ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಟಿವಿಎಸ್ ಕಂಪನಿಯು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಈ ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್​ ಬೆಲೆಯನ್ನು ಹೆಚ್ಚಿಸಲಾಗಿದೆ.

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ರೂ.51,754 ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಬಿಎಸ್-6 ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಸ್ಟ್ಯಾಂಡರ್ಡ್, ಬಾಬೆಲಿಯಸ್ ಮತ್ತು ಮ್ಯಾಟ್ ಎಡಿಷನ್ ಎಂಬ 3 ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಎಲ್ಲಾ ರೂಪಾಂತರಗಳಿಗೆ ರೂ.800 ರವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಸ್ಕೂಟರ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವಾಗ ಫೀಚರ್ ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಈ ಸ್ಕೂಟರ್ ನಲ್ಲಿರುವ ಎಂಜಿನ್ ಸಿಸ್ಟಂನಲ್ಲಿ ಕಾರ್ಬ್ಯುರೇಟರ್‌ಗೆ ಫ್ಯೂಯಲ್ -ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದರಿಂದಾಗಿ ಈ ಎಂಜಿನ್ 6,500 ಆರ್‌ಪಿಎಂನಲ್ಲಿ 5 ಬಿಹೆಚ್‌ಪಿ ಪವರ್ ಹಾಗೂ 4,000 ಆರ್‌ಪಿಎಂನಲ್ಲಿ 5.8 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಜನಪ್ರಿಯ ಬಿಎಸ್-6 ಸ್ಪೋರ್ಟ್ ಬೈಕಿನ ಬೆಲೆ ಹೆಚ್ಚಿಸಿದ ಟಿವಿಎಸ್

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ 90 ಸಿಸಿ ಎಂಜಿನ್ ಹೊಂದಿರುವ ಏಕೈಕ ಸ್ಕೂಟರ್ ಆಗಿದೆ. ಟಿವಿಎಸ್‌ ಕಂಪನಿಯು ಇನ್ನೂ ಹಲವು ವರ್ಷಗಳವರೆಗೆ ಇದೇ ಎಂಜಿನ್ ಅನ್ನು ಈ ಸ್ಕೂಟರಿನಲ್ಲಿ ಮುಂದುವರೆಸುವ ಸಾಧ್ಯತೆಗಳಿವೆ.

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಬಹುತೇಕ ಸ್ಕೂಟರ್‌ಗಳು 110 ಸಿಸಿ ಹಾಗೂ 125 ಸಿಸಿಯ ಎಂಜಿನ್ ಗಳನ್ನು ಹೊಂದಿವೆ. ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಅನ್ನು ಬಿಎಸ್ 6 ಎಂಜಿನ್‌ನೊಂದಿಗೆ ಅಪ್ ಗ್ರೇಡ್ ಗೊಳಿಸಿರುವ ಕಾರಣಕ್ಕೆ ಹೆಚ್ಚು ಗ್ರಾಹಕರನ್ನು ಆಕರ್ಷಿಸಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟಿವಿಎಸ್ ಜೂಪಿಟರ್ ಸ್ಕೂಟರ್

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ನಲ್ಲಿ ಹಲವಾರು ಫೀಚರ್ ಗಳನ್ನು ಹೊಂದಿದೆ. ಈ ಸ್ಕೂಟರ್ ನಲ್ಲಿ ಮೊಬೈಲ್ ಚಾರ್ಜರ್ ಮತ್ತು ಸೈಡ್ ಸ್ಟ್ಯಾಂಡ್ ಅಲಾರಂ ಹೊಂದಿದೆ. ಈ ಸ್ಕೂಟರ್ ಸೀಟ್ 768 ಎಂಎಂ ಕಡಿಮೆ ಎತ್ತರವನ್ನು ಹೊಂದಿದೆ.

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಎರಡೂ ತುದಿಗಳಲ್ಲಿ 110 ಎಂಎಂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇನ್ನು ಈ ಸ್ಕೂಟರ್ 135 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ 4.2 ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಇದರೊಂದಿಗೆಟಿವಿಎಸ್ ಮೋಟಾರ್ ಕಂಪನಿಯು ಸದ್ದಿಲ್ಲದೆ ಬಿಎಸ್-6 ಜೂಪಿಟರ್ ಸ್ಕೂಟರ್ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಹೊಸ ಜೂಫಿಟರ್ ಸ್ಕೂಟರ್‌ನ ಎಲ್ಲಾ ರೂಪಾಂತರಗಳ ಬೆಲೆಗಳನ್ನು ರೂ.651ರವರೆಗೆ ಹೆಚ್ಚಿಸಲಾಗಿದೆ.

ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್‌, ಯಾವುದೇ ಸ್ಕೂಟರ್ ಗಳಿಗೆ ನೇರವಾದ ಪೈಪೋಟಿಯನ್ನು ನೀಡುವುದಿಲ್ಲ. ವಿಭಿನ್ನ ವಿನ್ಯಾದ ಮೂಲಕ ಈ ಸ್ಕೂಟರ್ ಹೆಚ್ಚಿನ ಗ್ರಾಹಕರನ್ನು ಸೆಳೆದಿದೆ. ಈ ಸ್ಕೂಟರ್ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಮಾರಾಟದ ಮೇಲೆ ಪಾರಿಣಮ ಬೀರುವ ಸಾಧ್ಯತೆಗಳಿದೆ.

Most Read Articles

Kannada
English summary
TVS Scooty Pep Plus BS6 gets its first price revision. Read In Kannada.
Story first published: Saturday, June 6, 2020, 16:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X