ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

ಯಮಹಾ ಮೋಟಾರ್ ಕಂಪನಿ, ದೇಶಿಯ ಮಾರುಕಟ್ಟೆಯಲ್ಲಿರುವ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಯಮಹಾ ಕಂಪನಿಯು ಈಗ ಬೈಕ್‌ಗಳ ಜೊತೆಗೆ ಸ್ಕೂಟರ್‌ಗಳನ್ನು ಸಹ ಮಾರಾಟ ಮಾಡುತ್ತಿದೆ.

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

ಯಮಹಾ ತನ್ನ ಬೈಕ್‌ಗಳನ್ನು ಕಾಲಕಾಲಕ್ಕೆ ಅಪ್‌ಡೇಟ್ ಮಾಡುತ್ತಿದೆ. ಯಮಹಾ ಕಂಪನಿಯು ಮುಂಬರುವ ದಿನಗಳಲ್ಲಿ ನಾಲ್ಕು ಹೊಸ ದ್ವಿಚಕ್ರ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಯಮಹಾ ಕಂಪನಿಯು ಬಿಡುಗಡೆಗೊಳಿಸಲಿರುವ ಆ ನಾಲ್ಕು ಹೊಸ ದ್ವಿಚಕ್ರ ವಾಹನಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

1. ಯಮಹಾ ಎಕ್ಸ್‌ಎಸ್‌ಆರ್ 155

ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಅನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಥೈಲ್ಯಾಂಡ್‌ನಲ್ಲಿ ಬಿಡುಗಡೆಗೊಳಿಸಲಾಗಿತ್ತು. ಈ ಬೈಕ್ ದಕ್ಷಿಣ ಏಷ್ಯಾದ ಹಲವು ದೇಶಗಳಲ್ಲಿ ಮಾರಾಟವಾಗುತ್ತಿದೆ. ಯಮಹಾ ಶೀಘ್ರದಲ್ಲೇ ಈ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಿದೆ. ಈ ಬೈಕ್ ಭಾರತದ ಅತ್ಯುತ್ತಮ ರೆಟ್ರೊ ಬೈಕ್ ಆಗುವ ಸಾಧ್ಯತೆಗಳಿವೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

2. ಯಮಹಾ ವೈಝಡ್ಎಫ್ ಆರ್ 3

ಯಮಹಾ ವೈಝಡ್ಎಫ್ ಆರ್ 3 ಬೈಕ್ ಅನ್ನು ಬಿಎಸ್ 6 ನಿಯಮಗಳಿಗೆ ತಕ್ಕಂತೆ ಅಪ್‌ಡೇಟ್ ಮಾಡದ ಕಾರಣಕ್ಕೆ ಸ್ಥಗಿತಗೊಳಿಸಲಾಗಿದೆ.

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

ಆದರೆ ಹೊಸ ಬಿಎಸ್ 6 ಎಂಜಿನ್‌ನೊಂದಿಗೆ ಈ ಬೈಕ್‌ನ್ನು ಮುಂದಿನ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಬೈಕ್‌ನ ಪರ್ಫಾಮೆನ್ಸ್‌ನಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ. ವೈಝಡ್ಎಫ್ ಆರ್ 3 ಬೈಕ್, 320 ಸಿಸಿ ಲಿಕ್ವಿಡ್ ಕೂಲ್ಡ್ ಎಂಜಿನ್ ಹೊಂದಿರಲಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

3. ಯಮಹಾ ಎನ್‌ಮ್ಯಾಕ್ಸ್ 155

ಯಮಹಾ ಎನ್‌ಮ್ಯಾಕ್ಸ್ 155 ಭಾರತದಲ್ಲಿ ಬಿಡುಗಡೆಯಾಗಲಿರುವ ಮ್ಯಾಕ್ಸಿ ಸ್ಕೂಟರ್ ಆಗಿರಲಿದೆ. ಈ ಸ್ಕೂಟರ್ ಅನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

ಈ ಸ್ಕೂಟರ್ ಅನ್ನು ಹಲವು ಅಪ್‌ಡೇಟ್‌ಗಳೊಂದಿಗೆ ಏಪ್ರಿಲ್‌ ತಿಂಗಳಿನಲ್ಲಿ ಥೈಲ್ಯಾಂಡ್‌ನಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಸ್ಕೂಟರ್ ಅತಿ ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

MOST

READ: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಹೊಸ ನಾಲ್ಕು ದ್ವಿಚಕ್ರ ವಾಹನಗಳನ್ನು ಬಿಡುಗಡೆಗಡೆಗೊಳಿಸಲಿದೆ ಯಮಹಾ

4. ಯಮಹಾ 250 ಸಿಸಿ ಅಡ್ವೆಂಚರ್ ಬೈಕ್

ಭಾರತದಲ್ಲಿ ಅಡ್ವೆಂಚರ್ ಬೈಕ್‌ಗಳು ನಿಧಾನವಾಗಿ ಜನಪ್ರಿಯವಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಯಮಹಾ ಕಂಪನಿಯು 250 ಸಿಸಿ ಸೆಗ್‌ಮೆಂಟಿನಲ್ಲಿ ಅಡ್ವೆಂಚರ್ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಈ ಬೈಕ್‌‌ನಲ್ಲಿರುವ 249 ಸಿಸಿಯ ಏರ್-ಕೂಲ್ಡ್ ಎಂಜಿನ್ 20.8 ಬಿಹೆಚ್‌ಪಿ ಪವರ್ ಹಾಗೂ 20.1 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
Read more on ಯಮಹಾ yamaha
English summary
Yamaha launching four new two wheelers in Indian market. Read in Kannada.
Story first published: Monday, June 22, 2020, 20:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X