ಬಿಎಸ್-6 ಎಂಟಿ-15 ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಗಮನಾರ್ಹ ಬದಲಾವಣೆ..!
ಕಳೆದ ತಿಂಗಳು ಬಿಎಸ್-6 ಫಾಸಿನೊ 125 ಎಫ್‍ಐ ಮತ್ತು ರೇ ಜೆಡ್‍ಆರ್ 125 ಎಫ್‍ಐ ಸ್ಕೂಟರ್‍ಗಳನ್ನು ಬಿಡುಗಡೆ ಮಾಡಿದ್ದ ಯಮಹಾ ಸಂಸ್ಥೆಯು ಇದೀಗ ಎಂಟಿ-15 ನವೀಕೃತ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಹೊಸ ಬೈಕ್ ಮಾದರಿಯು ಭಾರೀ ಬದಲಾವಣೆಯೊಂದಿಗೆ ದುಬಾರಿ ಬೆಲೆ ಪಡೆದುಕೊಳ್ಳಲಿದೆ.

2019ರ ಮಾರ್ಚ್‌ನಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದ ಯಮಹಾ ಎಂಟಿ-15 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿತ್ತು. ಇದೀಗ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಗುಣವಾಗಿ ಹೊಸ ಎಂಜಿನ್ ಜೊತೆಗೆ ಡ್ಯುಯಲ್ ಟೋನ್, ರೆಡ್ ಅಲಾಯ್ ವೀಲ್ಹ್ ಆಯ್ಕೆಗಳನ್ನು ಪಡೆದುಕೊಳ್ಳಲಿದೆ.

ಇದೀಗ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಎಂಜಿನ್ ಮಾದರಿಯು 18.3-ಬಿಎಚ್‌ಪಿ, 14.1-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದೊಂದಿಗೆ ಎಂಜಿನ್ ಸಾಮಾರ್ಥ್ಯಕ್ಕೆ ತಕ್ಕಂತೆ ನಿರ್ದಿಷ್ಟ ಪ್ರಮಾಣದ ಪರ್ಫಾಮೆನ್ಸ್ ಪ್ರಮಾಣವನ್ನು ನಿಗದಿಮಾಡಲಾಗಿದೆ.

ಇದರ ಹೊರತಾಗಿ ಹೊಸ ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳನ್ನು ಮಾಡದ ಯಮಹಾ ಸಂಸ್ಥೆಯು ಬೈಕಿನ ಬೆಲೆಯಲ್ಲಿ ತುಸು ಏರಿಕೆ ಮಾಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಿಂತ ರೂ.7 ಸಾವಿರದಿಂದ ರೂ.9 ಸಾವಿರ ಹೆಚ್ಚಳ ಸಾಧ್ಯತೆಗಳಿವೆ.

ಇನ್ನು ವೈಜೆಡ್ಎಫ್-ಆರ್15 ಬೈಕಿಗಿಂತಲೂ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿ ಇದಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.1.36 ಲಕ್ಷಕ್ಕೆ ಮಾರಾಟವಾಗುತ್ತಿದೆ. ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಈ ಬೈಕ್ ಅನ್ನು ವಿಶೇಷವಾಗಿ ಸಿದ್ದಗೊಳಿಸಲಾಗಿದ್ದು, ಬಿಎಸ್-6 ಎಂಟಿ-15 ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಭಾರತೀಯ ಗ್ರಾಹಕರ ಬೇಡಿಕೆಗಳಿಗೆ ಅನುಗುಣವಾಗಿ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿರುವ ಯಮಹಾ ಸಂಸ್ಥೆಯು ಎಂಟಿ-15 ಬೈಕಿನಲ್ಲಿ ಹಲವು ಹೊಸ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿದ್ದು, 'ದ ಡಾರ್ಕ್ ಸೈಡ್ ಆಫ್ ಜಪಾನ್' ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದೆ.

ಹೆಡ್‌ಲ್ಯಾಂಪ್ ಕ್ಲಸ್ಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್‌ಗಳು ಡೇ ಟೈಮ್ ರನ್ನಿಂಗ್ ಲೈಟ್‌ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಪ್ರಧಾನ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಜೋಡಣೆ ಮಾಡಲಾಗಿದೆ.

ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.

ಇನ್ನುಳಿದಂತೆ ಆರ್15 ಬೈಕಿನಲ್ಲಿ ಅಳವಡಿಸಲಾಗಿರುವ ಬಹುತೇಕ ಸೌಲಭ್ಯಗಳನ್ನು ಹೊಸ ಎಂಟಿ-15 ಬೈಕಿನಲ್ಲಿ ನೋಡಬಹುದಾಗಿದ್ದು, ಬೆಲೆ ಇಳಿಕೆ ಮಾಡುವ ಸಂಬಂಧ ವಿದೇಶಿ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ಎಂಟಿ-15 ಬೈಕಿಗಿಂತಲೂ ಭಾರತದಲ್ಲಿ ಬಿಡುಗಡೆಯಾಗಿರುವ ಹೊಸ ಬೈಕಿನಲ್ಲಿ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಕಡಿತ ಮಾಡಲಾಗಿದೆ.

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್
ಬಿಎಸ್-4 ಎಂಟಿ-15 ಬೈಕ್ ಮಾದರಿಯಲ್ಲಿರುವ ಎಂಜಿನ್ ಅನ್ನು ಆರ್15 ಬೈಕಿನಲ್ಲೂ ನೋಡಬಹುದಾಗಿದ್ದು, ಲಿಕ್ಟಿಡ್ ಕೂಲ್ಡ್ 155 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ ವೆರಿವೆಬಲ್ ವೆವ್ ಟಿಮಿಂಗ್(ವಿವಿಟಿ) ತಂತ್ರಜ್ಞಾನ ಪ್ರೇರಣೆ ಹೊಂದಿದೆ. ಈ ಮೂಲಕ 19.3-ಬಿಎಚ್‌ಪಿ ಮತ್ತು 14.7-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ರಿಯರ್ ವೀಲ್ಹ್ ಸ್ಲಿಪ್ಲರ್ ಕ್ಲಚ್ ಸೌಲಭ್ಯ ಪಡೆದಿದೆ.

ಆದರೆ ಬಿಎಸ್-6 ಎಂಜಿನ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬೈಕಿಗಿಂತಲೂ ಕಡಿಮೆ ಪರ್ಫಾಮೆನ್ಸ್ ಹೊಂದಿದ್ದು, ಮಾಲಿನ್ಯ ಹೊರಸೂವಿಕೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗುತ್ತಿದೆ.
Source: Rushlane


Click it and Unblock the Notifications