ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಟಿವಿಎಸ್ ಮೋಟಾರ್ ಕಂಪನಿಯು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಇತ್ತೀಚೆಗೆ ಎನ್‌ಟಾರ್ಕ್ 125 ಸ್ಕೂಟರ್ ಅನ್ನು ಬಿಡುಗಡೆಗೊಳಿಸಿತ್ತು. ಆದರೆ ಇದೀಗ ಹೊಸ ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ್ದಾರೆ.

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸ ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 65,975 ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಹೊಸ ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ರೂ.910ಗಳವರೆಗೆ ಹೆಚ್ಚಿಸಲಾಗಿದೆ. ಹೆಚ್ಚುವರಿ ಬೆಲೆ ಹೊಂದಿರುವ ಹೊಸ ಸ್ಕೂಟರ್ ಹಲವು ಬದಲಾವಣೆಗಳನ್ನು ಬಿಡುಗಡೆಗೊಳಿಸಿದ್ದರು. ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ನಲ್ಲಿ ಡ್ರಮ್, ಡಿಸ್ಕ್ ಮತ್ತು ರೇಸ್ ಎಡಿಷನ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ಎಕ್ಸಾಸ್ಟ್ ಸಿಸ್ಟಂ ಬದಲಾವಣೆ ಮಾಡಿರುವುದು ಪ್ರಮುಖ ಆಕರ್ಷಣೆಯಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ರೇಸ್ ಎಡಿಷನ್‌ನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಸೇರಿದಂತೆ ಎಕ್ಸಾಸ್ಟ್ ಸಿಸ್ಟಂ ಬದಲಾವಣೆ ಮಾಡಿರುವುದು ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ.

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಹೊಸದಾಗಿ 125 ಸಿಸಿ ಫ್ಯೂಲ್ ಇಂಜೆಕ್ಷನ್ ಸಿಸ್ಟಂ ಹೊಂದಿರುವ ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯು 9.4-ಬಿಎಚ್‌ಪಿ ಪವರ್ ಮತ್ತು 10.5-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಇತಿಹಾಸದ ಪುಟ ಸೇರಿದ ಜನಪ್ರಿಯ ಟಿವಿಎಸ್ ವಿಗೋ ಸ್ಕೂಟರ್

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಪರ್ಫಾಮೆನ್ಸ್ ಪ್ರಿಯರಿಗಾಗಿ ರೇಸ್ ಎಡಿಷನ್ ಸಹ ಖರೀದಿಗೆ ಲಭ್ಯವಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ಇದು ಹಲವಾರು ಕಾಸ್ಮೆಟಿಕ್ ಹಾಗೂ ಪ್ರೀಮಿಯಂ ಫೀಚರ್ಸ್ ಅಪ್‌ಡೇಟ್‌ಗಳನ್ನು ಮಾಡಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಇದರೊಂದಿಗೆ ಟಿವಿಎಸ್ ಮೋಟಾರ್ ತನ್ನ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕನ್ನು ಪ್ರಾರಂಭಿಕ ಬೆಲೆ ರೂ.58,992ಗಳಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಎಲ್ಲಾ ರೂಪಾಂತರಗಳ ಬೆಲೆಯನ್ನು ರೂ,750 ರಷ್ಟು ಹೆಚ್ಚಿಸಲಾಗಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಟಿವಿಎಸ್

ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ 125 ಎಫ್ಐ, ಸುಜುಕಿ ಆಕ್ಸೆಸ್ 125, ಯಮಹಾ ರೇ ಜೆಡ್ಆರ್ 125 ಮಾದರಿಗಳಿಗೆ ಪೈಪೋಟಿಯಾಗಿದೆ. ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕು.

Article Published On: Wednesday, June 3, 2020, 18:35 [IST]
English summary
BS6 TVS NTorq 125 gets its first price hike. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+