Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಏರಿಕೆಯತ್ತ ಮುಖ ಮಾಡಿದ ದ್ವಿಚಕ್ರ ವಾಹನ ಮಾರಾಟ
ಆಗಸ್ಟ್ ತಿಂಗಳಿನಲ್ಲಿ ದ್ವಿಚಕ್ರ ವಾಹನಗಳ ಮಾರಾಟವು ಏರಿಕೆಯನ್ನು ದಾಖಲಿಸಿದೆ. ಹಲವು ಕಂಪನಿಗಳು ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಮಾರಾಟವನ್ನು ದಾಖಲಿಸಿವೆ. ಆಗಸ್ಟ್ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್, ಹೋಂಡಾ ಮೋಟಾರ್‌ಸೈಕಲ್ ಹಾಗೂ ಟಿವಿಎಸ್ ಮೋಟಾರ್ ಕಂಪನಿಗಳ ಮಾರಾಟವು ಹೆಚ್ಚಾಗಿದೆ.

ಹೀರೋ ಮೋಟೊಕಾರ್ಪ್
ಹೀರೋ ಮೋಟೊಕಾರ್ಪ್ ಕಂಪನಿಯು ಸತತ ನಾಲ್ಕನೇ ತಿಂಗಳು ಮಾರಾಟದಲ್ಲಿ ಬೆಳವಣಿಗೆಯನ್ನು ದಾಖಲಿಸಿದೆ. ಕಂಪನಿಯು ಕಳೆದ ತಿಂಗಳು 5,84,456 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಈ ವರ್ಷದ ಮಾರಾಟದಲ್ಲಿ 12%ನಷ್ಟು ಏರಿಕೆಯಾಗಿದೆ. 2019ರ ಆಗಸ್ಟ್ ತಿಂಗಳಿನಲ್ಲಿ 5,24,003 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಕಂಪನಿಯು ಈ ವರ್ಷದ ಜುಲೈ ತಿಂಗಳಿನಲ್ಲಿ 5,14,509 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು.

ಕಂಪನಿಯು ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಕಂಪನಿಯ ಉತ್ಪಾದನಾ ಘಟಕಗಳು 100%ನಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲಿರುವ ಎಲ್ಲಾ ಶೋರೂಂಗಳು ತೆರೆದಿರುವ ಕಾರಣ ಸೆಪ್ಟೆಂಬರ್ ತಿಂಗಳ ಮಾರಾಟವು ಇನ್ನಷ್ಟು ಹೆಚ್ಚಾಗಬಹುದು.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಹೋಂಡಾ ಮೋಟಾರ್‌ಸೈಕಲ್ ಅಂಡ್ ಸ್ಕೂಟರ್
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಆಗಸ್ಟ್ ತಿಂಗಳಿನಲ್ಲಿ 4,43,969 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ದೇಶಿಯ ಮಾರುಕಟ್ಟೆಯಲ್ಲಿ 4,28,231 ಯುನಿಟ್‌ಗಳು ವಾಹನಗಳನ್ನು ಮಾರಾಟ ಮಾಡಲಾಗಿದ್ದರೆ, 15,738 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಜುಲೈ ತಿಂಗಳಿನಲ್ಲಿ 3,09,332 ಯುನಿಟ್ ಗಳನ್ನು ಮಾರಾಟ ಮಾಡಲಾಗಿತ್ತು. ಈ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 4 ಲಕ್ಷ ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ.

ಬಜಾಜ್ ಆಟೋ
ಬಜಾಜ್ ಆಟೋ ಕಂಪನಿಯು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ 3,25,300 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಈ ವರ್ಷದ ಆಗಸ್ಟ್ ನಲ್ಲಿ 3,21,058 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಈ ಮೂಲಕ ಮಾರಾಟವು ಕಳೆದ ವರ್ಷಕ್ಕಿಂತ 1%ನಷ್ಟು ಕುಸಿದಿದೆ. ಕಂಪನಿಯು ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 1,78,220 ಯುನಿಟ್‌ಗಳನ್ನು ಮಾರಾಟ ಮಾಡಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಟಿವಿಎಸ್ ಮೋಟಾರ್
ಟಿವಿಎಸ್ ಮೋಟಾರ್ ಕಂಪನಿಯು ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 2,77,226 ಯುನಿಟ್‌ಗಳನ್ನು ಮಾರಾಟ ಮಾಡಿದೆ. 2019ರ ಆಗಸ್ಟ್ ತಿಂಗಳಿನಲ್ಲಿ 2,75,851 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಕಂಪನಿಯು ಆಗಸ್ಟ್ ತಿಂಗಳಿನಲ್ಲಿ 58,888 ಯುನಿಟ್ ವಾಹನಗಳನ್ನು ರಫ್ತು ಮಾಡಿದೆ. ಈ ಪ್ರಮಾಣವು ಕಳೆದ ವರ್ಷದ ಆಗಸ್ಟ್ ತಿಂಗಳಿಗಿಂತ 4.5%ನಷ್ಟು ಹೆಚ್ಚಾಗಿದೆ.

ರಾಯಲ್ ಎನ್‌ಫೀಲ್ಡ್
ರಾಯಲ್ ಎನ್‌ಫೀಲ್ಡ್ ಆಗಸ್ಟ್ ತಿಂಗಳಿನಲ್ಲಿ 50,144 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಈ ಪ್ರಮಾಣವು ಕಳೆದ ವರ್ಷಕ್ಕಿಂತ 5%ನಷ್ಟು ಕಡಿಮೆಯಾಗಿದ್ದರೆ ಜುಲೈತಿಂಗಳಿಗಿಂತ 24%ನಷ್ಟು ಹೆಚ್ಚಾಗಿದೆ. ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಕಂಪನಿಯು ಹೊಸ ಬೈಕುಗಳನ್ನು ಬಿಡುಗಡೆಗೊಳಿಸುತ್ತಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಸುಜುಕಿ ಮೋಟಾರ್‌ಸೈಕಲ್
ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು 57,901 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ 62,785 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಮೂಲಕ ಕಳೆದ ವರ್ಷಕ್ಕಿಂತ ಈ ವರ್ಷದ ಮಾರಾಟ ಪ್ರಮಾಣವು 8%ನಷ್ಟು ಕಡಿಮೆಯಾಗಿದೆ.