ಲಾಕ್‌ಡೌನ್ ವಿನಾಯ್ತಿ: ಮಾರಾಟ ಮತ್ತು ಗ್ರಾಹಕ ಸೇವೆಗಳನ್ನು ಪುನಾಂಭಿಸಿದ ಯಮಹಾ
ಸದ್ಯ ಲಾಕ್‌ಡೌನ್ ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿರುವ ಕೇಂದ್ರ ಸರ್ಕಾರವು ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ವಾಹನ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಗೂ ಷರತ್ತುಬದ್ದ ಅವಕಾಶ ನೀಡಿದೆ.

ಕರೋನಾ ವೈರಸ್ ಮಟ್ಟಹಾಕಲು ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಯಮಹಾ ಕೂಡಾ ಇದೀಗ ಬೈಕ್ ಉತ್ಪಾದನೆ ಮತ್ತು ಮಾರಾಟಕ್ಕೆ ಮರುಚಾಲನೆ ನೀಡಿರುವುದಲ್ಲದೆ ಗ್ರಾಹಕ ಸೇವೆಗಳನ್ನು ಸಹ ಪುನಾರಂಭಿಸಿದೆ.

ಉತ್ಪಾದನಾ ಘಟಕಗಳಲ್ಲಿ ಮತ್ತು ಮಾರಾಟ ಮಳಿಗೆಗಳಲ್ಲಿ ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಹಲವಾರು ಸುರಕ್ಷಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಜೊತೆಗೆ ಉದ್ಯೋಗ ಸ್ಥಳಗಳಲ್ಲಿ ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದ್ದು, ವೈರಸ್ ತಡೆಗಾಗಿ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಕೈಗೊಂಡು ಗ್ರಾಹಕರ ಮನೆ ಬಾಗಿಲಿಗೆ ವಾಹನ ಉತ್ಪನ್ನಗಳನ್ನು ವಿತರಣೆ ಮಾಡಲಾಗುತ್ತಿದೆ.

ಹಾಗೆಯೇ ಗ್ರಾಹಕರ ಸೇವೆಗಳನ್ನು ಸಹ ಗ್ರಾಹಕರ ಆದ್ಯತೆ ಮೇರೆಗೆ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದ್ದು, ಅಧಿಕೃತ ಸರ್ವೀಸ್ ಸೆಂಟರ್‌ಗಳಿಗೂ ಭೇಟಿ ನೀಡಿದರೂ ಸಹ ಸುರಕ್ಷಾ ಕ್ರಮಗಳನ್ನು ಪಾಲಿಸಿದ ನಂತರವೇ ಒಳಗೆ ಅವಕಾಶ ನೀಡಲಾಗುತ್ತಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದ್ದು, ಸಂಕಷ್ಟದ ಸಮಯದಲ್ಲಿ ಗ್ರಾಹಕರನ್ನು ಸೆಳೆಯುವುದೇ ಒಂದು ಹರಸಾಹಸವಾಗಿದೆ.

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ. ಜೊತೆಗೆ ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡುತ್ತಿದ್ದಾರೆ.


Click it and Unblock the Notifications








