Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 9 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 9 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೀಲರ್ ಬಳಿ ತಲುಪಿದ ಬಿಎಸ್-6 ಯಮಹಾ ಎಂಟಿ-15 ಬೈಕ್
ಯಮಹಾ ಕಂಪನಿಯು ತನ್ನ ಹೊಸ ಎಂಟಿ-15 ಬೈಕ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಯಮಹಾ ಎಂಟಿ-15, ಬೈಕ್ ಬಿಎಸ್-6 ಆವೃತ್ತಿಯಾಗಿದೆ. ಉತ್ತಮ ಪರ್ಫಾಮೆನ್ಸ್ ಬೈಕ್ ಆಗಿರುವ ಎಂಟಿ-15 ಇದೀಗ ಡೀಲರ್ಗಳ ಬಳಿ ತಲುಪಿದೆ.
ಈ ಬೈಕ್ ಡೀಲರ್ಗಳ ಬಳಿ ತಲುಪಿರುವುದರಿಂದ ಶೀಘ್ರದಲ್ಲೇ ಈ ಬೈಕಿನ ವಿತರಣೆಯು ಪ್ರಾರಂಭವಾಗುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಬೈಕ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ. ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಬೈಕಿನ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ನವೀಕರಿಸಲಾಗಿದೆ. ಈ ಎಂಜಿನ್ 18.5 ಬಿಹೆಚ್ಪಿ ಪವರ್ ಮತ್ತು 13.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಬೈಕಿನಲ್ಲಿ ಬಿಎಸ್-4 ಎಂಜಿನ್ಗಿಂತ 0.8 ಬಿಹೆಚ್ಪಿ ಪವರ್ ಅನ್ನು ಇಳಿಸಿದೆ. ಯಮಹಾ ಎಂಟಿ-15 ಬಿಎಸ್-4 ಮಾದರಿಯು 19.3 ಬಿಹೆಚ್ಪಿ ಪವರ್ ಮತ್ತು 14.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.
ಭಾರತೀಯ ಗ್ರಾಹಕರ ಬೇಡಿಕೆಗಳಿಗೆ ಅನುಗುಣವಾಗಿ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿರುವ ಯಮಹಾ ಸಂಸ್ಥೆಯು ಎಂಟಿ-15 ಬೈಕಿನಲ್ಲಿ ಹಲವು ಹೊಸ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿದ್ದು, 'ದ ಡಾರ್ಕ್ ಸೈಡ್ ಆಫ್ ಜಪಾನ್' ಮಾದರಿಯ ಹೆಡ್ಲ್ಯಾಂಪ್ ಸೌಲಭ್ಯವು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದೆ.
ಹೆಡ್ಲ್ಯಾಂಪ್ ಕ್ಲಸ್ಟರ್ನಲ್ಲಿ ಡ್ಯುಯಲ್ ಎಲ್ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್ಗಳು ಡೇ ಟೈಮ್ ರನ್ನಿಂಗ್ ಲೈಟ್ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಎಲ್ಇಡಿ ಹೆಡ್ಲ್ಯಾಂಪ್ ಅನ್ನು ಜೋಡಣೆ ಮಾಡಲಾಗಿದೆ.
ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.
ಬಿಎಸ್-6 ಯಮಹಾ ಹೊಸ ಐಸ್ ಫ್ಲೂ ವರ್ಮಲಿಯನ್ ಬಣ್ಣದಲ್ಲಿ ಲಭ್ಯವಿದೆ. ಈ ಬಣ್ಣದ ಆಯ್ಕೆಯ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,39,400ಗಳಾಗಿದೆ.
ಇನ್ನೂ ಮೆಟಾಲಿಕ್ ಬ್ಯಾಕ್ ಡಾರ್ಕ್ ಮ್ಯಾಟ್ ಬ್ಲೂ ಬಣ್ಣದ ಆಯ್ಕೆಯನ್ನು ಹೊಂದಿರುವ ಬೈಕಿಗೆ ರೂ.1,38,900 ಗಳಾಗಿದೆ. ಆಕರ್ಷಕ ಬೆಲೆಯನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.
ಹೊಸ ಬಿಎಸ್-6 ಎಂಜಿನ್ನ ಯಮಹಾ ಎಂಟಿ-15 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದರಿಂದ ಈ ಬೈಕಿನ ಪರ್ಫಾಮೆನ್ಸ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರಿದ ಪರ್ಫಾಮೆನ್ಸ್ ಪ್ರಿಯರಿಗೆ ಈ ಬೈಕ್ ಒಂದು ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.