Just In
- 33 min ago XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 2 hrs ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 15 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಬಿಎಸ್-6 ಯಮಹಾ ಎಂಟಿ-15 ಬೈಕ್
ಯಮಹಾ ಕಂಪನಿಯು ತನ್ನ ಹೊಸ ಎಂಟಿ-15 ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಯಮಹಾ ಎಂಟಿ-15 ಬಿಎಸ್-6 ಆವೃತ್ತಿಯಾಗಿದೆ. ಉತ್ತಮ ಪರ್ಫಾಮೆನ್ಸ್ ಬೈಕ್ ಆಗಿರುವ ಎಂಟಿ-15 ಯುವಕರಿಗೆ ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.
ಈ ಬೈಕ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ. ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಬೈಕಿನ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ನವೀಕರಿಸಲಾಗಿದೆ. ಈ ಎಂಜಿನ್ 18.5 ಬಿಹೆಚ್ಪಿ ಪವರ್ ಮತ್ತು 13.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಬೈಕಿನಲ್ಲಿ ಬಿಎಸ್-4 ಎಂಜಿನ್ಗಿಂತ 0.8 ಬಿಹೆಚ್ಪಿ ಪವರ್ ಅನ್ನು ಇಳಿಸಿದೆ. ಯಮಹಾ ಎಂಟಿ-15 ಬಿಎಸ್-4 ಮಾದರಿಯು 19.3 ಬಿಹೆಚ್ಪಿ ಪವರ್ ಮತ್ತು 14.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.
ಭಾರತೀಯ ಗ್ರಾಹಕರ ಬೇಡಿಕೆಗಳಿಗೆ ಅನುಗುಣವಾಗಿ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿರುವ ಯಮಹಾ ಸಂಸ್ಥೆಯು ಎಂಟಿ-15 ಬೈಕಿನಲ್ಲಿ ಹಲವು ಹೊಸ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿದ್ದು, 'ದ ಡಾರ್ಕ್ ಸೈಡ್ ಆಫ್ ಜಪಾನ್' ಮಾದರಿಯ ಹೆಡ್ಲ್ಯಾಂಪ್ ಸೌಲಭ್ಯವು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದೆ.
ಹೆಡ್ಲ್ಯಾಂಪ್ ಕ್ಲಸ್ಟರ್ನಲ್ಲಿ ಡ್ಯುಯಲ್ ಎಲ್ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್ಗಳು ಡೇ ಟೈಮ್ ರನ್ನಿಂಗ್ ಲೈಟ್ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಪ್ರಧಾನ ಎಲ್ಇಡಿ ಹೆಡ್ಲ್ಯಾಂಪ್ ಅನ್ನು ಜೋಡಣೆ ಮಾಡಲಾಗಿದೆ.
ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.
ಬಿಎಸ್-6 ಯಮಹಾ ಹೊಸ ಐಸ್ ಫ್ಲೂ ವರ್ಮಲಿಯನ್ ಬಣ್ಣದಲ್ಲಿ ಲಭ್ಯವಿದೆ. ಈ ಬಣ್ಣದ ಆಯ್ಕೆಯ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,39,400ಗಳಾಗಿದೆ.
ಇನ್ನೂ ಮೆಟಾಲಿಕ್ ಬ್ಯಾಕ್ ಡಾರ್ಕ್ ಮ್ಯಾಟ್ ಬ್ಲೂ ಬಣ್ಣದ ಆಯ್ಕೆಯನ್ನು ಹೊಂದಿರುವ ಬೈಕಿಗೆ ರೂ.1,38,900 ಗಳಾಗಿದೆ. ಆಕರ್ಷಕ ಬೆಲೆಯನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.
ಹೊಸ ಬಿಎಸ್-6 ಎಂಜಿನ್ನ ಯಮಹಾ ಎಂಟಿ-15 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದರಿಂದ ಈ ಬೈಕಿನ ಪರ್ಫಾಮೆನ್ಸ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರಿದ ಪರ್ಫಾಮೆನ್ಸ್ ಪ್ರಿಯರಿಗೆ ಈ ಬೈಕ್ ಒಂದು ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.