ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಈಗಾಗಲೇ ಪಿಎಂ ಪರಿಹಾರ ನಿಧಿಗಾಗಿ ಭಾರೀ ಪ್ರಮಾಣದ ದೇಣಿಗೆ ಘೋಷಣೆ ಮಾಡಿರುವ ಟಿವಿಎಸ್ ಮೋಟಾರ್ ಕಂಪನಿಯು ಇದೀಗ ಕರ್ನಾಟಕ ಸರ್ಕಾರಕ್ಕೆ ನೆರವು ನೀಡಿದ್ದು, ವೈರಸ್ ವಿರುದ್ಧ ವಿರುದ್ದ ಹೋರಾಟಕ್ಕಾಗಿ ವಿವಿಧ ಮಾದರಿಯ ಸುರಕ್ಷಾ ಸಾಧನಗಳನ್ನು ಒದಗಿಸಿದೆ.

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಕೇಂದ್ರ ಸರ್ಕಾರದ ಮನವಿ ಮೇರೆಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ರೂ.30 ಕೋಟಿ ದೇಣಿಗೆ ನೀಡಿದ್ದ ಟಿವಿಎಸ್ ಕಂಪನಿಯು ಇದೀಗ ಪ್ರತಿ ರಾಜ್ಯ ಸರ್ಕಾರಕ್ಕೂ ಇಂತಿಷ್ಟು ಪ್ರಮಾಣದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸುತ್ತಿದ್ದು, ಕರ್ನಾಟಕ ಸರ್ಕಾರಕ್ಕೂ ಬರೋಬ್ಬರಿ 3 ಸಾವಿರ ಪರ್ಸನಲ್ ಪ್ರೋಟೆಕ್ಟಿವ್ ಇಕ್ವಿಪ್‌ಮೆಂಟ್(ಪಿಪಿಇ) ಮತ್ತು 10 ಸಾವಿರ ಎನ್95 ಮಾಸ್ಕ್‌ಗಳನ್ನು ದೇಣಿಗೆಯಾಗಿ ನೀಡಿದೆ.

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಟಿವಿಎಸ್ ಹಿರಿಯ ಅಧಿಕಾರಿಗಳ ನಿಯೋಗವು ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ ಮತ್ತಷ್ಟು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

MOST READ: ಕೋವಿಡ್ 19 ಸೋಂಕಿತರನ್ನು ಪತ್ತೆಹಚ್ಚುತ್ತೆ ಈ ವಿಶೇಷ ಇನೋವಾ ಕಾರು..!

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಇನ್ನು ಕರೋನಾ ವಿರುದ್ದ ಹೋರಾಡುತ್ತಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಪೊಲೀಸರು ಮತ್ತು ವಿವಿಧ ಇಲಾಖೆ ಸರ್ಕಾರಿ ಅಧಿಕಾರಿಗಳು ಮತ್ತು ಸ್ವಚ್ಚತಾ ಸಿಬ್ಬಂದಿಯ ಆರೋಗ್ಯ ಸುರಕ್ಷತೆಗೆ ಪಿಪಿಇ ಮತ್ತು ಮಾಸ್ಕ್ ವಿತರಣೆ ಮಾಡಲಿದ್ದು, ಮಾಹಾಮಾರಿ ವೈರಸ್ ವಿರುದ್ಧ ಹೋರಾಟದಲ್ಲಿ ಆಟೋ ಉತ್ಪಾದನಾ ಕಂಪನಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಕಾರ ನೀಡುತ್ತಿವೆ.

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

MOST READ: ಕರೋನಾ ಸಂಕಷ್ಟ: ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಹಣ

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪಾದನೆ ಮಾಡುತ್ತಿವೆ.

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕೋವಿಡ್ 19: ಕರ್ನಾಟಕ ಸರ್ಕಾರಕ್ಕೂ ಸಹಾಯ ಹಸ್ತ ಚಾಚಿದ ಟಿವಿಎಸ್ ಮೋಟಾರ್

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.

Most Read Articles

Kannada
English summary
TVS Motor Company Hands Over 3000 PPEs & 10,000 N95 Masks To Karnataka Chief Minister. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X