ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಟಿವಿಎಸ್ ಮೋಟಾರ್ ಇತ್ತೀಚೆಗೆ ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿತು. ಇದೀಗ ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಹೊಸ ಟಿವಿಎಸ್ ರೇಡಿಯಾನ್ ಬೈಕನ್ನು ಪ್ರಾರಂಭಿಕ ಬೆಲೆ ರೂ.58,992ಗಳಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಎಲ್ಲಾ ರೂಪಾಂತರಗಳ ಬೆಲೆಯನ್ನು ರೂ,750 ರಷ್ಟು ಹೆಚ್ಚಿಸಲಾಗಿದೆ. ಟಿವಿಎಸ್ ರೇಡಿಯಾನ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಟಿವಿಎಸ್ ರೇಡಿಯಾನ್ ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯಬಹುದು. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 7,350 ಆರ್‌ಪಿಎಂನಲ್ಲಿ 8.08 ಬಿಹೆಚ್‌ಪಿ ಪವರ್ ಮತ್ತು 4,500 ಆರ್‌ಪಿಎಂನಲ್ಲಿ 8.7 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಕರೋನಾ ಭೀತಿಯಿಂದ ಜನಪ್ರಿಯ ಬಜಾಜ್ ಬೈಕುಗಳ ಮಾರಾಟದಲ್ಲಿ ಕುಸಿತ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಎಂಜಿನ್ ನೊಂದಿಗೆ ನಾಲ್ಕು-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ನಲ್ಲಿ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರ್ಪಡಿಸಲಾಗಿದೆ. ಇದರಿಂದಾಗಿ ಈ ಹೊಸ ಬೈಕಿನ ಮೈಲೇಜ್ 15% ಸುಧಾರಣೆಯಾಗಿದೆ ಎಂದು ಟಿವಿಎಸ್ ಕಂಪನಿಯು ಹೇಳಿಕೊಂಡಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಹಿಂದಿನ ಬಿಎಸ್-4 ಟಿವಿಎಸ್ ರೇಡಿಯಾನ್ ಮಾದರಿಯ 109.7 ಸಿಸಿ ಎಂಜಿನ್ 7,000 ಆರ್‌ಪಿಎಂನಲ್ಲಿ 8.2 ಬಿಹೆಚ್‌ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಬಿಎಸ್-6 ರೇಡಿಯಾನ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಟಾಪ್-ಸ್ಪೆಕ್ ಮಾದರಿಯಾದ "ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇದರಲ್ಲಿ ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್ ವಿಶೇಷ ಆವೃತ್ತಿಯಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಹೊಸ ಟಿವಿಎಸ್ ರೇಡಿಯಾನ್ ಸ್ಟ್ಯಾಂಡರ್ಡ್ ರೂಪಾಂತರವು ಆರು ಬಣ್ಣಗಳಲ್ಲಿ ಲಭ್ಯವಿರಲಿದೆ. ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್" ನಲ್ಲಿ ಫ್ರಂಟ್ ಡಿಸ್ಕ್ ಬ್ರೇಕ್, ಟ್ಯಾಂಕ್ ಪ್ಯಾಡ್, ಪೆಟ್ರೋಲ್ ಟ್ಯಾಂಕ್ ಕುಶನ್, ಪ್ರೀಮಿಯಂ ಸೀಟ್ ವಿನ್ಯಾಸ, ಕ್ರೋಮ್ ರೇರ್ ವ್ಯೂ ಮಿರರ್ ಮತ್ತು ಹೊಸ ಗ್ರಾಫಿಕ್ಸ್ ಅನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೇಲ್ ಲ್ಯಾಂಪ್‌ಗಳು ಮತ್ತು ಹಿಂಭಾಗದಲ್ಲಿ ಲಗೇಜ್ ರ್ಯಾಕ್ ಅನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್-ಶಾಕ್ಸ್ ಸೆಟಪ್ ಅನ್ನು ಒಳಗೊಂಡಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್

ಈ ಬೈಕಿನಲ್ಲಿ ಎರಡು ಟಯರ್‍ಗಳಿಗೆ ಡ್ರಮ್ ಬ್ರೇಕ್‍ ಗಳನ್ನು ಜೋಡಿಸಲಾಗಿದೆ. ಟಾಪ್ ಸ್ಪೆಕ್ ನಲ್ಲಿ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಸಿಂಕ್ರೊನೈಸ್ಡ್ ಬ್ರೇಕಿಂಗ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

Article Published On: Tuesday, June 2, 2020, 18:40 [IST]
English summary
TVS Radeon BS6 receives its first price hike. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+