Just In
- 40 min ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 49 min ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 16 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 16 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Movies ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಕೆಟಿಎಂ ಡ್ಯೂಕ್ 250 ಬೈಕಿನ ವಿತರಣೆ ಆರಂಭ
ಕೆಟಿಎಂ ತನ್ನ 2020ರ ಡ್ಯೂಕ್ 250 ಬೈಕನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಕೆಟಿಎಂ ಕಂಪನಿಯು ಪ್ರಮಖ ನಗರಗಳಲ್ಲಿ ಈ ಹೊಸ ಡ್ಯೂಕ್ 250 ಬೈಕಿನ ವಿತರಣೆಯನ್ನು ಪ್ರಾರಂಭಿಸಿದೆ.
ಬಜಾಜ್ ಕಂಪನಿಯು 2020ರ ಕೆಟಿಎಂ ಡ್ಯೂಕ್ 250 ಬೈಕಿಗಾಗಿ ಡೀಲರ್ ಗಳು ಮತ್ತು ಆನ್ಲೈನ್ ಪೋರ್ಟಲ್ ಮೂಲಕವೂ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಹಿಂದಿನ ಕೆಟಿಎಂ 250 ಡ್ಯೂಕ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.2.05 ಲಕ್ಷಗಳಾಗಿದೆ. ಆದರೆ ಹೊಸ ಅಪ್ಡೇಟ್ಗಳೊಂದಿಗೆ ಇತ್ತೀಚೆಗೆ ಬಿಡುಗಡೆಯಾದ ಬಿಎಸ್-6 ಕೆಟಿಎಂ 250 ಡ್ಯೂಕ್ ಬೈಕಿನ ಬೆಲೆಯು ಸುಮಾರು ರೂ.4,000 ಗಳವರೆಗೆ ಹೆಚ್ಚಾಗಿದೆ. ಈ ಹೊಸ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.2.09 ಲಕ್ಷಗಳಾಗಿದೆ.
ಈ ಹೊಸ ಕೆಟಿಎಂ ಡ್ಯೂಕ್ 250 ಬೈಕಿನಲ್ಲಿ 390 ಡ್ಯೂಕ್ನಿಂದ ಎರವಲು ಪಡೆಯಲಾದ ಫುಲ್ ಎಲ್ಇಡಿ ಹೆಡ್ಲ್ಯಾಂಪ್ ಮತ್ತು ಸೂಪರ್ಮೊಟೊ ಮೋಡ್ ಅನ್ನು ಹೊಂದಿದೆ. ಇತರ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು
ಹೊಸ ಬೈಕಿನಲ್ಲಿ ಸ್ಟ್ಯಾಂಡರ್ಡ್ ಬಣ್ಣದ ಆಯ್ಕೆಯೊಂದಿಗೆ ಡಾರ್ಕ್ ಗಾಲವಾನೊ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳ ಆಯ್ಕೆ ನೀಡಲಾಗಿದೆ. ಹೊಸದಾದ ಬಾಡಿ ಗ್ರಾಫಿಕ್ಸ್ ವಿನ್ಯಾಸವು ಹೊಸ ಬೈಕಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡಿದೆ.
ಕೆಟಿಎಂ 250 ಡ್ಯೂಕ್ ಬೈಕ್ 248 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9,000 ಆರ್ಪಿಎಂನಲ್ಲಿ 30 ಬಿಎಚ್ಪಿ ಪವರ್ ಮತ್ತು 7,500 ಆರ್ಪಿಎಂನಲ್ಲಿ 24 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ ಸ್ಲಿಪ್ ಅಸಿಸ್ಟೆಡ್ ಕ್ಲಚ್ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್
ಇನ್ನು ಈ ಕೆಟಿಎಂ 250 ಡ್ಯೂಕ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಅಪ್ಸೈಡ್ ಡೌನ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸಸ್ಪೆಂಷನ್ ಹೊಂದಿದೆ.
ಬೈಕಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಬ್ರೇಕ್ಗಳಿಗಾಗಿ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಯುನಿಟ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್
ಇದರೊಂದಿಗೆ ಸ್ಟ್ಯಾಂಡರ್ಡ್ ಡ್ಯುಯಲ್ ಚಾನೆಲ್ ಎಬಿಎಸ್ ಸಿಸ್ಟಂ ಅನ್ನು ಅಳವಡಿಸಿ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಹೊಸ ಕೆಟಿಎಂ 250 ಡ್ಯೂಕ್ ಭಾರತದಲ್ಲಿ ಯಮಹಾ ಎಫ್ಜೆಡ್ಎಸ್ 25 ಮತ್ತು ಸುಜುಕಿ ಜಿಕ್ಸರ್ 250 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.
ಪ್ರತಿಸ್ಪರ್ಧಿಗಳ ಬೆಲೆಯನ್ನು ಹೋಲಿಸಿದರೆ ಕೆಟಿಎಂ 250 ಡ್ಯೂಕ್ ದುಬಾರಿಯಾಗಿದೆ. ಆದರೆ ಕೆಟಿಎಂ 250 ಡ್ಯೂಕ್ ಬೈಕ್ ಪ್ರತಿಸ್ಪರ್ಧಿ ಬೈಕುಗಳಿಗಿಂತ ಹೆಚ್ಚಿನ ಪವರ್ ಅನ್ನು ಉತ್ಪಾದಿಸುತ್ತದೆ. ಈ ಹೊಸ ಕೆಟಿಎಂ 250 ಡ್ಯೂಕ್ ಬೈಕ್ 169 ಕೆ.ಜಿ ತೂಕ ವನ್ನು ಹೊಂದಿದೆ.