2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಕರೋನಾ ವೈರಸ್ ಸೋಂಕಿನಿಂದ ಆಟೋಮೊಬೈಲ್ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಪರಿಣಾಮ ಬೀರಿದೆ. ಆಟೋಮೊಬೈಲ್ ಕ್ಷೇತ್ರಕ್ಕೆ ಸಾವಿರಾರು ಕೋಟಿ ನಷ್ಟಗಳಾಗಿದೆ. ಆದರೆ ಕೆಲವು ದಿನಗಳಿಂದ ಆಟೋಮೊಬೈಲ್ ಕ್ಷೇತ್ರ ನಿಧಾನವಾಗಿ ಚೇತರಿಕೆಯನ್ನು ಕಾಣುತ್ತಿದೆ.

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಹಲವಾರು ವಾಹನ ಉತ್ಪಾದನಾ ಕಂಪನಿಗಳು ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿದೆ. ಹಲವಾರು ಜನಪ್ರಿಯ ಕಂಪನಿಗಳು ತಮ್ಮ ಸರಣಿಯಲ್ಲಿರುವ ವಾಹನಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಇನ್ನು ಕೆಲವು ಕಂಪನಿಗಳು ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಬಹುನಿರೀಕ್ಷಿತ ಬೈಕುಗಳು ಬಿಡುಗಡೆಯಾಗಲಿದೆ. ಕೆಲವು ವರದಿಗಳ ಪ್ರಕಾರ ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕುಗಳ ಮಾಹಿತಿ ಇಲ್ಲಿದೆ.

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ ಹೊಸ ಪಾನಿಗಲೆ ವಿ2 ಬೈಕನ್ನು ಕರೋನಾ ಸೋಂಕಿನ ಭೀತಿಯಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ವಿಳಂಬ ಮಾಡಿದರು. ಇದಿಗ ಡುಕಾಟಿ ತನ್ನ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹೂಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ 955 ಸಿಸಿ ಸೂಪರ್‌ಕ್ವಾಡ್ರೊ ಎಲ್-ಟ್ವಿನ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 155 ಬಿಹೆಚ್‌ಪಿ ಮತ್ತು 104 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್

ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಿದ್ದವಾಗಿದೆ. ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್‌ಪಿಎಂನಲ್ಲಿ 116 ಬಿಹೆಚ್‌ಪಿ ಪವರ್ ಮತ್ತು 9,400 ಆರ್‌ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಹೊಸ ಮಹೀಂದ್ರಾ ಮೊಜೊ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಬಿಎಸ್-6 ಮಹೀಂದ್ರಾ ಮೊಜೊ 300

ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಮುಂದಿನ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಮಹೀಂದ್ರಾ ಬಿಎಸ್-6 ಮೊಜೊ 300 ಬೈಕ್ ಗಾರ್ನೆಟ್ ಬ್ಲ್ಯಾಕ್, ರೂಬಿ ರೆಡ್, ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ

2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಬೈಕುಗಳಿವು

ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200ಟಿ

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಎಕ್ಸ್‌ಪಲ್ಸ್ 200ಟಿ ಬೈಕನ್ನು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು. ಎಸ್ 6 ಮಾದರಿಯಲ್ಲಿ 199 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 17.7 ಬಿಹೆಚ್‌ಪಿ ಪವರ್ ಮತ್ತು 6400 ಆರ್‌ಪಿಎಂನಲ್ಲಿ 16.45 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Article Published On: Wednesday, July 29, 2020, 20:27 [IST]
English summary
Upcoming Bike Launches In August 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+