25 ಸಾವಿರ ಗಡಿ ದಾಟಿದ ಯಮಹಾ ಎಂಟಿ-15 ಬೈಕಿನ ಮಾರಾಟ
ಯಮಹಾ ಕಂಪನಿಯು ಎಂಟಿ-15 ಬೈಕ್ ಅನ್ನು ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಕೇವಲ 12 ತಿಂಗಳಲ್ಲಿ ಈ ಯಮಹಾ ಎಂಟಿ-15 ಬೈಕಿನ 25,000 ಯುನಿಟ್ ಗಳು ಮಾರಾಟವಾಗಿವೆ.

ಈ ಯಮಹಾ ಎಂಟಿ-15 ಬೈಕ್ ಬಿಡುಗಡೆಯಾದ ಮೊದಲ ತಿಂಗಳಲ್ಲಿ 5,203 ಯುನಿಟ್ ಗಳು ಮಾರಾಟವಾಗಿತ್ತು. ಕಳೆದ ಹಣಕಾಸು ವರ್ಷದಲ್ಲಿ ಯಮಹಾ ಎಂಟಿ-15 ಬೈಕಿನ ಒಟ್ಟು 20,417 ಯುನಿಟ್‌ಗಳು ಮಾರಾಟವಾಗಿವೆ. ಈ ಯಮಹಾ ಎಂಟಿ-15 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಇನ್ನು ಯಮಹಾ ಕಂಪನಿಯು ತನ್ನ ಬಿಎಸ್-6 ಎಂಟಿ-15 ಬೈಕ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಬೈಕ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಬೈಕಿನ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ನವೀಕರಿಸಲಾಗಿದೆ. ಈ ಎಂಜಿನ್ 18.5 ಬಿಹೆಚ್‍ಪಿ ಪವರ್ ಮತ್ತು 13.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಬೈಕಿನಲ್ಲಿ ಬಿಎಸ್-4 ಎಂಜಿನ್‍ಗಿಂತ 0.8 ಬಿಹೆಚ್‍ಪಿ ಪವರ್ ಅನ್ನು ಇಳಿಸಿದೆ. ಯಮಹಾ ಎಂಟಿ-15 ಬಿಎಸ್-4 ಮಾದರಿಯು 19.3 ಬಿಹೆಚ್‍ಪಿ ಪವರ್ ಮತ್ತು 14.7 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.

ಭಾರತೀಯ ಗ್ರಾಹಕರ ಬೇಡಿಕೆಗಳಿಗೆ ಅನುಗುಣವಾಗಿ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿರುವ ಯಮಹಾ ಸಂಸ್ಥೆಯು ಎಂಟಿ-15 ಬೈಕಿನಲ್ಲಿ ಹಲವು ಹೊಸ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿದ್ದು, 'ದ ಡಾರ್ಕ್ ಸೈಡ್ ಆಫ್ ಜಪಾನ್' ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಹೆಡ್‌ಲ್ಯಾಂಪ್ ಕ್ಲಸ್ಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್‌ಗಳು ಡೇ ಟೈಮ್ ರನ್ನಿಂಗ್ ಲೈಟ್‌ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಜೋಡಣೆ ಮಾಡಲಾಗಿದೆ.

ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಯಮಹಾ ಹೊಸ ಐಸ್ ಫ್ಲೂ ವರ್ಮಲಿಯನ್ ಬಣ್ಣದಲ್ಲಿ ಲಭ್ಯವಿದೆ. ಈ ಬಣ್ಣದ ಆಯ್ಕೆಯ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,39,400ಗಳಾಗಿದೆ. ಇನ್ನು ಮೆಟಾಲಿಕ್ ಬ್ಯಾಕ್ ಡಾರ್ಕ್ ಮ್ಯಾಟ್ ಬ್ಲೂ ಬಣ್ಣದ ಆಯ್ಕೆಯನ್ನು ಹೊಂದಿರುವ ಬೈಕಿಗೆ ರೂ.1,38,900 ಗಳಾಗಿದೆ. ಆಕರ್ಷಕ ಬೆಲೆಯನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

ಹೊಸ ಬಿಎಸ್-6 ಎಂಜಿನ್‍ನ ಯಮಹಾ ಎಂಟಿ-15 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದರಿಂದ ಈ ಬೈಕಿನ ಪರ್ಫಾಮೆನ್ಸ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರಿದ ಪರ್ಫಾಮೆನ್ಸ್ ಪ್ರಿಯರಿಗೆ ಈ ಬೈಕ್ ಒಂದು ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.


Click it and Unblock the Notifications







