ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಟಿವಿಎಸ್ ಮೋಟಾರ್ ಸಂಸ್ಥೆಯು ಈಗಾಗಲೇ ತನ್ನ ಪ್ರಮುಖ ಬೈಕ್ ಆವೃತ್ತಿಗಳನ್ನು ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಗುಣವಾಗಿ ಬಿಡುಗಡೆಗೊಳಿಸಿದ್ದು, ಎನ್‌ಟಾರ್ಕ್ 125 ಸ್ಕೂಟರ್ ಆವೃತ್ತಿಯನ್ನು ಸಹ ಹೊಸ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಹೊಸ ಎಮಿಷನ್ ನಿಯಮ ಅನುಸಾರ ಅಭಿವೃದ್ದಿಗೊಂಡಿರುವ ಹೊಸ ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 65,975 ಬೆಲೆ ಹೊಂದಿದ್ದು, ಬಿಎಸ್-4 ಮಾದರಿಗಿಂತಲೂ ಹೊಸ ಸ್ಕೂಟರ್ ಮತ್ತಷ್ಟು ದುಬಾರಿ ಬೆಲೆ ಪಡೆದುಕೊಂಡಿದೆ. ಬಿಎಸ್-4 ಮಾದರಿಗಿಂತ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 6,513ರಿಂದ ರೂ. 9,980 ರಷ್ಟು ಹೆಚ್ಚುವರಿ ಬೆಲೆ ಹೊಂದಿರುವ ಹೊಸ ಸ್ಕೂಟರ್ ಈ ಬಾರಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಡ್ರಮ್, ಡಿಸ್ಕ್ ಮತ್ತು ರೇಸ್ ಎಡಿಷನ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ಎಕ್ಸಾಸ್ಟ್ ಸಿಸ್ಟಂ ಬದಲಾವಣೆ ಮಾಡಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಕಾರ್ಬ್ಯುಟರ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಸಿಸ್ಟಂ ನೀಡಲಾಗಿದ್ದು, ಇದರಿಂದ ಹೊಸ ಸ್ಕೂಟರ್‌ನಲ್ಲಿ ಪರ್ಫಾಮೆನ್ಸ್ ಹೆಚ್ಚಳವಾಗಿರುವುದಲ್ಲದೇ ಮಾಲಿನ್ಯ ಉತ್ಪತ್ತಿ ಪ್ರಮಾಣದಲ್ಲೂ ಕೂಡಾ ಸುಧಾರಣೆಯಾಗಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ರೇಸ್ ಎಡಿಷನ್‌ನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಸೇರಿದಂತೆ ಎಕ್ಸಾಸ್ಟ್ ಸಿಸ್ಟಂ ಬದಲಾವಣೆ ಮಾಡಿರುವುದು ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ. ಇನ್ನುಳಿದಂತೆ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದ್ದು, ಬಿಎಸ್-6 ಎಂಜಿನ್ ಜೊತೆ ಉನ್ನತೀಕರಣಗೊಂಡಿರುವ 125ಸಿಸಿ ಪ್ರತಿಸ್ಪರ್ಧಿ ಸ್ಕೂಟರ್‌ಗಳಿಗೆ ಇದು ಪ್ರಬಲ ಪೈಪೋಟಿ ನೀಡುವ ತವಕದಲ್ಲಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಎಂಜಿನ್ ವೈಶಿಷ್ಟ್ಯತೆ

124.8ಸಿಸಿ ಫ್ಯೂಲ್ ಇಂಜೆಕ್ಷನ್ ಸಿಸ್ಟಂ ಹೊಂದಿರುವ ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯು 9.25-ಬಿಎಚ್‌ಪಿ ಮತ್ತು 10.5-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಡ್ರಮ್ ಮತ್ತು ಡಿಸ್ಕ್ ವೆರಿಯೆಂಟ್‌ಗಳನ್ನು ಖರೀದಿಸಬಹುದು.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ ರೇಸ್ ಎಡಿಷನ್ ಸಹ ಖರೀದಿಗೆ ಲಭ್ಯವಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಇದು ಹಲವಾರು ಕಾಸ್ಮೆಟಿಕ್ ಹಾಗೂ ಪ್ರೀಮಿಯಂ ಫೀಚರ್ಸ್ ಅಪ್‌ಡೇಟ್‌ಗಳನ್ನು ಹೊಂದಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಇನ್ನುಳಿದಂತೆ ಹೊಸ ಸ್ಕೂಟರ್‌ನಲ್ಲಿ ಸ್ಮಾರ್ಟ್‌ಕನೆಕ್ಟ್ ಫೀಚರ್ಸ್ ನೀಡಲಾಗಿದ್ದು, ಬ್ಲೂಟೂತ್‌ನೊಂದಿಗೆ ಸ್ಕೂಟರ್ ಚಾಲನೆ ವೇಳೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ ಮೂಲಕ ಕಾಲ್, ಮೆಸೇಜ್ ಹಾಗೂ ಇನ್ನಿತರ ನೋಟಿಫಿಕೇಶನ್‍‍ಗಳ ಮಾಹಿತಿಯನ್ನು ಪಡೆಯುವಂತಹ ಸೌಲಭ್ಯ ನೀಡಲಾಗಿದೆ.

ಸುಧಾರಿತ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125

ಈ ಮೂಲಕ ಪ್ರತಿಸ್ಪರ್ಧಿ ಸ್ಕೂಟರ್ ಮಾದರಿಗಳಾದ ಹೋಂಡಾ ಆಕ್ಟಿವಾ 125 ಎಫ್ಐ, ಸುಜುಕಿ ಆಕ್ಸೆಸ್ 125, ಯಮಹಾ ರೇ ಜೆಡ್ಆರ್ 125 ಆವೃತ್ತಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Article Published On: Tuesday, March 17, 2020, 14:19 [IST]
English summary
TVS Motor Company has released the specification details of the BS-VI TVS NTorq scooter. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+