Just In
- 12 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 11 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 11 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- News
ವಿಶ್ವದಾದ್ಯಂತ ಕೊರೊನಾಗೆ ಬಲಿಯಾದವರ ಸಂಖ್ಯೆ 2 ಕೋಟಿ ದಾಟಿದೆ!
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವೈರಸ್ ಭೀತಿ: ಸಂಕಷ್ಟದ ನಡುವೆಯೂ ದ್ವಿಚಕ್ರ ವಾಹನಗಳ ಖರೀದಿ ಭರಾಟೆ ಜೋರು..
ಮಹಾಮಾರಿ ಕರೋನಾ ವೈರಸ್ ಹರಡುವಿಕೆ ತಡೆಯಲು ವಿಧಿಸಲಾಗಿದ್ದ ಲಾಕ್ಡೌನ್ನಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದ್ದ ಹೊಸ ವಾಹನಗಳ ಮಾರಾಟವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಕೆ ಕಾಣುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ದ್ವಿಚಕ್ರ ವಾಹನಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದೆ.

ವೈರಸ್ ಭೀತಿಯಿಂದಾಗಿ ಮೆಟ್ರೋ ಮತ್ತು ಇತರೆ ಟ್ಯಾಕ್ಸಿ ಸೌಲಭ್ಯವು ಇದುವರೆಗೂ ಪುನಾರಂಭಗೊಳ್ಳದ ಕಾರಣ ಹಲವರು ಸ್ವಂತ ಬಳಕೆಯ ವಾಹನಗಳ ಮುಖ ಮಾಡುತ್ತಿದ್ದು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಕಳೆದ ಎರಡು ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕರೋನಾ ವೈರಸ್ ಪರಿಣಾಮ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ವಾಹನ ಮಾರಾಟವಿಲ್ಲದೆ ಕಂಗಾಲಾಗಿದ್ದ ಆಟೋ ಕಂಪನಿಗಳಿಗೆ ಇದೀಗ ಭಾರೀ ಬೇಡಿಕೆ ಹರಿದುಬರುತ್ತಿದೆ.

ಹೊಸ ವಾಹನಗಳ ನೋಂದಣಿ ಹೆಚ್ಚಳ ಕುರಿತಂತೆ ಮಾತನಾಡಿರುವ ಪುಣೆ ಆರ್ಟಿಓ ಅಧಿಕಾರಿಗಳು ಮೇ ಮತ್ತು ಜೂನ್ ಅವಧಿಗಿಂತಲೂ ಜುಲೈನಲ್ಲಿ ಎರಡು ಪಟ್ಟು ಹೆಚ್ಚು ದ್ವಿಚಕ್ರ ವಾಹನಗಳು ನೋಂದಣಿಯಾಗಿದ್ದು, ಅಗಸ್ಟ್ನಲ್ಲಿ ಇದು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಜೊತೆಗೆ ಹೊಸ ದ್ವಿಚಕ್ರ ವಾಹನ ಖರೀದಿಸುವ ಬಹುತೇಕ ಗ್ರಾಹಕರು ವೈರಸ್ ಭೀತಿಯಿಂದ ತಪ್ಪಿಸಿಕೊಳ್ಳಲು ಸ್ವಂತ ವಾಹನ ಖರೀದಿ ಮಾಡುತ್ತಿರುವುದಾಗಿ ವಾಹನ ಮಾರಾಟ ಕಂಪನಿಗಳ ಸರ್ವೆನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾರಿಗೆ ಸಾಲಭ್ಯಗಳ ಕೊರತೆ, ಮೆಟ್ರೋ ಸ್ಥಗಿತ ಮತ್ತು ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಿದರೆ ಕರೋನಾ ವೈರಸ್ ತಗುಲಬಹುದಾದ ಸಾಧ್ಯತೆಗಳಿವೆ ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗ್ರಾಹಕರ ಅಭಿಪ್ರಾಯ ಮೇರೆಗೆ ದ್ವಿಚಕ್ರ ವಾಹನಗಳ ಮಾರಾಟ ಮೇಲೆ ಹೆಚ್ಚು ಗಮನಹರಿಸಿರುವ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಮಾರಾಟ ಮಳಿಗೆಗಳ ಹೆಚ್ಚಿಸುತ್ತಿದ್ದು, ವಿವಿಧ ಮಾದರಿಯ ಹಣಕಾಸು ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.
MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ವೈರಸ್ ಭೀತಿ ನಡೆಯೂ ಹೋಂಡಾ ದ್ವಿಚಕ್ರ ವಾಹನಗಳು ಕೂಡಾ ಕಳೆದ ತಿಂಗಳು ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಜೂನ್ ಅವಧಿಯ ದ್ವಿಚಕ್ರ ವಾಹನ ಮಾರಾಟಗಿಂತ ಜುಲೈ ಅವಧಿಯಲ್ಲಿ 1 ಲಕ್ಷ ಅಧಿಕ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಜೂನ್ ಅವಧಿಯಲ್ಲಿ 2.02 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದ ಹೋಂಡಾ ಕಂಪನಿಯು ಜುಲೈ ಅವಧಿಯಲ್ಲಿ ಬರೋಬ್ಬರಿ 3.21 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ 1 ಲಕ್ಷ ಅಧಿಕ ವಾಹನಗಳು ಹೆಚ್ಚುವರಿಯಾಗಿ ಬೇಡಿಕೆ ಪಡೆದುಕೊಂಡಿದೆ.
MOST READ: ಬಜಾಜ್ ಅವೆಂಜರ್ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಆಟೋ ತಜ್ಞರ ಅಭಿಪ್ರಾಯದಂತೆ ಕರೋನಾ ವೈರಸ್ ಪರಿಣಾಮದಿಂದಾಗಿ ಸ್ವಂತ ವಾಹನಗಳ ಬಳಕೆಯು ದಿನದಿಂದಕ್ಕೆ ದ್ವಿಗುಣಗೊಳ್ಳುತ್ತಿದ್ದು, ಹೋಂಡಾ ಮಾತ್ರವಲ್ಲದೇ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಇದೀಗ ವಾಹನ ಮಾರಾಟದಲ್ಲಿ ಚೇತರಿಸಿಕೊಳ್ಳುತ್ತಿವೆ ಎನ್ನಬಹುದು.