ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪಲ್ಸರ್ 220ಎಫ್ ಬೈಕನ್ನು ಬಿಡುಗಡೆಗೊಳಿಸಿದೆ. 2021ರ ಬಜಾಜ್ ಪಲ್ಸರ್ 220ಎಫ್ ಬೈಕ್ ಕೆಲವು ಹೊಸ ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಬಜಾಜ್ ಆಟೋ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಲ್ಸರ್ 220 ಬೈಕನ್ನು ಮೊದಲ ಬಾರಿಗೆ 2007ರಲ್ಲಿ ಬಿಡುಗಡೆಗೊಳಿಸಿತ್ತು. ನಂತರದ ವರ್ಷಗಳಲ್ಲಿ ಪಲ್ಸರ್ 220 ಬೈಕಿನಲ್ಲಿ ಕೆಲವು ಸಣ್ಣ ಪುಟ್ಟ ಅಪ್ಡೇಟ್ ಗಳನ್ನು ಮಾಡುತ್ತ ಬಂದಿದೆ. ಹಿಂದಿನ ಮಾದರಿಗೆ ಹೋಲಿಸಿದರೆ 2021ರ ಮಾದರಿಯಲ್ಲಿ ಕೆಲವೇ ಬದಲಾವಣೆಗಳಿವೆ, 2021ರ ಬಜಾಜ್ ಪಲ್ಸರ್ 220ಎಫ್ ಬೈಕಿನಲ್ಲಿ ಸ್ಪೀಡೋಮೀಟರ್ ವೈರ್ ಅನ್ನು ಈಗ ಹಿಂದಿನ ಚಕ್ರಕ್ಕೆ ಕನೆಕ್ಟ್ ಮಾಡಲಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಇನ್ನು 2021ರ ಬಜಾಜ್ ಪಲ್ಸರ್ 220ಎಫ್ ಬೈಕಿನಲ್ಲಿ ಪ್ರಮುಖ ಅಪ್ಡೇಟ್ ಅಂದರೆ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಆಗಿದೆ. ಇದು ಇನ್ನು ಸೆಮಿ ಡಿಜಿಟಲ್ ಕನ್ಸೋಲ್ ಆಗಿದ್ದು, ಇದು ಅನಲಾಗ್ ಟ್ಯಾಕೋಮೀಟರ್ ಮತ್ತು ಡಿಜಿಟಲ್ ರೀಡ್ ಔಟ್(ಬ್ಲೂ ಬ್ಯಾಕ್‌ಲೈಟಿಂಗ್) ನೊಂದಿಗೆ ಇತರ ಮಾಹಿತಿಗಳನ್ನು ಒದಗಿಸುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಇದೀಗ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಫ್ಯುಯಲ್ ಗೇಜ್ ಈಗ ಡಿಸ್ ಪ್ಲೇಯ ಕೆಳಗಿನ-ಬಲ ಮೂಲೆಯಲ್ಲಿದೆ, ಮತ್ತು ಟ್ರಿಪ್- ಮತ್ತು ಓಡೋಮೀಟರ್ ಅನ್ನು ಬಲಭಾಗಕ್ಕೆ ಸರಿಸಲಾಗಿದೆ. ಮಧ್ಯಭಾಗದಲ್ಲಿ ಸ್ಪೀಡೋಮೀಟರ್ ಒಳಗೊಂಡಿದೆ. ಇನ್ನು ಸೈಡ್-ಸ್ಟ್ಯಾಂಡ್ ವಾರ್ನಿಂಗ್ ಮೇಲ್ಭಾಗದಲ್ಲಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

2021ರ ಬಜಾಜ್ ಪಲ್ಸರ್ 220ಎಫ್ ಬೈಕಿನಲ್ಲಿ 220ಸಿಸಿ, ಏರ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 20.4 ಬಿಹೆಚ್‍ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 18.55 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಸೀಕ್ವೆನ್ಷಿಯಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಇನ್ನು ಈ ಹೊಸ ಬಜಾಜ್ ಪಲ್ಸರ್ 220ಎಫ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್ ನೈಟ್ರಾಕ್ಸ್ ಶಾಕ್ಪ್ ಅಬ್ಸಾರ್ಬರ್‌ಗಳನ್ನು ಒಳಗೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ಇನ್ನು ಪ್ರಮುಖವಾಗಿ ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 280 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಜ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಸಿಂಗಲ್-ಚಾನೆಲ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

2021ರ ಬಜಾಜ್ ಪಲ್ಸರ್ 220ಎಫ್ ಬೈಕ್ ಬ್ಲ್ಯಾಕ್ ರೆಡ್ ಮತ್ತು ಬ್ಲ್ಯಾಕ್ ಬ್ಲೂ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಪ್ರಸ್ತುತ ಮಾದರಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.25 ಲಕ್ಷಗಳಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್

ವರದಿಗಳ ಪ್ರಕಾರ, 2021ರ ಬಜಾಜ್ ಪಲ್ಸರ್ 220ಎಫ್ ಬೈಕ್ ಕೇವಲ 4-5 ಸೆಕೆಂಡುಗಳಲ್ಲಿ 0 ದಿಂದ 70 ಕಿ.ಮೀ ವೇಗವನ್ನು ಪಡೆಯುತ್ತದೆ. ಇನ್ನು ಹೊಸ ಬೈಕಿನ ವಿನ್ಯಾಸದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಿಲ್ಲ. ಇದು ತನ್ನ ಸ್ಪೋರ್ಟಿ ಪ್ರೊಫೈಲ್‌ನೊಂದಿಗೆ ಮುಂದುವರಿಯುತ್ತದೆ,

More from DriveSpark

Article Published On: Saturday, January 16, 2021, 15:08 [IST]
English summary
2021 Bajaj Pulsar 220F Launched With Updated Instrument Cluster. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+