ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

2020ರ ನವೆಂಬರ್ ತಿಂಗಳ ದ್ವಿಚಕ್ರ ವಾಹನಗಳ ಮಾರಾಟ ಪಟ್ಟಿ ಬಹಿರಂಗವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಳೆದ ತಿಂಗಳ ದ್ವಿಚಕ್ರ ವಾಹನಗಳ ಮಾರಾಟ ಪಟ್ಟಿಯಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

2020ರ ನವೆಂಬರ್ ತಿಂಗಳ ದ್ವಿಚಕ್ರ ವಾಹನಗಳ ಮಾರಾಟವನ್ನು ಹಿಂದಿನ ಅದೇ ತಿಂಗಳ ಅವಧಿಗೆ ಹೋಲಿಸಿದರೆ ಶೇ.13.4 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಳೆದ ವರ್ಷದ ನವೆಂಬರ್‌ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ 14,10,939 ಯುನಿಟ್‌ಗಳು ಮಾರಾಟವಾಗಿತ್ತು. 2020ರ ನವೆಂಬರ್ ತಿಂಗಳಲ್ಲಿ ದ್ವಿಚಕ್ರ ವಾಹನಗ 16,00,379 ಯುನಿಟ್‌ಗಳು ಮಾರಾಟವಾಗಿವೆ. ಈ ವರ್ಷ ಹಬ್ಬದ ಸೀಸನ್ ನಲ್ಲಿ ಉತ್ತಮ ಮಾರಾಟವನ್ನು ಕಂಡಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ದ್ವಿಚಕ್ರ ವಾಹನಗಳ 2019ರಲ್ಲಿ 5,05,994 ಯುನಿಟ್‌ಗಳು ಮಾರಾಟವಾಗಿತ್ತು. 2020ರ ನವೆಂಬರ್ ತಿಂಗಳಲ್ಲಿ ದ್ವಿಚಕ್ರ ವಾಹನಗಳ 5,75,957 ಯುನಿಟ್‌ಗಳನ್ನು ಹೀರೋ ಕಂಪನಿಯು ಮಾರಾಟಗೊಳಿಸಿವೆ. ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಈ ವರ್ಷದ ಅದೇ ಅವಧಿಯಲ್ಲಿ ಶೇ.13.8 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಹೋಂಡಾ ಮೋಟಾರ್‌ಸೈಕಲ್

2020ರ ನವೆಂಬರ್ ತಿಂಗಳಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.10.5 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಳೆದ ತಿಂಗಳು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 4,12,642 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಟಿವಿಎಸ್

2020ರ ನವೆಂಬರ್ ತಿಂಗಳಲ್ಲಿ ಟಿವಿಎಸ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.29 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಟಿವಿಎಸ್ ಕಂಪನಿಯು 2,47,789 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ. ಟಿವಿಎಸ್ ಕಂಪನಿಯು ಕಳೆದ ತಿಂಗಳ ಮಾರಾಟದಲ್ಲಿ ಮಾರುಕಟ್ಟೆ ಪಾಲನ್ನು ಶೇ.15.48 ರಷ್ಟು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಬಜಾಜ್ ಆಟೋ

2020ರ ನವೆಂಬರ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.6.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಬಜಾಜ್ ಆಟೋ ಕಂಪನಿಯು 1,88,196 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ರಾಯಲ್ ಎನ್‍ಫೀಲ್ಡ್

2020ರ ನವೆಂಬರ್ ತಿಂಗಳಲ್ಲಿ ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.1.4 ರಷ್ಟು ಕುಸಿತ ಕಂಡಿದೆ. ಕಳೆದ ತಿಂಗಳು ರಾಯಲ್ ಎನ್‍ಫೀಲ್ಡ್ ಕಂಪನಿಯು 59,084 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಸುಜುಕಿ ಮೋಟಾರ್‌ಸೈಕಲ್

2020ರ ನವೆಂಬರ್ ತಿಂಗಳಲ್ಲಿ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.5.6 ರಷ್ಟು ಕುಸಿತ ಕಂಡಿದೆ. ಕಳೆದ ತಿಂಗಳು ಸುಜುಕಿ ಮೋಟಾರ್‌ಸೈಕಲ್ ಕಂಪನಿಯು 57,429 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಯಮಹಾ

ಯಮಹಾ ಕಂಪನಿಯು 2020ರ ನವೆಂಬರ್ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.35.0 ರಷ್ಟು ಕುಸಿತ ಕಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಯಮಹಾ ಕಂಪನಿಯು 53,208 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಪಿಯಾಜಿಯೊ

ಪಿಯಾಜಿಯೊ ಕಂಪನಿಯು 2020ರ ನವೆಂಬರ್ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.5.6 ರಷ್ಟು ಕುಸಿತ ಕಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಪಿಯಾಜಿಯೊ ಕಂಪನಿಯು 5,798 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

ಕವಾಸಕಿ

2020ರ ನವೆಂಬರ್ ತಿಂಗಳಲ್ಲಿ ಕವಾಸಕಿ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.40.6 ರಷ್ಟು ಕುಸಿತ ಕಂಡಿದೆ. ಕಳೆದ ತಿಂಗಳು ಕವಾಸಕಿ ಕಂಪನಿಯು 145 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಹೀರೋ ಮೋಟೊಕಾರ್ಪ್

2020ರ ನವೆಂಬರ್ ತಿಂಗಳಲ್ಲಿ ಟ್ರಯಂಫ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ67.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಟ್ರಯಂಫ್ ಕಂಪನಿಯು 92 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ತಿಂಗಳು ಮಹೀಂದ್ರಾ ಕಂಪನಿಯು 34 ಮತ್ತು ಹಾರ್ಲೆರ್ ಡೇವಿಡ್ಸನ್ 5 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

Article Published On: Saturday, December 19, 2020, 20:33 [IST]
English summary
Two Wheeler Sales November 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+