ಗ್ರಾಮೀಣ ಭಾಗದಲ್ಲಿ ಸ್ವಚ್ಚತೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಶ್ರೀನಿವಾಸನ್ ಸರ್ವಿಸ್ ಟ್ರಸ್ಟ್ ಸಂಸ್ಥೆಯು ಹೊಸರು ಮತ್ತು ಮೈಸೂರಿನಲ್ಲಿ 10 ಟ್ರಕ್‌ಗಳ ಮೂಲಕ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಸಿಂಪರಣೆ ಮಾಡುತ್ತಿದೆ.


Click it and Unblock the Notifications








