ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್ ಬೈಕ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.58,992 ಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಬೆಲೆಯು ಹಿಂದಿನ ಬಿಎಸ್-4 ಮಾದರಿಗಿಂತ ರೂ.8,600 ದಷ್ಟು ಹೆಚ್ಚಿಸಲಾಗಿದೆ. ಟಿವಿಎಸ್ ರೇಡಿಯಾನ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಟಿವಿಎಸ್ ರೇಡಿಯಾನ್ ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯಬಹುದು. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಈ ಎಂಜಿನ್ 7,350 ಆರ್‌ಪಿಎಂನಲ್ಲಿ 8.08 ಬಿಹೆಚ್‌ಪಿ ಪವರ್ ಮತ್ತು 4,500 ಆರ್‌ಪಿಎಂನಲ್ಲಿ 8.7 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ನೊಂದಿಗೆ ನಾಲ್ಕು-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ನಲ್ಲಿ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರ್ಪಡಿಸಲಾಗಿದೆ. ಇದರಿಂದಾಗಿ ಈ ಹೊಸ ಬೈಕಿನ ಮೈಲೇಜ್ 15% ಸುಧಾರಣೆಯಾಗಿದೆ ಎಂದು ಟಿವಿಎಸ್ ಕಂಪನಿಯು ಹೇಳಿಕೊಂಡಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಹಿಂದಿನ ಬಿಎಸ್-4 ಟಿವಿಎಸ್ ರೇಡಿಯಾನ್ ಮಾದರಿಯ 109.7 ಸಿಸಿ ಎಂಜಿನ್ 7,000 ಆರ್‌ಪಿಎಂನಲ್ಲಿ 8.2 ಬಿಹೆಚ್‌ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಬಿಎಸ್-6 ರೇಡಿಯಾನ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಟಾಪ್-ಸ್ಪೆಕ್ ಮಾದರಿಯಾದ "ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇದರಲ್ಲಿ ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್ ವಿಶೇಷ ಆವೃತ್ತಿಯಾಗಿದೆ.

MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಹೊಸ ಟಿವಿಎಸ್ ರೇಡಿಯಾನ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.58,992 ಗಳಾಗಿದೆ. ಇನ್ನು ಕಮ್ಯೂಟರ್ ಬೈಕ್ ಆಫ್ ದಿ ಇಯರ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.64,992 ಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಹೊಸ ಟಿವಿಎಸ್ ರೇಡಿಯಾನ್ ಸ್ಟ್ಯಾಂಡರ್ಡ್ ರೂಪಾಂತರವು ಆರು ಬಣ್ಣಗಳಲ್ಲಿ ಲಭ್ಯವಿರಲಿದೆ. ಕಮ್ಯೂಟರ್ ಬೈಕ್ ಆಫ್ ದಿ ಇಯರ್ ಎಡಿಷನ್" ನಲ್ಲಿ ಫ್ರಂಟ್ ಡಿಸ್ಕ್ ಬ್ರೇಕ್, ಟ್ಯಾಂಕ್ ಪ್ಯಾಡ್, ಪೆಟ್ರೋಲ್ ಟ್ಯಾಂಕ್ ಕುಶನ್, ಪ್ರೀಮಿಯಂ ಸೀಟ್ ವಿನ್ಯಾಸ, ಕ್ರೋಮ್ ರೇರ್ ವ್ಯೂ ಮಿರರ್ ಮತ್ತು ಹೊಸ ಗ್ರಾಫಿಕ್ಸ್ ಅನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೇಲ್ ಲ್ಯಾಂಪ್‌ಗಳು ಮತ್ತು ಹಿಂಭಾಗದಲ್ಲಿ ಲಗೇಜ್ ರ್ಯಾಕ್ ಅನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್-ಶಾಕ್ಸ್ ಸೆಟಪ್ ಅನ್ನು ಒಳಗೊಂಡಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ರೇಡಿಯಾನ್

ಈ ಬೈಕಿನಲ್ಲಿ ಎರಡು ಟಯರ್‍ಗಳಿಗೆ ಡ್ರಮ್ ಬ್ರೇಕ್‍ ಗಳನ್ನು ಜೋಡಿಸಲಾಗಿದೆ. ಟಾಪ್ ಸ್ಪೆಕ್ ನಲ್ಲಿ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಸಿಂಕ್ರೊನೈಸ್ಡ್ ಬ್ರೇಕಿಂಗ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

Most Read Articles

Kannada
English summary
TVS Radeon BS6 Models Launched In India. Read in Kannada.
Story first published: Saturday, April 11, 2020, 12:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more