2021ರ Harley Davidson Pan America 1250 ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ
ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ Harley Davidson ತನ್ನ ಹೊಸ Pan America 1250 ಬೈಕನ್ನು ಭಾರತದಲ್ಲಿ ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ 2021ರ Harley-Davidson Pan America 1250 ಜಾಗತಿಕವಾಗಿ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್ ಆಗಿದೆ.

2021ರ Harley-Davidson Pan America 1250 ಬೈಕಿನ ಮೊದಲ ಬ್ಯಾಚ್ ಸೋಲ್ಡ್ ಔಟ್ ಆಗಿದೆ. ಮೊದಲ ಬ್ಯಾಚ್‌ನಲ್ಲಿ ಇದ್ದ ಎಲ್ಲಾ ಯುನಿಟ್ ಗಳು ಕೂಡ ಮಾರಾಟವಾಗಿದೆ. ಆದರೆ ಕಂಪನಿಯು ಮೊದಲ ಬ್ಯಾಚ್‌ನಲ್ಲಿ ಎಷ್ಟು ಯುನಿಟ್ ಗಳಿತ್ತು ಎಂಬ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ, Harley-Davidson Pan America 1250 ಬೈಕಿನ ಎರಡನೇ ಬ್ಯಾಚ್‌ನಯುನಿಟ್ ಗಳಿಗಾಗಿ ಬುಕ್ಕಿಂಗ್ ಪ್ರಾರಂಬಿಸಿದ್ದಾರೆ. ಭಾರತದಲ್ಲಿ ಐಷಾರಾಮಿ 2021ರ Harley-Davidson Pan America 1250 ಬೈಕಿಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ ಎಂದು ಕಂಪನಿಯು ಹೇಳಿದೆ.

2021ರ Harley-Davidson Pan America 1250 ಬೈಕ್ ಭಾರತದಲ್ಲಿ Harley-Davidson ಕಂಪನಿಯು ಬಿಡುಗಡೆಗೊಳಿಸಿದ ಮೊದಲ ಅಡ್ವೆಂಚರ್ ಬೈಕ್ ಆಗಿದೆ. ಈ ಐಷಾರಾಮಿ ಅಡ್ವೆಂಚರ್ ಬೈಕಿನ ವಿತರಣೆಯನ್ನು ಕಳೆದ ತಿಂಗಳು ಪ್ರಾರಂಭಿಸಿದ್ದರ್ಯ್ ಭಾರತದಲ್ಲಿ ಈ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್ ಅನ್ನು ಮೊದಲ ವಿತರಣೆಯನ್ನು ಪಡೆದವರು ಲೇಡೀಸ್ ಆಫ್ ಹಾರ್ಲೆಯ ಸಹಾಯಕ ನಿರ್ದೇಶಕಿ ಅನುಶ್ರೀಯ ಗುಲಾಟಿ ಅವರು ಅಗಿದ್ದಾರೆ.

ಈ 2021ರ Harley-Davidson Pan America 1250 ಅಡ್ವೆಂಚರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.16.90 ಲಕ್ಷಗಳಾಗಿದೆ. ಈ ಅಡ್ವೆಂಚರ್ ಬೈಕ್ ಎರಡು ರೂಪಾಂತರಗಳಲ್ಲಿ ಭಾರತದಲ್ಲಿ ಲಭ್ಯವಿದೆ. ಇದರಲ್ಲಿ ಬೇಸ್ ಸ್ಪೆಕ್ ಬೆಲೆಯು ರೂ.16.90 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ಯಾನ್ ಅಮೇರಿಕಾ 1250 ಸ್ಪೆಷಲ್‌ಗೆ ರೂ.19.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಈ ಹೊಸ ಬೈಕಿನ ಎರಡು ಬೈಕಿನಲ್ಲಿ ವಿಭಿನ್ನವಾಗಿ ಫೀಚರ್ ಗಳನ್ನು ನೀಡಲಾಗಿದೆ. ಆದರೆ ಕೆಲವು ಫೀಚರ್ ಗಳು ಎರಡು ರೂಪಾಂತರಗಳಲ್ಲಿ ಒಂದೇ ರೀತಿಯಲ್ಲಿ ನೀಡಿದ್ದಾರೆ. ಇದು ಫುಲ್-ಎಲ್ಇಡಿ ಲೈಟಿಂಗ್, ಬ್ಲೂಟೂತ್-ಕನೆಕ್ಟಿವಿಟಿ ಹೊಂದಿರುವ 6.8-ಇಂಚಿನ ಕಲರ್ ಡಿಸ್ ಪ್ಲೇ ಮತ್ತು ಯುಎಸ್‌ಬಿ ಸಿ-ಟೈಪ್ ಔಟ್ ಲೈಟ್ ಅನ್ನು ಕೂಡ ಒಳಗೊಂಡಿದೆ.

ಇನ್ನು ಈ Pan America 1250 ಬೈಕ್ ಸಂಪೂರ್ಣವಾಗಿ ಹೊಸ ಬೈಕ್ ಆಗಿದ್ದು, ಇದನ್ನು ಸಂಪೂರ್ಣವಾಗಿ ಹೊಸದಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಇದರ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಡ್ವೆಂಚರ್ ಪ್ರಿಯರನ್ನು ಸೆಳೆಯುವಂತೆ ವಿನ್ಯಾಸದಿಂದ ಕೂಡಿದೆ.

2021ರ Harley-Davidson Pan America 1250 ಅಡ್ವೆಂಚರ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರದಲ್ಲಿ ಐದು ರೈಡಿಂಗ್ ಮೋಡ್ ಗಳನ್ನು ಪಡೆಯುತ್ತದೆ. ಇವುಗಳು ನಾಲ್ಕು ಪ್ರಿ-ಪ್ರೊಗಾಮ್ ಮಾಡಲಾದ ರೋಡ್, ಸ್ಪೋರ್ಟ್, ರೈನ್, ಆಫ್-ರೋಡ್ ಮತ್ತು ಒಂದು ಕಸ್ಟಮ್ ಮೋಡ್ ಅನ್ನು ರೈಡರ್ ತನ್ನ ಸ್ವಂತ ಆದ್ಯತೆಯ ಪ್ರಕಾರ ಹೊಂದಿಸಬಹುದು.

ಈ ಬೈಕಿನ ಟಾಪ್-ಸ್ಪೆಕ್ ಆದ ಸ್ಪೆಷಲ್ ರೂಪಾಂತರದಲ್ಲಿ ಕಸ್ಟಮೈಸ್ ಮಾಡಬಹುದಾದ ಎರಡು ಹೆಚ್ಚುವರಿ ಮೋಡ್‌ಗಳನ್ನು ಪಡೆಯುತ್ತದೆ. ಇನ್ನು ಮೆಕ್ಯಾನಿಕಲ್‌ಗಳ ವಿಷಯದಲ್ಲಿ ಎರಡು ರೂಪಾಂತರಗಳಲ್ಲಿ ಒಂದೇ ರೀತಿಯ 1,252 ಸಿಸಿ, ರೆವಲ್ಯೂಷನ್ ಮ್ಯಾಕ್ಸ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 9,000 ಆರ್‌ಪಿಎಂನಲ್ಲಿ 150 ಬಿಹೆಚ್‌ಪಿ ಪವರ್ ಮತ್ತು 6,750 ಆರ್‌ಪಿಎಂನಲ್ಲಿ 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ನೊಂದಿಗೆ ಅನ್ನು ಜೋಡಿಸಲಾಗಿದೆ.

ಹೊಸ Harley-Davidson Pan America 1250 ಸ್ಪೆಷಲ್ ರೂಪಾಂತರವು ಲೋಡ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಸ್ಟ್ಯಾಂಡರ್ಡ್ ಸೆಂಟರ್ ಸ್ಟ್ಯಾಂಡ್, ಹೊಂದಾಣಿಕೆ ಮಾಡಬಹುದಾದ ರಿಯರ್ ಬ್ರೇಕ್ ಪೆಡಲ್, ಅಲ್ಯೂಮಿನಿಯಂ ಸ್ಕಿಡ್-ಪ್ಲೇಟ್, ಸ್ಟೀರಿಂಗ್ ಡ್ಯಾಂಪರ್ ಮತ್ತು ಅಡಾಪ್ಟಿವ್ ರೈಡ್ ಎಂಬ ಫೀಚರ್ ಗಳನ್ನು ಹೊಂದಿವೆ.

ಇನ್ನು Harley-Davidson ಕಂಪನಿಯು ತನ್ನ ಹೊಸ ಸ್ಪೋರ್ಟ್‌ಸ್ಟರ್ ಎಸ್ ಬೈಕನ್ನು ಇತ್ತೀಚೆಗೆ ಜಾಗತಿಕವಾಗಿ ಅನಾವರಣಗೊಳಿಸಿತು. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹಾರ್ಲೆ-ಡೇವಿಡ್ಸನ್ ತನ್ನ ಭಾರತೀಯ ವೆಬ್‌ಸೈಟ್‌ನಲ್ಲಿ ಹೊಸ ಸ್ಪೋರ್ಟ್‌ಸರ್ ಎಸ್ ಬೈಕಿನ ಹೆಸರನ್ನು ಪಟ್ಟಿ ಮಾಡಿದೆ. ಈ ಬಹುನಿರೀಕ್ಷಿತ ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಈ ಹೊಸ ಸ್ಪೋರ್ಟ್‌ಸರ್ ಎಸ್ ಬೈಕ್ ಹಾರ್ಲಿಯ ರೆವಲ್ಯೂಷನ್ ಮ್ಯಾಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ 227.7 ಕೆಜಿ ತೂಕವನ್ನು ಹೊಂದಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನಲ್ಲಿ 1250 ಸಿಸಿ ರೆವಲ್ಯೂಷನ್ ಮ್ಯಾಕ್ಸ್ 1250 ಟಿ ವಿ-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 121 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಐಷಾರಾಮಿ Harley-Davidson Pan America 1250 ಅಡ್ವೆಂಚರ್ ಬೈಕಿನಲ್ಲಿ ಸೆಮಿ-ಆಕ್ಟಿವ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. Pan America 1250 ಮಾದರಿಯು ಹಾರ್ಲೆ-ಡೇವಿಡ್ಸನ್‌ನಿಂದ ಬಂದ ಮೊದಲ ಅಡ್ವೆಂಚರ್ ಬೈಕ್ ಆಗಿದೆ. ಈ ಬೈಕ್ ಅಗ್ರೇಸಿವ್ ಮತ್ತು ರಗಡ್ ಲುಕ್ ಅನ್ನು ಹೊಂದಿರುವ ಫ್ಯೂಚರಿಸ್ಟಿಕ್ ಫ್ರಂಟ್ ಎಂಡ್ ಅನ್ನು ಹೊಂದಿದೆ. ಐಷಾರಾಮಿ ಅಡ್ವೆಂಚರ್ ಬೈಕ್ ಪ್ರಿಯರಿ ಇದುಗೆ ಉತ್ತಮ ಆಯ್ಕೆಯಾಗಿದೆ.


Click it and Unblock the Notifications








