ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಟೆವಿಎಸ್ ಮೋಟಾರ್ ಕಂಪನಿಯು ತನ್ನ ಬಿಎಸ್-6 ಸ್ಪೋರ್ಟ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ಟಿವಿಎಸ್ ಸ್ಪೋರ್ಟ್ ಬೈಕಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.51,750 ಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹೊಸ ಟಿವಿಎಸ್ ಸ್ಪೋರ್ಟ್ ಬೈಕನ್ನು ಕಿಕ್-ಸ್ಟಾರ್ಟ್ ಮತ್ತು ಸೆಲ್ಫ್-ಸ್ಟಾರ್ಟ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಕಿಕ್ ಸ್ಟಾರ್ಟ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.51,750 ಗಳಾಗಿದ್ದರೆ, ಸೆಲ್ಫೆ-ಸ್ಟಾರ್ಟ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.58,925 ಗಳಾಗಿದೆ. ಹಿಂದಿನ ಬಿಎಸ್-4 ಕಿಕ್ ಸ್ಟಾರ್ ಬೆಲೆಯು ರೂ.48,117 ಗಳಾಗಿದ್ದರೆ, ಸೆಲ್ಫೆ ಸ್ಟಾರ್ಟ್ ಬೈಕಿನ ಬೆಲೆಯು ರೂ.50,908 ಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹೊಸ ಟಿವಿಎಸ್ ಸ್ಪೋರ್ಟ್ ಬೈಕಿನಲ್ಲಿ ಬಿಎಸ್-6, 109.7 ಸಿಸಿ, ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8.17 ಬಿಹೆಚ್‌ಪಿ ಪವರ್ ಮತ್ತು 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹೊಸ ಟಿವಿಎಸ್ ಸ್ಪೋರ್ಟ್ ಬೈಕಿನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಹೊಸ ಟಿವಿಎಸ್ ಸ್ಪೋರ್ಟ್ ಬೈಕು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಶೇ.15 ರಷ್ಟು ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹಿಂದಿನ ಬಿಎಸ್-4 ಟಿವಿಎಸ್ ಸ್ಪೋರ್ಟ್ ಬೈಕಿನಲ್ಲಿ 99.7 ಸಿಸಿ ಎಂಜಿನ್ ಅನ್ನು ಅಳವಡಿಸಿದ್ದರು. ಈ ಎಂಜಿನ್ 7.27 ಬಿಹೆಚ್‌ಪಿ ಪವರ್ ಮತ್ತು 7.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಬೈಕಿನಲ್ಲಿ ಹೊಸ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಟಿವಿಎಸ್ ಕಂಪನಿಯು ತನ್ನ ಹೊಸ ಸ್ಪೋರ್ಟ್ ಬೈಕಿನಲ್ಲಿ ಎಂಜಿನ್ ನಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ. ಆದರೆ ಈ ಬೈಕಿನ ವಿನ್ಯಾಸದಲ್ಲಿ ಅಥವಾ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹೊಸ ಟಿವಿಎಸ್ ಸ್ಪೋರ್ಟ್ ಬೈಕ್ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಇದು ವಾಲ್ಕೆನೊ ರೆಡ್, ಮೆರೆಕ್ಯೂರಿ ಗ್ರೇ, ಬ್ಲ್ಯಾಕ್ ಜೊತೆ ರೆಡ್, ರೆಡ್ ಮತ್ತು ವೈಟ್ ಜೊತೆ ಪರ್ಪಲ್ ಬಣ್ಣಗಳ ಆಯ್ಕೆಯಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಟಿವಿಎಸ್ ಮೋಟಾರ್ ಮತ್ತು ಅದರ ಅಂಗಸಂಸ್ಥೆಯಾದ ಸುಂದರಂ ಕ್ಲೈಟನ್ ಕಂಪನಿಯು ಕರೋನಾ ವಿರುದ್ಧ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.30 ಕೋಟಿ ಧನಸಹಾಯ ಘೋಷಣೆ ಮಾಡಿದ್ದು, ಇದರೊಂದಗೆ 10 ಲಕ್ಷ ಫೇಸ್ ಮಾಸ್ಕ್‌ಗಳನ್ನು ಸಿದ್ದಪಡಿಸುವುದಾಗಿ ಹೇಳಿಕೊಂಡಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಹೊಸ ಟಿವಿಎಸ್ ಸ್ಪೋರ್ಟ್ ಬೈಕಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಈ ಬೈಕಿನಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಐದು ಹಂತದ ಅಡ್ಜೆಸ್ಟಬಲ್ ರೇರ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿದೆ. ಇನ್ನು ಆಂಕರಿಂಗ್ ಪವರ್ 130 ಎಂಎಂ ಫ್ರಂಟ್ ಮತ್ತು 110 ಎಂಎಂ ರೇರ್ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Most Read Articles

Kannada
English summary
TVS Sport BS6 launched in India. Read in Kannada.
Story first published: Saturday, April 4, 2020, 19:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X