ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಕಾನ್ಸೆಪ್ಟ್ ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದವಾಗಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಅಧಿಕೃತವಾಗಿ ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಐಕ್ಯೂಬ್ ನಂತರ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಕ್ರಿಯಾನ್ ಕಾನ್ಸೆಪ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಟಿವಿಎಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನ ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್‌ಗಾಗಿ ರೆಟ್ರಾನ್ ಹೆಸರನ್ನು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿರುವ ಮಾಹಿತಿ ಲಭ್ಯವಾಗಿದೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಟಿವಿಎಸ್ ಹೊಸ ರೆಟ್ರಾನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ 450ಎಕ್ಸ್ ಮತ್ತು ಒಕಿನಾವ ಸ್ಕೂಟರ್ ಮಾದರಿಗಳಿಗೆ ಅತ್ಯುತ್ತಮ ಪೈಟೋಟಿ ನೀಡಲಿದ್ದು, ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಹೊಸ ರೆಟ್ರಾನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಟಿವಿಎಸ್ ಕಂಪನಿಯು 3kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಲಿದ್ದು, ಪ್ರತಿ ಚಾರ್ಜ್‌ಗೆ 80 ಕಿ.ಮೀ ಗೂ ಅಧಿಕ ಮೈಲೇಜ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹಿಂದಿರುಗಿಸಲಿದೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಇವಿ ಸ್ಕೂಟರ್ ಮಾದರಿಯಲ್ಲಿನ ಬ್ಯಾಟರಿ ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಮಟ್ಟದ ಚಾರ್ಜ್ ಮಾಡಲು ಸ್ಮಾರ್ಟ್ ಚಾರ್ಜಿಂಗ್ ಸಾಕೆಟ್ ಸೌಲಭ್ಯವನ್ನು ಪಡೆದುಕೊಂಡಿರಲಿದ್ದು, ಶೇ. 80 ರಷ್ಟು ಚಾರ್ಜಿಂಗ್ ಅನ್ನು ಕೇವಲ 1 ಗಂಟೆಯೊಳಗೆ ಮತ್ತು ಪೂರ್ಣಪ್ರಮಾಣದ ಚಾರ್ಜ್ ಮಾಡಲು ಮೂರು ಗಂಟೆ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡಿದ್ದಲ್ಲಿ ಕೇವಲ 90 ನಿಮಿಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಬಹುದಾಗಿದ್ದು, ಚಾರ್ಜಿಂಗ್ ಸೌಲಭ್ಯದ ಆಧಾರದ ಮೇಲೆ ಚಾರ್ಜಿಂಗ್ ಪೂರ್ಣಾವಧಿಯ ಲೆಕ್ಕಾಚಾರ ನಿರ್ಧಾರವಾಗುತ್ತದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಟಿವಿಎಸ್ ರೆಟ್ರಾನ್ ಕೂಡಾ ಪ್ರತಿಸ್ಪರ್ಧಿ ಸ್ಕೂಟರ್ ಮಾದರಿಗಳಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಕೇವಲ 5.1-ಸೆಕೆಂಡುಗಳಲ್ಲಿ ಸೊನ್ನೆಯಿಂದ 60 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿದೆ.

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಹಾಗೆಯೇ ಹೊಸ ಇವಿ ಸ್ಕೂಟರ್‌ನಲ್ಲಿ ಸ್ಮಾರ್ಟ್‌ಫೋನ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಲ್ಲ ಟಿಎಫ್‌ಟಿ ಸ್ಕ್ರೀನ್‌ ಜೋಡಿಸಲಾಗಿದ್ದು, ಇದರಲ್ಲಿ ಬ್ಯಾಟರಿ ಲಭ್ಯತೆಯ ಮಾಹಿತಿ, ವಿವಿಧ ರೈಡಿಂಗ್ ಮೋಡ್ ಮಾಹಿತಿ, ಪಾರ್ಕಿಂಗ್ ಮೋಡ್ ಮಾಹಿತಿ ಮತ್ತು ಜಿಯೋ ಫೆನ್ಸಿಂಗ್ ಮಾಹಿತಿ ಪ್ರದರ್ಶನ ಮಾಡುವ ಸೌಲಭ್ಯ ಹೊಂದಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ರೆಟ್ರಾನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಮಾಹಿತಿಗಳ ಪ್ರಕಾರ ಹೊಸ ಸ್ಕೂಟರ್ ಮಾದರಿಯು 2021ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಬೆಲೆಯು ಉತ್ಪಾದನಾ ಆವೃತ್ತಿಯಲ್ಲಿನ ಬ್ಯಾಟರಿ ಸೌಲಭ್ಯದ ಆಧಾರದ ಮೇಲೆ ನಿರ್ಧಾರವಾಗಲಿದೆ. ಪ್ರತಿಸ್ಪರ್ಧಿ ಇವಿ ಸ್ಕೂಟರ್ ಮಾದರಿಗಳು ಬ್ಯಾಟರಿ ಸೌಲಭ್ಯದ ಆಧಾರದ ಮೇಲೆ ರೂ. 1 ಲಕ್ಷದಿಂದ ರೂ. 1.40 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಟಿವಿಎಸ್ ಕ್ರಿಯಾನ್ ಕೂಡಾ ಆಕರ್ಷಕ ಬೆಲೆ ಪಡೆದುಕೊಳ್ಳಲಿದೆ.

Article Published On: Thursday, November 12, 2020, 14:45 [IST]
English summary
TVS Retron new trademark registered could be an electric scooter. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+